ಕಾರವಾರ-ಮಂಗಳೂರು ಜಂಕ್ಷನ್ ನಡುವಿನ ರೈಲು ಸಂಚಾರ ರದ್ದು

ಸಾಂದರ್ಭಿಕ ಚಿತ್ರ
ಉಡುಪಿ, ಮೇ 3: ಕೊಂಕಣ ರೈಲು ಮಾರ್ಗದಲ್ಲಿ ಯಶವಂತಪುರ- ಕಾರವಾರ ನಡುವೆ ವಾರದಲ್ಲಿ ಮೂರು ದಿನ ಸಂಚರಿಸುವ ಎಕ್ಸ್ಪ್ರೆಸ್ ವಿಶೇಷ ರೈಲಿನ ಸಂಚಾರವನ್ನು ಭಾಗಶ: ರದ್ದುಗೊಳಿಸಲಾಗಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.
ಇಂದಿನಿಂದ (ಮೇ 3) ರೈಲು ಯಶವಂತಪುರದಿಂದ ಮಂಗಳೂರು ಜಂಕ್ಷನ್ವರೆಗೆ ಮಾತ್ರ ಸಂಚರಿಸಲಿದ್ದು, ಅಲ್ಲಿಂದ ಕಾರವಾರದ ಸಂಚಾರವನ್ನು ಸದ್ಯಕ್ಕೆ ರದ್ದುಪಡಿಸಲಾಗಿದೆ. ಅದೇ ರೀತಿ ರೈಲು ನಂ.06212 ಕಾರವಾರ- ಯಶವಂತಪುರ ವಿಶೇಷ ಎಕ್ಸ್ಪ್ರೆಸ್ ರೈಲು ನಾಳೆಯಿಂದ ವಾರದಲ್ಲಿ ಮೂರು ದಿನ ಕಾರವಾರದ ಬದಲು ಮಂಗಳೂರು ಜಂಕ್ಷನ್ನಿಂದ ಬೆಂಗಳೂರು ನಗರಕ್ಕೆ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Next Story





