ಕುಂದಾಪುರ, ಮೇ 6: ವಿಪರೀತ ಮಧ್ಯಪಾನ ಮಾಡುವ ಚಟ ಹೊಂದಿದ್ದ ಕಾಳಾವರ ಕಿರಾಬಳಿಬೆಟ್ಟು ಜಯರಾಮ ಶೆಟ್ಟಿ(68) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಎ.5ರಂದು ರಾತ್ರಿ ವೇಳೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.