Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಬಿಜೆಪಿ ಅವನತಿಯ ಪರ್ವ...

ದೇಶದಲ್ಲಿ ಬಿಜೆಪಿ ಅವನತಿಯ ಪರ್ವ ಶುರುವಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ2 May 2021 8:50 PM IST
share
ದೇಶದಲ್ಲಿ ಬಿಜೆಪಿ ಅವನತಿಯ ಪರ್ವ ಶುರುವಾಗಿದೆ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ 2: ದೇಶದಲ್ಲಿ ಬಿಜೆಪಿಯ ಅವನತಿಯ ಪರ್ವ ಶುರುವಾಗಿದೆ ಎಂಬುದನ್ನು ಪಶ್ಚಿಮಬಂಗಾಳ, ತಮಿಳುನಾಡು, ಕೇರಳ ಚುನಾವಣಾ ಫಲಿತಾಂಶಗಳೇ ಸಾಕ್ಷೀಕರಿಸಿವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಿಸಿದ್ದಾರೆ.

ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದುಡ್ಡು ಮತ್ತು ಅಧಿಕಾರದ ಬಲದಿಂದ ಚುನಾವಣೆಯನ್ನು ಗೆಲ್ಲಬಹುದೆಂಬ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣಕ್ಕೆ ಪಶ್ಚಿಮಬಂಗಾಳ, ತಮಿಳುನಾಡು, ಕೇರಳ ಚುನಾವಣೆಗಳು ದೊಡ್ಡ ಹೊಡೆತ ನೀಡಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಹಿಂದಿನ ಚುನಾವಣೆಗಿಂತ ಹೆಚ್ಚು ಸ್ಥಾನಗಳನ್ನು ಗಳಿಸಿರುವುದು ನಿಜವಾದರೂ ಆ ಎಲ್ಲ ಸ್ಥಾನಗಳು ಆಪರೇಷನ್ ಕಮಲದ ಫಲವಾಗಿದೆ ಎಂದು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆಯನ್ನು ಗೆಲ್ಲಲೇಬೇಕೆಂಬ ಹಟದಿಂದ ಬಿಜೆಪಿ ಕೊರೋನ ಸೋಂಕಿನ ಅಪಾಯವನ್ನೂ ಧಿಕ್ಕರಿಸಿ, ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿ ಅಲ್ಲಿ ಚುನಾವಣೆಯನ್ನು ಘೋಷಿಸಿತ್ತು. ಸೋಲಿನ ಹೊಣೆಯ ಜೊತೆ ಕೊರೋನದಿಂದ ಪ್ರಾಣ ಕಳೆದುಕೊಂಡ ಅಮಾಯಕ ಜನರ ಸಾವಿನ ಹೊಣೆಯನ್ನೂ ನರೇಂದ್ರ ಮೋದಿ ಮತ್ತು ಅಮಿತ್ ಶಾ ಹೊರಬೇಕಾಗುತ್ತದೆ ಎಂದು ಅವರು ಆರೋಪಿಸಿದ್ದಾರೆ.

ತಮಿಳುನಾಡು ಮತ್ತು ಕೇರಳ ರಾಜ್ಯಗಳ ಮತದಾರರು ಬಿಜೆಪಿಯನ್ನು ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ. ತಮಿಳುನಾಡಿನಲ್ಲಿ ಡಿಎಂಕೆ ಮೈತ್ರಿಕೂಟ ಮತ್ತು ಕೇರಳದಲ್ಲಿ ಎಲ್‍ಡಿಎಫ್ ಅಧಿಕಾರಕ್ಕೆ ಬರುವುದು ಖಚಿತವಾಗಿದೆ ಎಂದ ಅವರು, ಗೆಲುವಿನ ರೂವಾರಿಗಳಾದ ಎಂ.ಕೆ.ಸ್ಟಾಲಿನ್ ಮತ್ತು ಪಿಣರಾಯ್ ವಿಜಯನ್‍ಗೆ ಅಭಿನಂದನೆ ಸಲ್ಲಿಸಿದ್ದಾರೆ.

