Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ ಕೋವಿಡ್ ಕರ್ಫ್ಯೂ...

ದ.ಕ. ಜಿಲ್ಲೆಯಲ್ಲಿ ಕೋವಿಡ್ ಕರ್ಫ್ಯೂ ಮತ್ತಷ್ಟು ಬಿಗಿ; ಸೆಕ್ಟರ್ ಮ್ಯಾಜಿಸ್ಟ್ರೇಟ್‌ಗಳ ನೇಮಕ: ಜಿಲ್ಲಾಧಿಕಾರಿ ರಾಜೇಂದ್ರ

ಬೆಳಗ್ಗೆ 6ರಿಂದ 9ರೊಳಗೆ ಸಾಮಗ್ರಿ ಖರೀದಿಗೆ ಅವಕಾಶ ಎಂದ ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ6 May 2021 6:42 PM IST
share
ದ.ಕ. ಜಿಲ್ಲೆಯಲ್ಲಿ ಕೋವಿಡ್ ಕರ್ಫ್ಯೂ ಮತ್ತಷ್ಟು ಬಿಗಿ; ಸೆಕ್ಟರ್ ಮ್ಯಾಜಿಸ್ಟ್ರೇಟ್‌ಗಳ ನೇಮಕ: ಜಿಲ್ಲಾಧಿಕಾರಿ ರಾಜೇಂದ್ರ

ಮಂಗಳೂರು, ಮೇ 6: ಕೋವಿಡ್-19ರ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಜಾರಿಗೊಳಿಸಿರುವ ಕರ್ಫ್ಯೂವನ್ನು ದ.ಕ.ಜಿಲ್ಲೆಯಲ್ಲಿ ಮತ್ತಷ್ಟು ಬಿಗಿಗೊಳಿಸಿ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿದೆ. ಅದರಂತೆ ಮೇ 7ರಿಂದ ಅನ್ವಯವಾಗುವಂತೆ ಬೆಳಗ್ಗೆ 6 ಗಂಟೆಯಿಂದ ಬೆಳಗ್ಗೆ 9 ಗಂಟೆಯವರೆಗೆ (ಕೇವಲ 3 ಗಂಟೆ ಮಾತ್ರ) ಅಗತ್ಯ ಸಾಮಗ್ರಿಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ ಅಂಗಡಿ ಮಾಲಕರು ಮತ್ತು ಗ್ರಾಹಕರು ಬೆಳಗ್ಗೆ 10ರೊಳಗೆ ತಮ್ಮ ಮನೆ ಸೇರಿಕೊಳ್ಳಬೇಕು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಕೊರೋನ ಸೋಂಕು ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸುವ ಬಗ್ಗೆ ಚರ್ಚಿಸಲು ದ.ಕ. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ತುರ್ತು ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕೊರೋನ ಕರ್ಫ್ಯೂ ಜಾರಿಗೊಳಿಸಿ 8 ದಿನಗಳಾದರೂ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ, ಸಾರ್ವಜನಿಕರು ಅನಗತ್ಯ ವಾಗಿ ಸಣ್ಣಪುಟ್ಟ ನೆಪಗಳನ್ನು ಹೇಳಿಕೊಂಡು ನಗರದ ತುಂಬೆಲ್ಲಾ ಅನಾವಶ್ಯಕವಾಗಿ ಓಡಾಡುತ್ತಿರುವುದು, ಕೊರೋನ ಮಾರ್ಗಸೂಚಿಗಳನ್ನು ಪಾಲಿಸದಿರುವುದು ಹೆಚ್ಚಳಕ್ಕೆ ಕಾರಣವಾಗಿದೆ. ಕರ್ಫ್ಯೂ ಅನುಷ್ಠಾನವನ್ನು ಸಮರ್ಪಕವಾಗಿ ಆಗುವಂತೆ ನೋಡಿಕೊಳ್ಳುವುದರ ಜೊತೆಗೆ ಕೊರೋನ ನಿಯಂತ್ರಣ ಮಾರ್ಗಸೂಚಿಗಳು ಪಾಲಿಸಲು ಅಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ಕೋಟ ಹೇಳಿದರು.

