Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಧಿಕಾರ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ...

ಅಧಿಕಾರ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಬ್ಯಾನರ್ಜಿಯ ಗಟ್ಟಿತನ ನಮಗೆ ಮಾದರಿ: ಕುಮಾರಸ್ವಾಮಿ

''ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಜೆಡಿಎಸ್ ಸೆಟೆದು ನಿಲ್ಲಲಿದೆ''

ವಾರ್ತಾಭಾರತಿವಾರ್ತಾಭಾರತಿ2 May 2021 8:42 PM IST
share
ಅಧಿಕಾರ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಬ್ಯಾನರ್ಜಿಯ ಗಟ್ಟಿತನ ನಮಗೆ ಮಾದರಿ: ಕುಮಾರಸ್ವಾಮಿ

ಬೆಂಗಳೂರು, ಮೇ 2: ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ಐದು ರಾಜ್ಯಗಳ ಹಾಗೂ ಉಪಚುನಾವಣೆ ಚುನಾವಣಾ ಫಲಿತಾಂಶ ಕುರಿತು ಪ್ರತಿಕ್ರಿಯಿಸಿರುವ ಅವರು, ಕರ್ನಾಟಕದ ಉಪ ಚುನಾವಣೆ ಫಲಿತಾಂಶದ ಜೊತೆಗೇ, 5 ರಾಜ್ಯಗಳ ಚುನಾವಣೆಗಳ ಫಲಿತಾಂಶಗಳೂ ಬಂದಿದ್ದು, ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳನ್ನು ಮಣಿಸಲಾಗದು ಎಂಬ ಸಂದೇಶ ಹೊರಬಿದ್ದಿದೆ. ಸಾಂದರ್ಭಿಕ ಕಾರಣಗಳಿಗಾಗಿ ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರಲಿದೆ ಎಂದು ತಿಳಿಸಿದ್ದಾರೆ.

ಅಧಿಕಾರ, ಹಣ, ಒತ್ತಡ, ಬಲ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಗಟ್ಟಿತನ ನಮಗೆ ಮಾದರಿಯಾಗಲಿದೆ. ಜೆಡಿಎಸ್‍ನಂತೆಯೇ ದಶಕಗಳ ಕಾಲ ರಾಜಕೀಯ ವನವಾಸ ಅನುಭವಿಸಿದ, ಸಂಕಷ್ಟ ಅನುಭವಿಸಿದ, ಕಠಿಣ ಸಂದರ್ಭದಲ್ಲೂ ಮುಂದಡಿ ಇಡುತ್ತಲೇ ಮುಂದೆ ಸಾಗಿದ ಡಿಎಂಕೆ ಮತ್ತು ಅದರ ನಾಯಕರ ತಾಳ್ಮೆ ನಮಗೆ ಪಾಠವಾಗಲಿದೆ ಎಂದು ಹೇಳಿದ್ದಾರೆ.

ಅಧಿಕಾರ ದುರ್ಬಳಕೆಯ, ಅಪಪ್ರಚಾರದ ಪ್ರಯೋಗಗಳನ್ನು ಮೆಟ್ಟಿನಿಂತ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದುಷ್ಟ ಶಕ್ತಿಗಳ ವಿರುದ್ಧ ಗೆದ್ದ ದುರ್ಗೆಯಂತೆ ಹೊರಹೊಮ್ಮಿದ್ದಾರೆ ಎಂದ ಅವರು, ಪ್ರಾದೇಶಿಕ ಅಸ್ಮಿತೆಯನ್ನು ದೇಶದ ಜನತೆ ಮತ್ತೆ ರುಜುವಾತುಪಡಿಸಿದ್ದಾರೆ. ಯಾವ ಅಧಿಕಾರ, ಹಣದ ದರ್ಪ, ಒತ್ತಡ ತಂತ್ರಗಳು, ಕುತಂತ್ರಗಳು, ಅಪಪ್ರಚಾರಗಳು ಪ್ರಾದೇಶಿಕ ಅಸ್ಮಿತೆಯನ್ನು ಚಿವುಟಿ ಹಾಕಲಾರವು. ಜನಮನ ಗೆದ್ದ ಪ್ರಾದೇಶಿಕ ಪಕ್ಷದ  ನಾಯಕರನ್ನು ಜನತೆ ಕೈ ಹಿಡಿಯುತ್ತಾರೆ ಎಂಬುದಕ್ಕೆ ಇವತ್ತಿನ ಫಲಿತಾಂಶವೇ ತಾಜಾ ನಿದರ್ಶನ ಎಂದು ತಿಳಿಸಿದ್ದಾರೆ.

ಅಲ್ಲದೆ, ಜೆಡಿಎಸ್ ತನ್ನ ಸಾಮರ್ಥ್ಯವನ್ನು ಮರಳಿ ಸಾಬೀತು ಮಾಡಲಿದೆ. ಈ ದುರಿತ ಕಾಲದಲ್ಲಿ ಕಾರ್ಯಕರ್ತರೊಂದಿಗೆ ನಾನು ನಿಲ್ಲಲಿದ್ದೇನೆ. ಸೋಲುಗಳ ಸರಣಿಯನ್ನು ಗೆಲುವಿನ ಪಾಠವಾಗಿ ಪರಿವರ್ತಿಸಿಕೊಳ್ಳುವ ಕಾಲ ನಮ್ಮೆದುರಿಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X