ನಿಷೇಧಾಜ್ಞೆ ಉಲ್ಲಂಘಿಸಿದ್ದಕ್ಕೆ ಟಿಕಾಯತ್, ಇತರ 12 ಜನರ ವಿರುದ್ಧ ಪ್ರಕರಣ ದಾಖಲು

ಅಂಬಾಲಾ,ಮೇ 2: ಇಲ್ಲಿಯ ಧುರಲಿ ಗ್ರಾಮದಲ್ಲಿ ಶನಿವಾರ ಕೃಷಿ ಕಾರ್ಮಿಕರ ಮಹಾ ಪಂಚಾಯತ್ ಅನ್ನು ನಡೆಸಿದ್ದ ಬಿಕೆಯು ನಾಯಕ ರಾಕೇಶ ಟಿಕಾಯತ್ ಮತ್ತು ಇತರ 12 ಜನರ ವಿರುದ್ಧದ ನಿಷೇಧಾಜ್ಞೆಯನ್ನು ಉಲ್ಲಂಘಿಸಿದ ಆರೋಪದಲ್ಲಿ ಹರ್ಯಾಣ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಕೊರೋನ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಐಪಿಸಿಯ ಕಲಂ 144ರಡಿ ನಿಷೇಧಾಜ್ಞೆಯನ್ನು ಹೇರಿದ್ದು,ನಾಲ್ಕು ಮತ್ತು ಅದಕ್ಕಿಂತ ಹೆಚ್ಚಿನ ಜನರು ಒಂದೆಡೆ ಸೇರುವಂತಿಲ್ಲ.
ನಿಷೇಧಾಜ್ಞೆಯು ಜಾರಿಯಲ್ಲಿರುವುದರಿಂದ ಮಹಾ ಪಂಚಾಯತ್ ಅನ್ನು ನಡೆಸದಂತೆ ಎಚ್ಚರಿಕೆ ನೀಡಿದ್ದರೂ ಬಿಕೆಯು ನಾಯಕರು ಅದನ್ನು ಕಡೆಗಣಿಸಿ ಕಾರ್ಯಕ್ರಮವನ್ನು ನಡೆಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.
Next Story