ಸಾರ್ವಜನಿಕರು ದೈನಂದಿನ ಅಗತ್ಯ ವಸ್ತುಗಳನ್ನು ಅವಶ್ಯವಿದ್ದಲ್ಲಿ ಮಾತ್ರ ಖರೀದಿಗೆ ಮನೆಯಿಂದ ಹೊರಬರಬೇಕು. ಶನಿವಾರ ಮತ್ತು ರವಿವಾರ ಪೂರ್ಣ ಪ್ರಮಾಣದಲ್ಲಿ ಲಾಕ್‌ಡೌನ್ ಮಾಡಲು ಚಿಂತಿಸಲಾಗಿದೆ. ಕೊರೋನ ಪ್ರಕರಣಗಳು ಏರುಗತಿಯಲ್ಲಿ ಕಂಡುಬಂದಲ್ಲಿ ವಾರಾಂತ್ಯದ ಲಾಕ್‌ಡೌನ್ ಅನಿವಾರ್ಯ. ಆ ದಿನಗಳಲ್ಲಿ ದಿನಸಿ ಅಂಗಡಿ ತೆರೆಯಲು ಅವಕಾಶವಿರುವುದಿಲ್ಲ ಹಾಪ್‌ಕಾಮ್ಸ್, ಹಾಲಿನ ಅಂಗಡಿಗಳು, ತರಕಾರಿ, ಹಣ್ಣುಹಂಪಲು, ತಳ್ಳುಗಾಡಿಗಳಿಗೆ ಅವಕಾಶ ನೀಡಲಾಗುವುದು ಎಂದರು.

ಕರ್ಫ್ಯೂ ಅವಧಿಯಲ್ಲಿ ವಾಹನಗಳಲ್ಲಿ ಸಂಚರಿಸುವವರನ್ನು ತಡೆದು ವಿಚಾರಿಸಬೇಕು. ನಕಲಿ ಗುರುತಿನ ಚೀಟಿ ತೋರಿಸುವವರು, ಅನಗತ್ಯವಾಗಿ ವಾಹನಗಳಲ್ಲಿ ಓಡಾಡುವುದು ಕಂಡುಬಂದರೆ ಅಂತಹ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ವಶಪಡಿಸಬೇಕು. ಕೋವಿಡ್ ನಿರೋಧಕ ಚುಚ್ಚು ಮದ್ದು ಪಡೆಯಲು ತೆರಳುವವರು, ವೈದ್ಯಕೀಯ ಚಿಕಿತ್ಸೆ ಮತ್ತಿತರ ತುರ್ತು ಕೆಲಸ ಇರುವವರು ಕಂಡುಬಂದಲ್ಲಿ ಅವರಿಗೆ ಅವಕಾಶ ಮಾಡಿ ಕೊಡಬೇಕು ಎಂದು ಸಚಿವ ಕೋಟ ಸೂಚಿಸಿದರು.

ಜಿಲ್ಲಾದ್ಯಂತ ಪೂರ್ವ ನಿಗದಿತವಾಗಿರುವ ಸಭೆ, ಸಮಾರಂಭಗಳನ್ನು ಮೇ.15ರವರೆಗೆ ಮಾತ್ರ ಅವಕಾಶ ನೀಡಬೇಕು. ಹೊಸದಾಗಿ ಯಾವುದೇ ಕಾರ್ಯಕ್ರಮ ಆಯೋಜಿಸಲು ಅವಕಾಶ ನೀಡಬಾರದು ಎಂದರು.

ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಸಾಮಾಜಿಕ ಒಳಿತಿಗಾಗಿ ಸರಕಾರ ಕೊರೋನ ಕರ್ಫ್ಯೂ ಜಾರಿಗೆ ತಂದಿದೆ. ಇದಕ್ಕೆ ಜನರು ಸಹಕರಿಸಬೇಕು. ಜನಸಾಮಾನ್ಯರು ಮತ್ತು ವ್ಯಾಪಾರಿಗಳಿಗೆ ಹೆಚ್ಚಿನ ಸಮಸ್ಯೆ ಆಗದಂತೆ ನೋಡಿಕೊಂಡು ಲಾಕ್‌ಡೌನ್ ಅನುಷ್ಠಾನಗೊಳಿಸಬೇಕು ಎಂದರು.

