ದ.ಕ ಜಿಲ್ಲೆ : 793 ಮಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಮೇ 3: ದ.ಕ.ಜಿಲ್ಲೆಯಲ್ಲಿ ಸೋಮವಾರ 793 ಮಂದಿಗೆ ಕೊರೋನ ಪಾಸಿಟಿವ್ ಆಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ 47,831 ಮಂದಿ ಸೋಂಕಿಗೊಳಗಾಗಿದ್ದಾರೆ.
ಜಿಲ್ಲೆಯಲ್ಲಿ ಕೊರೋನ ಸೋಂಕಿನಿಂದ ಗುಣಮುಖರಾದ 505 ಮಂದಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಗುಣಮುಖರಾದವರ ಸಂಖ್ಯೆ 39,188ಕ್ಕೇರಿದೆ. ಸದ್ಯ 7,883 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಜಿಲ್ಲೆಯ 7,52,794 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದ್ದು, 7,04,957 ಮಂದಿಯ ವರದಿ ನೆಗೆಟಿವ್ ಬಂದಿದೆ.
ಸೋಮವಾರ ಸೋಂಕಿಗೆ ಯಾವುದೇ ಬಲಿಯಾಗಿಲ್ಲ ಮತ್ತು ಸೋಂಕಿನ ಪಾಸಿಟಿವ್ ಪ್ರಕರಣದಲ್ಲೂ ಇಳಿಮುಖ ಕಂಡು ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಡಿ 53,984 ಪ್ರಕರಣ ದಾಖಲಿಸಲಾಗಿದೆ. 53,30,330 ರೂ. ದಂಡ ವಸೂಲಿ ಮಾಡಲಾಗಿದೆ.
Next Story





