Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂಕಷ್ಟದ ಸಮಯದಲ್ಲಿ ಸಂಭ್ರಮಾಚರಣೆ ಬೇಡ:...

ಸಂಕಷ್ಟದ ಸಮಯದಲ್ಲಿ ಸಂಭ್ರಮಾಚರಣೆ ಬೇಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ

ವಾರ್ತಾಭಾರತಿವಾರ್ತಾಭಾರತಿ2 May 2021 8:43 PM IST
share
ಸಂಕಷ್ಟದ ಸಮಯದಲ್ಲಿ ಸಂಭ್ರಮಾಚರಣೆ ಬೇಡ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವಿ

ಬೆಂಗಳೂರು, ಮೇ 2: `ಕೋವಿಡ್ ಪಿಡುಗಿನ ಸಂಕಷ್ಟದ ಸಮಯದಲ್ಲಿ ನಾವು ನಮ್ಮ ಜನರ ಜೀವ ಉಳಿಸುವ ಬಗ್ಗೆ ಗಮನ ಹರಿಸಬೇಕು. ಹೀಗಾಗಿ ಚುನಾವಣೆ ಫಲಿತಾಂಶ ಏನೇ ಬರಲಿ, ಸಂಭ್ರಮಾಚರಣೆ ಮಾಡುವುದು ಬೇಡ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದಿಲ್ಲಿ, ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ರವಿವಾರ ಮಸ್ಕಿ, ಬಸವಕಲ್ಯಾಣ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ನಡುವೆ ಸದಾಶಿವನಗರದಲ್ಲಿನ ತಮ್ಮ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, `ಇಂದು ನಾವೆಲ್ಲ ಫಲಿತಾಂಶ ನೋಡುತ್ತಿದ್ದು, ಮತದಾರರ ತೀರ್ಪನ್ನು ಸ್ವಾಗತ ಮಾಡುತ್ತೇವೆ. ಸೋಲು-ಗೆಲುವು ಎರಡನ್ನೂ ಒಪ್ಪಿಕೊಳ್ಳಬೇಕು. ಇದು ಪ್ರಜಾಪ್ರಭುತ್ವದ ನಿಯಮ. ನಾನು ಈ ಸಂದರ್ಭದಲ್ಲಿ ಮೊದಲು ಮನವಿ ಮಾಡಿಕೊಳ್ಳುವುದು, ಮಸ್ಕಿ ಕ್ಷೇತ್ರದಲ್ಲಿ ಅತಿಹೆಚ್ಚು ಮುನ್ನಡೆಯಲ್ಲಿ ಗೆದ್ದಿದ್ದೇವೆ. ಗೆಲುವು ಸಾಧಿಸಿರುವುದು ಬೇರೆ ವಿಚಾರ. ಈಗ ಯಾರೂ ಸಂಭ್ರಮಾಚರಣೆ ಮಾಡಬಾರದು ಎಂದು ಕೋರಿದರು.

ಎಲ್ಲರೂ ತಪ್ಪದೆ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು ಎಂಬುದು ನನ್ನ ಮನವಿ. ಚುನಾವಣಾ ಆಯೋಗದಿಂದ ನಮಗೆ ಕಟ್ಟುನಿಟ್ಟಿನ ನಿರ್ದೇಶನ ಬಂದಿದೆ. ಉಲ್ಲಂಘನೆ ಮಾಡಿದರೆ ನಮ್ಮ ಮೇಲೆ ಪ್ರಕರಣ ದಾಖಲಿಸುತ್ತಾರೆ. ನಿಮ್ಮ ಮೇಲೂ ಕೇಸು ದಾಖಲಿಸುತ್ತಾರೆ. ಮಸ್ಕಿಯಲ್ಲಾಗಲಿ ಅಥವಾ ರಾಜ್ಯದ ಬೇರೆ ಯಾವುದೇ ಭಾಗದಲ್ಲಾಗಲಿ ಸಂಭ್ರಮಾಚರಣೆ ಬೇಡ. ಬೆಳಗಾವಿಯಲ್ಲಿ ಕಳೆದ ಬಾರಿ 4 ಲಕ್ಷ ಮತಗಳ ಅಂತರದಲ್ಲಿ ಸೋತಿದ್ದೆವು. ಈ ಬಾರಿ ಬಹಳ ಸಮೀಪದ ಸೋಲಾಗಿದ್ದು, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆಂಬುದು ಇದರಿಂದ ಗೊತ್ತಾಗುತ್ತದೆ ಎಂದು ಅವರು ತಿಳಿಸಿದರು.

ಚುನಾವಣೆ ಸಂದರ್ಭದಲ್ಲಿ ಪಕ್ಷಕ್ಕೆ ದುಡಿದ ಕಾರ್ಯಕರ್ತರು, ನಾಯಕರು ಹಾಗೂ ಮುಖಂಡರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರಿಗಿಂತ ಮೊದಲು ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ವಿಶ್ಲೇಷಣೆ ಆಮೇಲೆ ಮಾಡೋಣ. ಆದರೆ ಈ ಸಮಯದಲ್ಲಿ ಬೇರೆ ರಾಜ್ಯಗಳ ಫಲಿತಾಂಶ ಇಟ್ಟುಕೊಂಡು ಸಂಭ್ರಮಿಸುವುದು ಬೇಡ. ಪಕ್ಷದ ಕಚೇರಿಗೂ ಯಾರೂ ಹೋಗಬಾರದು. ಈ ಕುರಿತು ಅಭ್ಯರ್ಥಿ, ಜಿಲ್ಲಾಧ್ಯಕ್ಷರುಗಳಿಗೆ ಸೂಚನೆ ನೀಡಿದ್ದೇನೆ. ನಾವು ಚುನಾವಣೆ ಮುಂದೂಡಿ ಎಂದು ಹೇಳಿದ್ದೆವು. ಆದರೆ, ಕೇಳಲಿಲ್ಲ. ಪರಿಣಾಮ ಈ ಸ್ಥಿತಿ ನಿರ್ಮಾಣವಾಗಿದೆ. ಫಲಿತಾಂಶ ಏನಾದರೂ ಬರಲಿ ಆ ಬಗ್ಗೆ ಆಮೇಲೆ ವಿಶ್ಲೇಷಣೆ ಮಾಡೋಣ. ಮೊದಲು ನಮ್ಮ ಜನರ ಜೀವ ಉಳಿಸೋಣ ಎಂದು ಶಿವಕುಮಾರ್ ಕೋರಿದರು.

`ಇಡೀ ದೇಶದ ಅಧಿಕಾರ, ಅಧಿಕಾರಿಗಳನ್ನು ಬಳಸಿಕೊಂಡು ಪಶ್ಚಿಮ ಬಂಗಾಳದಲ್ಲಿ 8 ಹಂತಗಳಲ್ಲಿ ಚುನಾವಣೆ ಮಾಡಿ, ಆ ಹೆಣ್ಣು ಮಗಳಿಗೆ ಕೊಟ್ಟಿರುವ ಕಿರುಕುಳ ಕಂಡು ಸಿಟ್ಟಿಗೆದ್ದ ಜನ ಈ ಫಲಿತಾಂಶ ಕೊಟ್ಟಿದ್ದಾರೆ. ಅವರಿಗೆ ಸಾಷ್ಟಾಂಗ ನಮಸ್ಕಾರಗಳು'

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X