ಸ್ವಿಗ್ಗಿ, ಝೊಮೇಟೋ ಮುಂತಾದ ಆನ್‌ಲೈನ್ ಆಹಾರ ಪೂರೈಕೆದಾರರು ರಾತ್ರಿ 10 ಗಂಟೆಯೊಳಗೆ ಕಾರ್ಯನಿರ್ವಹಿಸಿಕೊಳ್ಳಬೇಕು ಮತ್ತು 11 ಗಂಟೆಯೊಳಗೆ ಮನೆ ಸೇರಬೇಕು ಎಂದು ನಳಿನ್ ಹೇಳಿದರು.

ಸಾರ್ವಜನಿಕರ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಲು ನಗರದ ಆಯ್ದ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಿ ಅವರನ್ನು ಪ್ರಶ್ನಿಸ ಬೇಕು ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಆದೇಶಿಸಿದರು. ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಲು ಸೆಕ್ಟರ್ ಮ್ಯಾಜಿಸ್ಟ್ರೇಟ್‌ ಗಳನ್ನು ನೇಮಿಸಲಾಗುವುದು. ಇವರು ತಮಗೆ ನಿಗದಿಪಡಿಸಿದ ವ್ಯಾಪ್ತಿಯೊಳಗೆ ಸಂಚರಿಸಿ ಯಾವುದೇ ಲಾಕ್‌ಡೌನ್ ನಿಯಮಗಳು ಉಲ್ಲಂಘನೆಯಾಗದಂತೆ ಹಾಗೂ ಜನಸಂದಣಿ ಆಗದಂತೆ ನೋಡಿಕೊಳ್ಳಬೇಕು ಎಂದರು.

ನಿರ್ಗತಿಕರು ಹಾಗೂ ಕೆಲವು ವಲಸೆ ಕಾರ್ಮಿಕರಿಗೆ ನಗರದ ನಿರಾಶ್ರಿತ ಕೇಂದ್ರಗಳಲ್ಲಿ ಊಟೋಪಚಾರದ ವ್ಯವಸ್ಥೆ ಮಾಡಬೇಕು. ಅವರ ಆರೋಗ್ಯ ತಪಾಸಣೆಗಳನ್ನು ಮಾಡಬೇಕು. ಇದರಿಂದ ಡೆಂಗ್, ಮಲೇರಿಯಾದಂತಹ ಸಾಂಕ್ರಾಮಿಕ ರೋಗ ಹರಡುವುದನ್ನು ತಡೆಯಲು ಸಾಧ್ಯವಾಗುತ್ತದೆ ಎಂದು ಡಿಸಿ ಹೇಳಿದರು.

ಸಭೆಯಲ್ಲಿ ಶಾಸಕರಾದ ಭರತ್ ವೈ. ಶೆಟ್ಟಿ, ವೇದವ್ಯಾಸ್ ಕಾಮತ್, ಹರೀಶ್ ಪೂಂಜ, ರಾಜೇಶ್ ನಾಯಕ್‌, ಸಂಜೀವ ಮಠಂದೂರು, ಉಮಾನಾಥ್ ಎ. ಕೋಟ್ಯಾನ್, ಯು.ಟಿ. ಖಾದರ್, ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಲಾ ರಾವ್, ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ಋಷಿಕೇಶ್ ಸೋನವಣೆ, ಜಿಪಂ ಸಿಇಒ ಡಾ. ಕುಮಾರ್, ಅಪರ ಜಿಲ್ಲಾಧಿಕಾರಿ ದಿನೇಶ್ ಕುಮಾರ್, ಸಹಾಯಕ ಪೊಲೀಸ್ ಆಯುಕ್ತ ಪಿ.ಎ. ಹೆಗ್ಡೆ, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್, ಜಿಲ್ಲಾ ಶಸ್ರ ಚಿಕಿತ್ಸಕ ಮತ್ತು ಅಧೀಕ್ಷಕ ಡಾ. ಸದಾಶಿವ ಶ್ಯಾನುಬೋಗ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X