ಬೆಡ್ ಬ್ಲಾಕಿಂಗ್ ಪ್ರಕರಣ: ಬಂಧಿತ ನಾಲ್ವರ ವಿಚಾರಣೆ ತೀವ್ರ
ಬೆಂಗಳೂರು, ಮೇ 6: ಕೋವಿಡ್ ಸಂದರ್ಭದಲ್ಲಿ ಬೆಡ್(ಹಾಸಿಗೆ) ಬ್ಲಾಕಿಂಗ್ ನಡೆಸುತ್ತಿದ್ದರು ಎನ್ನುವ ಆರೋಪ ಪ್ರಕರಣ ಸಂಬಂಧ ಬಂಧಿತ ನಾಲ್ವರ ವಿಚಾರಣೆಯನ್ನು ತೀವ್ರಗೊಳಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಹೇಳಿದರು.
ಬಂಧಿತ ಆರೋಪಿಗಳನ್ನು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಪಾಲಿಕೆ ವ್ಯಾಪ್ತಿಯ ಎಂಟು ವಲಯಗಳಲ್ಲಿನ ವಾರ್ ರೂಮ್‍ಗಳ ಮೇಲೆ ದಾಳಿ ನಡೆಸಿ ಸಾಕಷ್ಟು ಮಾಹಿತಿ ಕಲೆಹಾಕಿದ್ದು, ಅನುಮಾನ ಹಿನ್ನೆಲೆ ಮತ್ತಷ್ಟು ಮಂದಿಯನ್ನು ವಿಚಾರಣೆಗೊಳಪಡಿಸಲಿದ್ದೇವೆ ಎಂದು ಸಿಸಿಬಿ ಅಧಿಕಾರಿವೊಬ್ಬರು ತಿಳಿಸಿದ್ದಾರೆ.
Next Story





