Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ...

5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಖಂಡಿತಾ ಅಧಿಕಾರಕ್ಕೆ ಬರುತ್ತದೆ: ಡಿಸಿಎಂ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ2 May 2021 8:13 PM IST
share
5 ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಖಂಡಿತಾ ಅಧಿಕಾರಕ್ಕೆ ಬರುತ್ತದೆ: ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು, ಮೇ 2: ಕೇರಳದ ವಿಧಾನಸಭೆ ಚುನಾವಣೆ ಫಲಿತಾಂಶದಿಂದ ಬಿಜೆಪಿ ನಿರಾಶೆಗೊಂಡಿಲ್ಲ. 2024ರ ಲೋಕಸಭೆ ಹಾಗೂ 2026ರ ವಿಧಾನಸಭೆ ಚುನಾವಣೆಯಲ್ಲಿ ಆ ರಾಜ್ಯದಲ್ಲಿ ಉತ್ತಮ ಸಾಧನೆ ಮಾಡುತ್ತೇವೆ ಎಂದು ಕೇರಳ ಬಿಜೆಪಿಯ ಸಹ ಪ್ರಭಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ ಅಚಲ ವಿಶ್ವಾಸ ವ್ಯಕ್ತಪಡಿಸಿದರು. 

ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನೆಲೆಯಲ್ಲಿ ನಗರದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, "ಮುಂದಿನ ಐದು ವರ್ಷಗಳ ನಂತರ ಕೇರಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ. ಈ ಮಾತನ್ನು ಇವತ್ತು ಆತ್ಮವಿಶ್ವಾಸದಿಂದ ಹೇಳುತ್ತಿದ್ದೇನೆ. ಅದಕ್ಕೆ ಅಗತ್ಯವಾದ ಎಲ್ಲ ರೀತಿಯಲ್ಲೂ ಪಕ್ಷವನ್ನು ಬಲಪಡಿಸಲಾಗುವುದು" ಎಂದರು. 

ಕೇರಳದಲ್ಲಿ ಕೆಲ ಕಾರಣಗಳಿಂದ ಪಿಣರಾಯಿ ವಿಜಯನ್‌ ಮತ್ತೆ ಅಧಿಕಾರಕ್ಕೆ ಬರುತ್ತಿದ್ದಾರೆ. ಹಾಗೆ ನೋಡಿದರೆ ದೇಶದಲ್ಲಿ ಕಮ್ಯುನಿಸ್ಟ್‌ ಪಕ್ಷಗಳ ಕಾಲ ಮುಗಿದಿದೆ. ಪಶ್ಚಿಮ ಬಂಗಾಳದಲ್ಲಿ ಆ ಪಕ್ಷ ಕಣ್ಮರೆಯಾಗುತ್ತಿರುವುದೇ ಇದಕ್ಕೆ ಸಾಕ್ಷಿ. ಇನ್ನು ಕೇರಳದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಡಿಎಫ್‌ ಕೂಡ ಕೊನೆಗಾಲದಲ್ಲಿದೆ. ಮುಂದಿನ ಚುನಾವಣೆ ಹೊತ್ತಿಗೆ ಬಿಜೆಪಿಯನ್ನು ಬಲಪಡಿಸಿ ಅಧಿಕಾರಕ್ಕೆ ತರುವ ಎಲ್ಲ ಕೆಲಸಗಳನ್ನು ಮಾಡಲಾಗುವುದು ಎಂದು ಅವರು ಹೇಳಿದರು. 

ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಾಗಲಿಲ್ಲ ಎನ್ನುವುದಕ್ಕಿಂತ ಕೇರಳ ಜನತೆ ಕೊಟ್ಟ ಜನಾದೇಶವನ್ನು ನಾವು ಗೌರವಿಸುತ್ತೇವೆ. ಆ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಜೆಪಿ ಪೂರ್ಣ ಪ್ರಮಾಣದಲ್ಲಿ ಚುನಾವಣೆ ಅಖಾಡಕ್ಕೆ ಇಳಿದಿತ್ತು. ನಮ್ಮ ಪಕ್ಷದ ಶಕ್ತಿಯ ಜತೆಗೆ, ಇತರೆ ಪಕ್ಷಗಳ ಶಕ್ತಿ-ದೌರ್ಬಲ್ಯಗಳನ್ನು ನಾವು ಅರಿತುಕೊಂಡಿದ್ದೇವೆ. ಮುಂದಿನ ಚುನಾವಣೆಗೆ ಬಿಜೆಪಿ ಸರ್ವ ಸನ್ನದ್ಧವಾಗಲಿದೆ ಎಂದು ಅವರು ತಿಳಿಸಿದರು. 

