Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರೋಲ್ ಮಾಡೆಲ್ ಜಿಲ್ಲಾಧಿಕಾರಿ ಬೇಕೇ ಹೊರತು...

ರೋಲ್ ಮಾಡೆಲ್ ಜಿಲ್ಲಾಧಿಕಾರಿ ಬೇಕೇ ಹೊರತು ಮಾಡೆಲ್ ಅಧಿಕಾರಿಯಲ್ಲ: ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ2 May 2021 11:21 PM IST
share
ರೋಲ್ ಮಾಡೆಲ್ ಜಿಲ್ಲಾಧಿಕಾರಿ ಬೇಕೇ ಹೊರತು ಮಾಡೆಲ್ ಅಧಿಕಾರಿಯಲ್ಲ: ಶಾಸಕ ಸಾ.ರಾ.ಮಹೇಶ್ ವಾಗ್ದಾಳಿ

ಮೈಸೂರು,ಮೇ.2: ಮೈಸೂರು ಜಿಲ್ಲೆಗೆ ರೋಲ್ ಮಾಡೆಲ್ ಜಿಲ್ಲಾಧಿಕಾರಿಗಳು ಬೇಕು ಹೊರತು ಮಾಡೆಲ್ ಜಿಲ್ಲಾಧಿಕಾರಿಗಳಲ್ಲ ಎಂದು ಪರೋಕ್ಷವಾಗಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಶಾಸಕ ಸಾ.ರಾ.ಮಹೇಶ್ ಮತ್ತೊಮ್ಮೆ ಹರಿಹಾಯ್ದರು.

ನಗರದ ಶಾಸಕರ ಕಚೇರಿಯಲ್ಲಿ ರವಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ಈ ಹಿಂದೆ ಅಭಿರಾಮ್ ಜಿ.ಶಂಕರ್, ಶಿಖಾ, ತಾ.ಮ.ವಿಜಯ ಭಾಸ್ಕರ್ ಅಂತಹ ಅಧಿಕಾರಿಗಳು ಬಂದು ಹೋಗಿದ್ದಾರೆ. ಅವರಂತೆ ಜನರ ಬಗ್ಗೆ ಕಾಳಜಿ ಇರುವ ಅಧಿಕಾರಿಗಳು ಬೇಕು ಹೊರತು ಮಾಡೆಲ್ ಅಧಿಕಾರಿಗಳಲ್ಲ ಎಂದು ಕಿಡಿಕಾರಿದರು.

ಜಿಲ್ಲಾ ಉಸ್ತುವಾರಿ ಸಚಿವರು ಬದುಕಿದ್ದಾರಾ ಎಂದು ಕೇಳಿದ್ದಕ್ಕೆ ಸಚಿವರಿಗೆ ಬಹಳ ಸಿಟ್ಟು ಬಂದಿದೆ. ಇನ್ನು ಕೊರೋನ ನಿರ್ಲಕ್ಷ್ಯದಿಂದ ತಮ್ಮ ಮನೆಯವರ ಜೀವ ಕಳೆದುಕೊಂಡವರಿಗೆ ಇನ್ನೆಷ್ಟು ಸಿಟ್ಟು ಬರುವುದಿಲ್ಲ. ಜಿಲ್ಲಾಡಳಿತ ಕೊರೋನ ನಿಯಂತ್ರಣ ಸಂಬಂಧ ಸರಿಯಾದ ಕ್ರಮ ತೆಗೆದುಕೊಂಡಿದ್ದರೆ ಯಾಕಿಷ್ಟು ಸಾವು ನೋವುಗಳು ಸಂಭವಿಸುತ್ತಿದ್ದವು ಎಂದು ಪ್ರಶ್ನಿಸಿದರು.

ಕೆ.ಆರ್.ನಗರದ ಮಹಿಳೆ ದಾಕ್ಷಾಯಿಣಿ ಮೊನ್ನೆ ಸತ್ತು ಹೋದರು. ಜಿಲ್ಲಾಡಳಿತ ಕೋವಿಡ್ ಪರೀಕ್ಷೆ ಬರುವುದರೊಳಗೆ ಶವವನ್ನು ಮನೆಯವರಿಗೆ ಹಸ್ತಾಂತರ ಮಾಡಿದರು. ಅವರು ಶವ ತೆಗೆದುಕೊಂಡು ಹೋಗಿ ಮನೆಯಲ್ಲಿಟ್ಟು ನಂತರ ಅಂತ್ಯಕ್ರಿಯೆ ಮಾಡಿದ್ದರು. ಮರುದಿನ ಮೃತ ಮಹಿಳೆಯ ಕೋವಿಡ್ ರಿಪೋರ್ಟ್ ಬಂದಿದ್ದು, ಕೋವಿಡ್ ಪಾಸಿಟಿವ್ ಬಂದಿದೆ. ಈಗ ಆ ಮನೆಯಲ್ಲಿ 25 ಜನಕ್ಕೆ ಕೊರೋನ ಪಾಸಿಟಿವ್ ಆಗಿದೆ. ಇದು ಜಿಲ್ಲಾಡಳಿತದ ನಿರ್ಲಕ್ಷ್ಯ ಅಲ್ಲವೇ ? ಇದನ್ನು ಪ್ರಶ್ನೆ ಮಾಡುವುದು ತಪ್ಪಾ? ಕೋವಿಡ್ ರಿಪೋರ್ಟ್ ಬರುವವರೆಗೂ ಶವ ಕೊಡಬೇಡಿ. ಮನೆಯವರು ಒತ್ತಾಯ ಮಾಡಿದರೆ ಕೋವಿಡ್ ನಿಯಮದಂತೆ ಶವಸಂಸ್ಕಾರ ಮಾಡಿಸಿ ಎಂದು ಶಾಸಕ ಸಾ.ರಾ.ಮಹೇಶ್ ಹೇಳಿದರು.

