Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್‌ 3ನೇ ಅಲೆ ನಿಭಾಯಿಸಲು ತಜ್ಞರ...

ಕೋವಿಡ್‌ 3ನೇ ಅಲೆ ನಿಭಾಯಿಸಲು ತಜ್ಞರ ಸಮಿತಿ ರಚನೆ: ಸಿಎಂ ಬಿಎಸ್‌ವೈ ನೇತೃತ್ವದ ಸಭೆಯಲ್ಲಿ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ1 May 2021 9:20 PM IST
share
ಕೋವಿಡ್‌ 3ನೇ ಅಲೆ ನಿಭಾಯಿಸಲು ತಜ್ಞರ ಸಮಿತಿ ರಚನೆ: ಸಿಎಂ ಬಿಎಸ್‌ವೈ ನೇತೃತ್ವದ ಸಭೆಯಲ್ಲಿ ನಿರ್ಧಾರ

ಬೆಂಗಳೂರು, ಮೇ 1: ಕೊರೋನ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಪ್ರಮುಖ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಮಾಲೋಚನೆ ಸಭೆ ನಡೆಯಿತು.

ಸಭೆಯಲ್ಲಿ ಚರ್ಚಿಸಿದ ವಿಷಯಗಳು: 

► ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಬಳಸಿಕೊಂಡು ಹೋಟೆಲ್ ಗಳನ್ನು ಆಕ್ಸಿಜನೇಟೆಡ್ ಬೆಡ್ ಮಾದರಿಯ ಸ್ಟೆಪ್ ಡೌನ್ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು.  

► ಸೆಂಟ್ರಲೈಜ್ಡ್ ಆಕ್ಸಿಜನೇಷನ್ ವ್ಯವಸ್ಥೆ ಇರುವ ಬೆಡ್ ಗಳನ್ನು ಐಸಿಯು ಬೆಡ್ ಗಳನ್ನಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು. 

► ವೈದ್ಯಕೀಯ ಮಾನವ ಸಂಪನ್ಮೂಲ ಕೊರತೆ ನೀಗಿಸಲು ಅಂತಿಮ ವರ್ಷದ ವೈದ್ಯಕೀಯ ಮತ್ತು ನರ್ಸಿಂಗ್ ವಿದ್ಯಾರ್ಥಿಗಳನ್ನು ಗ್ರೇಸ್ ಅಂಕಗಳನ್ನು ನೀಡಿ ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಕ್ರಮ ಕೈಗೊಳ್ಳುವುದು. ಇದಕ್ಕೆ ಸಹಕಾರಿಯಾಗಿ ಅಂತಿಮ ವರ್ಷದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು ಮತ್ತು ಸೂಕ್ತ ಇನ್ಸೆಂಟಿವ್ ನೀಡಲು ಕ್ರಮ ಕೈಗೊಳ್ಳುವುದು.   

► ನರ್ಸಿಂಗ್ ಕೋರ್ಸ್ ಗಳ, ಫಾರ್ಮಸಿ ಕೋರ್ಸ್ ಗಳ, ಫಿಜಿಯೋಥೆರಪಿ ಕೋರ್ಸ್ ಗಳ , ಆಯುಷ್ ವೈದ್ಯ ಕೋರ್ಸ್ ಗಳ , ದಂತ ವೈದ್ಯಕೀಯ ಕೋರ್ಸ್ ಗಳ ಹಾಗೂ ಹಾಸ್ಪಿಟಲ್ ಮ್ಯಾನೇಜ್ಮೆಂಟ್ ಕೋರ್ಸ್ ಗಳ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳುವುದು.   

► ವಿದೇಶಗಳಲ್ಲಿ ವೈದ್ಯಕೀಯ ಪದವಿ ಮುಗಿಸಿರುವ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಳ್ಳಲು ಅನುಕೂಲವಾಗುವಂತೆ ಕರ್ನಾಟಕ ಮೆಡಿಕಲ್ ಕೌನ್ಸಿಲ್ ನಲ್ಲಿ ನೋಂದಣಿ ಮಾಡಿಸಿ ಅವರನ್ನು ಬಳಸಿಕೊಳ್ಳಲು ಕ್ರಮ ಕೈಗೊಳ್ಳಲು ಪರಿಶೀಲಿಸುದು.

