ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ
ಕೋಟ, ಮೇ 3: ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಕೋಟ ಚಚಕೇರಿಯ ಸೀತು ಪೂಜಾರ್ತಿ(70) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಮೇ 2ರಂದು ರಾತ್ರಿ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾಪು: ಖಾಯಿಲೆ ಮತ್ತು ಶರಾಬು ಕುಡಿಯುವ ಅಭ್ಯಾಸದ ವಿಚಾರದಲ್ಲಿ ಖಿನ್ನತೆಗೆ ಒಳಗಾಗಿದ್ದ ಉಳಿಯಾರಗೋಳಿ ಗ್ರಾಮದ ಕಲ್ಯಾ ನಿವಾಸಿ ಸತೀಶ್ ಶೆಟ್ಟಿ(55) ಎಂಬವರು ಎ.2ರಂದು ರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





