ಬೈಕಂಪಾಡಿ ಎಪಿಎಂಸಿ ಪ್ರಾಂಗಣದ ರಸ್ತೆ ಬದಿ ವ್ಯಾಪಾರ ನಿಷೇಧ
ಮಂಗಳೂರು, ಮೇ 4: ಕೋವಿಡ್-19ರ 2ನೇ ಸಾಂಕ್ರಾಮಿಕ ಅಲೆಯು ಸಾರ್ವತ್ರಿಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ಎಪಿಎಂಸಿಯ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣದ ರಸ್ತೆ ಬದಿ ವ್ಯಾಪಾರವನ್ನು ನಿಷೇಧಿಸಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಸಹಿತ ವ್ಯಾಪಾರ ವಹಿವಾಟಿಗೆ ಅವಕಾಶವಿದೆ. ವ್ಯಾಪಾರಿಗಳು ಸರಕಾರದ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವ್ಯಾಪಾರ ಮಾಡಬಹುದಾಗಿದೆ. ಆದರೆ ವ್ಯಾಪಾರ ವಹಿವಾಟಿಗೆ ನಿಗದಿಪಡಿಸಿದ ಗೋದಾಮು/ಅಂಗಡಿ ಹೊರತುಪಡಿಸಿ ಪ್ರಾಂಗಣದ ರಸ್ತೆ ಬದಿಯಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ವ್ಯಾಪಾರ ಮಾಡುವುದನ್ನು ನಿಷೇಧಿಸಲಾಗಿದೆ. ನಿಗದಿತ ಸ್ಥಳಗಳನ್ನು ಹೊರತುಪಡಿಸಿ ಇತರ ಕಡೆ ವ್ಯಾಪಾರ ಮಾಡುವುದು ಕಾನೂನು ಬಾಹಿರವಾಗಿರುತ್ತದೆ ಎಂದು ತಿಳಿಸಿದ್ದಾರೆ.
Next Story