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅತ್ಯುತ್ತಮ ಸಾಧನೆ ಮಾಡಿದೆ. ಕಳೆದ ಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿ ಗೆದ್ದಿತ್ತು. 2021ನೇ ಚುನಾವಣೆಯಲ್ಲಿ 75 ಕ್ಷೇತ್ರಗಳಲ್ಲಿ ವಿಜಯ ಸಾಧಿಸಿದೆ. ಎಲ್ಲಿಯ 3 ಕ್ಷೇತ್ರ, ಎಲ್ಲಿಯ 75. ಒಂದಂಕಿಯಿಂದ ಎರಡಂಕಿ ಸಾಧನೆ ಚಿಕ್ಕದೇನಲ್ಲ. 2026ರ ಚುನಾವಣೆಗೆ ಇದು ಅತ್ಯುತ್ತಮ ಮುನ್ನಡಿಯಾಗಿದೆ ಎಂದರು ಅವರು. 

ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದಿದೆ. ತಮಿಳುನಾಡಿನಲ್ಲಿ ನಾವು ಕಳೆದ ಚುನಾವಣೆಯಲ್ಲಿ ಒಂದು ಸ್ಥಾನವನ್ನೂ ಗೆದ್ದಿರಲಿಲ್ಲ. ಆದರೆ, ಪ್ರಸಕ್ತ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದೇವೆ. ಪುದುಚೇರಿಯಲ್ಲೂ ಪಕ್ಷ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಅವರು ತಿಳಿಸಿದರು. 

ಕಾಂಗ್ರೆಸ್‌ ಸ್ಥಾನ ಬಿಜೆಪಿಗೆ ಸಿಕ್ಕಿದೆ:  ವಿಧಾನಸಭೆ ಉಪ ಚುನಾವಣೆ ನಡೆದ ಎರಡು ಕ್ಷೇತ್ರಗಳ ಪೈಕಿ ಬಸವ ಕಲ್ಯಾಣದಲ್ಲಿ ಬಿಜೆಪಿ ಗೆದ್ದಿದೆ. ಮಸ್ಕಿಯಲ್ಲಿ ಸೋತಿರುವುದಕ್ಕೆ ನಿರಾಶೆ ಇಲ್ಲ. ಯಾಕೆಂದರೆ, ಇವೆರಡೂ ಕ್ಷೇತ್ರಗಳು ಕಾಂಗ್ರೆಸ್‌ ಪಕ್ಷಕ್ಕೆ ಸೇರಿದ್ದವು ಎಂದ ಅವರು, ಮಸ್ಕಿ ಸೋಲು ಒಬ್ಬರ (ಬಿ.ವೈ.ವಿಜಯೇಂದ್ರ) ತಲೆಗೆ ಕಟ್ಟುವ ಅಗತ್ಯವಿಲ್ಲ. ನಮ್ಮ ಪಕ್ಷದಲ್ಲಿ ಹಾಗೆ ಮಾಡುವುದಿಲ್ಲ. ಚುನಾವಣೆಯಲ್ಲಿ ಇಡೀ ಸಂಘಟನೆ ತೊಡಗಿಸಿಕೊಳ್ಳುತ್ತದೆ. ಸೋಲು ಗೆಲುವು ಎನ್ನುವುದು ಎಲ್ಲರಿಗೂ ಸಂಬಂಧಿಸಿದ್ದು, ಅದಕ್ಕೆ ಎಲ್ಲರೂ ಹೊಣೆಗಾರರು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 

ಕೋವಿಡ್‌ & ಫಲಿತಾಂಶಕ್ಕೂ ಸಂಬಂಧ ಇಲ್ಲ; ಮಸ್ಕಿ ಸೋಲು ಹಾಗೂ ಸರಕಾರದ ಕೋವಿಡ್‌ ನಿರ್ವಹಣೆಗೆ ಸಂಬಂಧ ಇಲ್ಲ. ರಾಜ್ಯಕ್ಕೆ ಮಾತ್ರ ಸೋಂಕು ಬಂದಿಲ್ಲ. ಇಡೀ ಜಗತ್ತಿಗೇ ಸೋಂಕು ಬಂದಿದೆ. ಎಲ್ಲೆಡೆ ಈ ಮಹಾಮಾರಿಯನ್ನು ನಿರ್ವಹಣೆ ಮಾಡಲು ಹೆಣಗಾಡಲಾಗುತ್ತಿದೆ. ಹೀಗಾಗಿ ಕೋವಿಡ್‌ಗೂ ಚುನಾವಣೆಗೂ ಸಂಬಂಧ ಕಲ್ಪಿಸುವುದು ಸರಿಯಲ್ಲ ಎಂದು ಡಿಸಿಎಂ ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X