ದಕ್ಷಿಣದ ರಾಜ್ಯಗಳು ಕೂಡಾ ಬಿಜೆಪಿಯ ಕೋಮುವಾದಿ ರಾಜಕಾರಣವನ್ನು ಪುರಸ್ಕರಿಸಿಲ್ಲ. ಕೇರಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಬಿಜೆಪಿಗೆ ಇಲ್ಲಿಯ ವರೆಗೆ ಸ್ವಂತ ಬಲದಿಂದ ಅಧಿಕಾರ ಹಿಡಿಯಲಾಗಿಲ್ಲ. ಕರ್ನಾಟಕದಲ್ಲಿಯೂ  ಬಿಜೆಪಿ ಅಧಿಕಾರ ಗಳಿಸಿದ್ದು ಪಾಪದ ಹಣದಿಂದ ನಡೆಸಿದ ಆಪರೇಷನ್ ಕಮಲ ಎಂಬ ಅಡ್ಡಮಾರ್ಗದ ಮೂಲಕವೆಂದು ಅವರು ಕಿಡಿಕಾರಿದ್ದಾರೆ.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಿಂದ ಹಿಡಿದು ಇತ್ತೀಚೆಗೆ ನಮ್ಮ ರಾಜ್ಯದಲ್ಲಿ ನಡೆದ ಗ್ರಾಮ ಪಂಚಾಯತ್, ಸ್ಥಳೀಯ ಸಂಸ್ಥೆಗಳ ಚುನಾವಣೆಯ  ವರೆಗೆ ಎಲ್ಲ ಕಡೆ ಜನ ಬಿಜೆಪಿಯನ್ನು ತಿರಸ್ಕರಿಸುತ್ತಿರುವುದು ಮುಂದಿನ ರಾಜಕೀಯ ಬೆಳವಣಿಗೆಯ ದಿಕ್ಸೂಚಿಯಾಗಿದೆ ಎಂದು ಅವರು ಹೇಳಿದ್ದಾರೆ.

ಮಸ್ಕಿ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದೆ. ಆಪರೇಷನ್ ಕಮಲಕ್ಕೆ ಈ ಮೂಲಕ ಅಲ್ಲಿಯ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಜೊತೆಗೆ ಚುನಾವಣಾ ಚಾಣಕ್ಯ ಎಂದು ಮಾಧ್ಯಮ ಮಗಳ ಮೂಲಕ ಹೊಗಳಿಸಿಕೊಂಡಿದ್ದ ವಿಜಯೇಂದ್ರ ಮತ್ತವರ ಹಣದ ವ್ಯಾಮೋಹಕ್ಕೆ ಮತದಾರರು ಮಣೆ ಹಾಕಿಲ್ಲ ಎಂಬುದು ಸಾಬೀತಾಗಿದೆ ಎಂದು ಅವರು ತಿಳಿಸಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿ ಕಣಕ್ಕಿಳಿಸಿದ್ದರಿಂದ, ಈಶ್ವರ ಖಂಡ್ರೆ ಅವರು ಕೊರೋನ ಸೋಂಕಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದರಿಂದ ಹಾಗೂ ಹಲವು ಕಾರಣಗಳಿಂದ ಸೋಲಾಯಿತು. ಹಾಗೂ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 4 ಲಕ್ಷ ಮತಗಳಿಂದ ಸೋತಿತ್ತು. ಈ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಗೆಲ್ಲುವ ವಿಶ್ವಾಸ ಇತ್ತು.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮತ್ತು ಎಡಪಕ್ಷಗಳ ಜೊತೆಗಿನ ಮೈತ್ರಿಕೂಟಕ್ಕೆ ಹಿನ್ನಡೆಯಾಗಿರುವುದು ನಿಜ. ಆ ರಾಜ್ಯದ ಜಾಗೃತ ಮತದಾರರು ಜಾತ್ಯತೀತ ಮತಗಳ ವಿಂಗಡಣೆಯಾಗಿ ಬಿಜೆಪಿಗೆ ಲಾಭವಾಗಬಾರದು ಮತ್ತು ದೇಶಕಂಟಕ ಬಿಜೆಪಿಯನ್ನು ಸೋಲಿಸಲೇಬೇಕೆಂದು ಟಿಎಂಸಿಗೆ ಸಾರಾಸಗಟಾಗಿ ಮತ ಹಾಕಿದಂತಿದೆ.

-ಸಿದ್ದರಾಮಯ್ಯ, ವಿರೋಧ ಪಕ್ಷದ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X