Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಸಂಕಷ್ಟದಿಂದ ಹೊರಬರಲು...

ಕೋವಿಡ್ ಸಂಕಷ್ಟದಿಂದ ಹೊರಬರಲು ರಾಜ್ಯದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ: ಡಿಸಿಎಂ ಅಶ್ವತ್ಥನಾರಾಯಣ

ಸಾಗರೋತ್ತರ ಕನ್ನಡಿಗರೊಂದಿಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ1 May 2021 10:59 PM IST
share
ಕೋವಿಡ್ ಸಂಕಷ್ಟದಿಂದ ಹೊರಬರಲು ರಾಜ್ಯದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ಮೇ 1: ಕೋವಿಡ್ ಸೇರಿದಂತೆ ಇತರ ಸಮಸ್ಯೆಗಳಿಂದ ನಿಂದ ಉಂಟಾಗಿರುವ ಉದ್ಯೋಗ ಮತ್ತು ಆರ್ಥಿಕ ನಷ್ಟವನ್ನು ಭರ್ತಿ ಮಾಡಲು ಇನ್ನು ಕೆಲ ವರ್ಷಗಳಲ್ಲಿ ಹಂತ ಹಂತವಾಗಿ ಒಂದು ಕೋಟಿ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. 

ಸ್ವ ಉದ್ಯೋಗಕ್ಕೆ ಶಕ್ತಿ ನೀಡುವ ಹಿನ್ನೆಲೆಯಲ್ಲಿ ಶನಿವಾರ ಸಾಗರೋತ್ತರ ಕನ್ನಡಿಗರೊಂದಿಗೆ ʼಕರಕುಶಲ ಕಾಯಕ, ಕನ್ನಡ ಮತ್ತು ನಾವುʼ ಎಂಬ ವಿಷಯದ ಕುರಿತು ಸಂವಾದ ನಡೆಸಿದ ಅವರು, ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತಾ ಇಲಾಖೆಗಳ ಮೂಲಕ ಇಷ್ಟು ಪ್ರಮಾಣದ ಉದ್ಯೋಗಾವಕಾಶಗಳನ್ನು ನಗರ, ಗ್ರಾಮೀಣ ಪ್ರದೇಶದಲ್ಲಿ ಸೃಷ್ಟಿ ಮಾಡುವ ಗುರಿ ಹೊಂದಲಾಗಿದೆ ಎಂದರು. 

ಈ ನಿಟ್ಟಿನಲ್ಲಿ ಯುವಜನರಿಗೆ ಕೌಶಲ್ಯ ತರಬೇತಿ ಕೊಡುವುದರ ಜತೆಗೆ, ಈಗಾಗಲೇ ಈ ವಲಯದಲ್ಲಿ ತೊಡಗಿಸಿಕೊಂಡಿರುವವರ ಕೌಶಲತೆಯನ್ನು ಉತ್ತಮಪಡಿಸುವ ಕೆಲಸವನ್ನೂ ಸರಕಾರ ಕೈಗೆತ್ತಿಕೊಂಡಿದೆ. ಅಲ್ಲದೆ, ಕರಕುಶಲ ವಲಯವೂ ಸೇರಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆಯ ದಾರಿಯಲ್ಲಿ ಸಾಗುತ್ತಿರುವವರಿಗೆ ತಾಂತ್ರಿಕವಾಗಿ ಬಲ ತುಂಬುದು ಹಾಗೂ ಆರ್ಥಿಕ, ಮಾರುಕಟ್ಟೆ ವಿಸ್ತಾರಕ್ಕೆ ಸಾಥ್ ಕೊಡುವುದು ಮಾಡಲಾಗುತ್ತಿದೆ. ಕ್ರಮೇಣವಾಗಿ ಅವರ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗುವಂತೆ ಕ್ರಮ ವಹಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಹೇಳಿದರು. 

