ವೆನ್ಲಾಕ್ ಆಸ್ಪತ್ರೆಯ ಸಿಬ್ಬಂದಿಗೆ ಗೌರವಾರ್ಪಣೆ

ಮಂಗಳೂರು, ಮೇ 6: ಕೋವಿಡ್ ಸೋಂಕಿತರ ಸೇವೆಯಲ್ಲಿ ತೊಡಗಿಸಿಕೊಂಡಿರುವ ವೆನ್ಲಾಕ್ ಆಸ್ಪತ್ರೆಯ ವೈದ್ಯರಿಗೆ ಇತರೆ ಸಿಬ್ಬಂದಿ ವರ್ಗಕ್ಕೆ ಶಾಸಕ ವೇದವ್ಯಾಸ್ ಕಾಮತ್ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಸಮಿತಿಯ ವತಿಯಿಂದ ಗುರುವಾರ ಗೌರವಾರ್ಪಣೆ ಸಲ್ಲಿಸಿದರು.
ಈ ವೇಳೆ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ದೇಶವಿಡೀ ಕೋವಿಡ್ ಮಹಾಮಾರಿಯ ವಿರುದ್ಧ ಸಂಘಟಿತವಾಗಿ ಹೋರಾಡುತ್ತಿದೆ. ವೈದ್ಯರು, ದಾದಿಯರು,ಡಿ ಗ್ರೂಪ್ ನೌಕರರು, ಪೌರ ಕಾರ್ಮಿಕರು, ಪ್ಯಾರಾ ಮೆಡಿಕಲ್, ಆಶಾ ಕಾರ್ಯಕರ್ತೆಯರು, ವಿಜ್ಞಾನಿಗಳು, ಪೊಲೀಸ್ ಇಲಾಖೆ ಮತ್ತು ಮತ್ತಿತರ ಸರಕಾರಿ ಇಲಾಖೆಯು ಕೋವಿಡ್ ಮಣಿಸುವ ನಿಟ್ಟಿನಲ್ಲಿ ಭಗೀರಥ ಪ್ರಯತ್ನ ನಡೆಯುತ್ತಿದೆ ಎಂದರು.
ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ತಮ್ಮ ಮನೆ ಮಂದಿಯನ್ನು ಬಿಟ್ಟು ಕೋವಿಡ್ ಸೋಂಕಿತರ ಆರೈಕೆಯಲ್ಲಿ ತೊಡಗಿಸಿಕೊಂಡಿ ದ್ದಾರೆ. ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಕೋವಿಡ್ ವಿರುದ್ಧ ಸೆಣಸಾಡುತ್ತಿದ್ದಾರೆ. ಅವರ ಅವಿರತ ಶ್ರಮ, ತ್ಯಾಗ ಮನೋಭಾವವು ಪ್ರೇರಣಾದಾ ಯಕವಾಗಿದೆ. ಕೋವಿಡ್ ಯೋಧರನ್ನು ಗೌರವಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಕಾಮತ್ ಹೇಳಿದರು.
ಈ ಸಂದರ್ಭ ಬಿಜೆಪಿ ನಗರ ದಕ್ಷಿಣ ಮಂಡಲ ಅಧ್ಯಕ್ಷ ವಿಜಯ್ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣ್ಣೂರು, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ರಮೇಶ್ ಕಂಡೆಟ್ಟು, ಮುಖಂಡರಾದ ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್ ಅತ್ತಾವರ, ಅಶ್ವಿತ್ ಕೊಟ್ಟಾರಿ,ವಸಂತ ಜೆ. ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.