ಕೆ.ಆರ್.ನಗರದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೆ.ಆರ್.ನಗರದಲ್ಲೂ ವೆಂಟಿಲೇಟರ್ ಇದೆ. ಆದರೆ ಆಪರೇಟರ್ಸ್ ಇಲ್ಲ, ಇನ್ನೊಂದೆಡೆ ವೈದ್ಯರು, ನರ್ಸ್ ಕೊರತೆ ಬಹಳಷ್ಟಿದೆ. ಇಡೀ ಜಿಲ್ಲೆಯಲ್ಲಿರುವ ಸರ್ಕಾರಿ, ಖಾಸಗಿ ವೈದ್ಯರು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಜನರಿಗೆ ಕಷ್ಟವಾಗಿದೆ. ಇಡೀ ಜಿಲ್ಲೆಯಲ್ಲಿ ಚಿಕಿತ್ಸೆ ಸಿಗದೆ ಜನ ನರಳುತ್ತಿದ್ದಾರೆ ಎಂದು ಹೇಳಿದರು.

ಕೆ.ಆರ್.ನಗರದಲ್ಲಿ ಕೋವಿಡ್ ಸೆಂಟರ್ ಮಾಡಿದ್ದೇವೆ. ಆ ಸೆಂಟರ್ ಗೆ ಈ ಮೂವರು ವೈದ್ಯರನ್ನು ನಿಯೋಜನೆ ಮಾಡಿದ್ದೇವೆ. ಪ್ರತಿಯೊಬ್ಬರ ಸಂಬಳ ತಲಾ ಒಂದು ಲಕ್ಷ ರೂಪಾಯಿ. ಸಾ.ರಾ.ಸ್ನೇಹ ಬಳಗದಿಂದ ಈ ಸಂಬಳ ನೀಡುತ್ತೇವೆ. ಮುಂದಿನ ವಾರ 200 ಬೆಡ್‍ಗಳ ಸುಸಜ್ಜಿತ ಕೋವಿಡ್ ಸೆಂಟರ್ ಅನ್ನು ಸಾರಾ ಸ್ನೇಹ ಬಳಗದಿಂದ ಆರಂಭಿಸುತ್ತೇವೆ. ಅದನ್ನು ತಾಲೂಕು ಆಡಳಿತಕ್ಕೆ ಹಸ್ತಾಂತರಿಸುತ್ತೇವೆ. ವಿಶ್ವಾಸದಿಂದ ಕೆಲಸ ಮಾಡಿ. ದರ್ಪದಿಂದ ಅಲ್ಲ ಅಂತ ನಿಮ್ಮ ಅಧಿಕಾರಿಗೆ ಹೇಳಿ ಎಂದು ಸಚಿವ ಎಸ್.ಟಿ.ಸೋಮಶೇಖರ್ ಗೆ ಶಾಸಕ ಸಾ.ರಾ.ಮಹೇಶ್ ಸಲಹೆ ನೀಡಿದರು.

ಅಭಿರಾಮ್ ಜಿ.ಶಂಕರ್ ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ಡಿ.ಗ್ರೂಪ್ ನೌಕರರಿಗೂ ಗೌರವ ಕೊಡುತ್ತಿದ್ದರು. ಆದರೆ, ಇವತ್ತಿನ ಜಿಲ್ಲಾಧಿಕಾರಿಗೆ ಆ ಸೌಜನ್ಯ ಇಲ್ಲ. ಈ ಜಿಲ್ಲಾಧಿಕಾರಿಗೆ ಇಚ್ಛಾಶಕ್ತಿ ಕೊರತೆ ಇದೆ. ಕೋವಿಡ್ ನಿರ್ವಹಣೆಯ ಉಸ್ತುವಾರಿಗೆ ಒಬ್ಬ ಹಿರಿಯ ಅಧಿಕಾರಿಯನ್ನು ನಿಯೋಜಿಸಿ ಎಂದು ಸರ್ಕಾರವನ್ನು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X