ಮಾರುಕಟ್ಟೆ ಮುಖ್ಯವಾಹಿನಿಗೆ: ರಾಜ್ಯದ ಉದ್ದಗಲಕ್ಕೂ ಕಾರ್ಯ ನಿರತವಾಗಿರುವ ಪ್ರತಿ ಸಣ್ಣ ವ್ಯಾಪಾರಿಯನ್ನೂ ಇ-ಕಾಮರ್ಸ್ ಮೂಲಕ ಮಾರುಕಟ್ಟೆಯ ಮುಖ್ಯವಾಹಿನಿಗೆ ತರುವ ಕೆಲಸವನ್ನು ಸರಕಾರ ಮಾಡುತ್ತಿದೆ. ಪ್ಲಿಪ್ಕಾರ್ಟ್, ಅಮೆಜಾನ್ ನಂತಹ ಇ-ಕಾಮರ್ಸ್ ಪೋರ್ಟಲ್ ಗಳ ಮೂಲಕ ಅವರು ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡುವ ರೀತಿಯಲ್ಲಿ ಅನುಕೂಲ ಮಾಡಿಕೊಡಲಾಗಿದೆ. ಈಗಾಗಲೇ ಇಂಥ ಅನೇಕ ದೈತ್ಯ ಕಂಪನಿಗಳ ಸರಕಾರ ಒಡಂಬಡಿಕೆ ಮಾಡಿಕೊಂಡಿದೆ ಎಂದು ಅವರು ಹೇಳಿದರು.

ಕರಕುಶಲ ಹಾಗೂ ಗ್ರಾಮೀಣ ಪ್ರದೇಶದಲ್ಲಿ ತಯಾರಾಗುವ ಅಥವಾ ಬೆಳೆಯುವ ಕೃಷಿ ಉತ್ಪನ್ನಗಳನ್ನು ಜಾಗತಿಕ ಮಟ್ಟದಲ್ಲಿ ಮಾರಾಟ ಮಾಡುವುದಕ್ಕೆ ಪೂರಕವಾಗುವಂತೆ ಕೇಂದ್ರ ಸರಕಾರವು ʼಒಂದು ಜಿಲ್ಲೆ-ಒಂದು ಉತ್ಪನ್ನʼ ಎಂಬ ಯೋಜನೆಯನ್ನು ಪರಿಚಯಿಸಿದೆ. ಆ ಯೋಜನೆಯ ಮೂಲಕ ನಮ್ಮ ರಾಜ್ಯದಲ್ಲಿ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಸಲಾಗುತ್ತಿದೆ. ಇದರ ವ್ಯಾಪ್ತಿಗೆ ಚನ್ನಪಟ್ಟಣದ ಗೊಂಬೆಗಳು ಸೇರಿದಂತೆ ರಾಜ್ಯದ ವಿವಿಧೆಡೆ ತಯಾರಾಗುತ್ತಿರುವ ಉತ್ಪನ್ನಗಳು ಸೇರಲಿವೆ. ಗ್ರಾಮೀಣ ಆರ್ಥಿಕತೆಗೆ ಬಲ ತುಂಬಲು ಈ ಯೋಜನೆ ಸಹಕಾರಿಯಾಗುತ್ತದೆ ಎಂದು ಡಿಸಿಎಂ ನುಡಿದರು.

ಮುಖ್ಯಮಂತ್ರಿ ಜತೆ ಚರ್ಚೆ: ಅನಿವಾಸಿ ಕರಕುಶಲ ವೇದಿಕೆಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡುವ ಬಗ್ಗೆ ಮುಖ್ಯಮಂತ್ರಿಗಳ ಚರ್ಚೆ ನಡೆಸಲಾಗುವುದು. ಆದಷ್ಟು ಬೇಗ ಈ ನೇಮಕಾತಿಯನ್ನು ಮಾಡಲಾಗುವುದು. ಈ ಕ್ಷೇತ್ರಕ್ಕೆ ಅಗತ್ಯವಾದ ಎಲ್ಲ ಸಹಕಾರವನ್ನೂ ಕೊಡಲು ಸರಕಾರ ಸಿದ್ಧವಿದೆ ಎಂದು ಡಾ.ಅಶ್ವತ್ಥನಾರಾಯಣ ಭರವಸೆ ನೀಡಿದರು. 