► ಆಸ್ಪತ್ರೆಗಳಲ್ಲಿ ಚಿಕಿತ್ಸೆ ಅಗತ್ಯವಿಲ್ಲದ ರೋಗ ಲಕ್ಷಣರಹಿತ ಸೋಂಕಿತರು ಆಸ್ಪತ್ರೆಗಳಲ್ಲಿ ದಾಖಲಾಗುತ್ತಿದ್ದು, ಇದನ್ನು ಕಡಿಮೆಗೊಳಿಸಲು ಟ್ರಯಾಜಿಂಗ್ ಮಾಡಿ ಅಗತ್ಯವಿದ್ದವರನ್ನು ಮಾತ್ರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿ ಉಳಿದ ಲಕ್ಷಣ ರಹಿತ ಸೋಂಕಿತರನ್ನು ಮನೆಯಲ್ಲಿಯೇ ಐಸೋಲೇಷನ್ ಮಾಡಿ ಚಿಕಿತ್ಸೆ ಮುಂದುವರಿಸಲು ಖಾಸಗಿ ಆಸ್ಪತ್ರೆಗಳ ಸಹಭಾಗಿತ್ವದಲ್ಲಿ ಟೆಲಿ ಮೆಡಿಸಿನ್ ಸೌಲಭ್ಯವನ್ನು ಬಲಪಡಿಸುವುದು.  

► ವೈದ್ಯಕೀಯ ಕಾಲೇಜುಗಳ ಹಾಸ್ಟೇಲ್ ಗಳ ಸಾಮಾನ್ಯ ಬೆಡ್ ಗಳನ್ನು ಆಕ್ಸಿಜನೇಟೆಡ್ ಬೆಡ್ ಗಳಾಗಿ ಪರಿವರ್ತಿಸಲು ಕ್ರಮ ಕೈಗೊಳ್ಳುವುದು. 

► ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಆಕ್ಸಿಜನ್ ಜನರೇಷನ್ ಪ್ಲಾಂಟ್ ಅಳವಡಿಸಲು ಸರ್ಕಾರದಿಂದ ಧನ ಸಹಾಯ ನೀಡುವುದು. 

► ಕಡಿಮೆ ಕಾರ್ಯಭಾರವಿರುವ ವೈದ್ಯಕೀಯ ಸಿಬ್ಬಂದಿಗಳನ್ನು ಗುರುತಿಸಿ ಅವರುಗಳನ್ನು ಪರಿಪೂರ್ಣವಾಗಿ ಉಪಯೋಗಿಸಿಕೊಳ್ಳಲು ಕ್ರಮ ಕೈಗೊಳ್ಳುವುದು.  

► ರೆಮ್‍ಡೆಸಿವಿರ್ ಮತ್ತು ಆಕ್ಸಿಜನ್ ಅನಗತ್ಯವಾಗಿ ಬಳಕೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸೂಕ್ತ ಆಡಿಟ್ ವ್ಯವಸ್ಥೆ ರೂಪಿಸುವುದು.  

► 3ನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಲು ಒಂದು ತಜ್ಞರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಯಿತು.  

► ಕೋವಿಡ್ ಲಸಿಕೆಯನ್ನು ಹಾಕುವುದನ್ನು ವೇಗವರ್ಧನಗೊಳಿಸುವುದು. 

► ಕೋವಿಡ್ ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರಿಗೆ ಈಗ ನೀಡುತ್ತಿರುವ ಇನ್ಸೆಂಟಿವನ್ನು ಹೆಚ್ಚಿಸಲು ನಿರ್ಧರಿಸಲಾಯಿತು.  

► ಕೋವಿಡ್ ಕರ್ತವ್ಯದಲ್ಲಿ ತೊಡಗಿರುವ ವೈದ್ಯರು/ವೈದ್ಯಕೀಯ ಸಿಬ್ಬಂದಿಗಳು ಸೋಂಕಿತರಾದಲ್ಲಿ ಅವರಿಗೆ ಸರ್ಕಾರಿ ವೆಚ್ಚದಲ್ಲಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳುವುದು. 

► ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳನ್ನು ಕೋವಿಡ್ ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅವರಿಗೆ ಆದ್ಯತೆಯ ಮೇಲೆ ಕೋವಿಡ್ ಲಸಿಕೆ ನೀಡಲು ಕ್ರಮ ಕೈಗೊಳ್ಳುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X