ವಿದೇಶಗಳಿಂದ ರಾಜ್ಯಕ್ಕೆ ವಾಪಸ್ಸಾಗಿ ಇಲ್ಲಿಯೇ ಕೌಶಲ್ಯ ಕ್ಷೇತ್ರದ ಉದ್ಯಮದಲ್ಲಿ ತೊಡಗಿಸಿಕೊಳ್ಳುವವರಿಗೆ ಎಲ್ಲ ಸಹಕಾರ ನೀಡಲಾಗುತ್ತಿದೆ. ಅದಕ್ಕೆ ಪ್ರತ್ಯೇಕವಾದ ಪೋರ್ಟಲ್ ಇದ್ದು, ಕಳೆದ ವರ್ಷ 10,000 ಜನ ನೋಂದಣಿ ಮಾಡಿಕೊಂಡಿದ್ದಾರೆ. ಇವರೆಲ್ಲರಿಗೂ ಸರಕಾರ ವಿವಿಧ ರೀತಿಯಲ್ಲಿ ನೆರವು ಕೊಡುತ್ತಿದೆಯಲ್ಲದೆ, ವಿವಿಧ ಕಂಪನಿಗಳ ಜತೆ ಸಂಪರ್ಕ ವ್ಯವಸ್ಥೆ ಮಾಡಿದೆ. ಮುಂದೆ ಕೂಡ ಯಾರಾದರೂ ಬಂದರೆ ನಮ್ಮ ನೆರವು ಇದ್ದೇ ಇರುತ್ತದೆ ಎಂದು ಅವರು ತಿಳಿಸಿದರು. 

ಕೋವಿಡ್ ನಿಯಂತ್ರಣಕ್ಕೆ ಕ್ರಮ: ರಾಜ್ಯದ ಕೋವಿಡ್ ಪರಿಸ್ಥಿತಿಯ ಬಗ್ಗೆ ಕಳವಳ ಬೇಡ. ಈಗಾಗಲೇ ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ 55,000 ಬೆಡ್ ಗಳಿವೆ. 30,000 ಆಕ್ಸಿಜನ್ ಬೆಡ್ ಗಳಿವೆ. ರಾಜ್ಯದಲ್ಲಿ ಶೇ.92ಕ್ಕೂ ಹೆಚ್ಚು ಸೋಂಕಿತರು ಮನೆಗಳಲ್ಲೇ ಕ್ವಾರಂಟೈನ್ ಆಗಿದ್ದಾರೆ. ಉಳಿದವರು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಕೆಲ ದಿನಗಳಲ್ಲೇ 10,000 ಆಕ್ಸಿಜನ್ ಬೆಡ್ ಗಳನ್ನು ಹೊಸದಾಗಿ ಮಾಡಲಾಗುವುದು ಎಂದು ಡಿಸಿಎಂ ಹೇಳಿದರು.

ರಾಜ್ಯ ಕರಕುಶಲ ನಿಗಮದ ಅಧ್ಯಕ್ಷ ಬೇಲೂರು ರಾಘವೇಂದ್ರ ಶೆಟ್ಟಿ, ಅನಿವಾಸಿ ಕನ್ನಡಿಗರಾದ ಚಂದ್ರಶೇಖರ ಲಿಂಗದಳ್ಳಿ (ಅಮೆರಿಕ), ಗೋಪಾಲ್ ಕುಲಕರ್ಣಿ (ಇಂಗ್ಲೆಂಡ್), ಹೇಮಗೌಡ ಮಧು (ಇಟಲಿ), ರವಿ ಮಹಾದೇವ (ಸೌದಿ ಅರೆಬಿಯಾ), ಬಸವ ಪಾಟೀಲ್ (ಇಂಗ್ಲೆಂಡ್) ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X