ಮೈಸೂರಿಗೆ ಸಿದ್ದರಾಮಯ್ಯ ಕೊಡುಗೆ ಸ್ಮರಿಸಿದ ಸಂಸದ ಪ್ರತಾಪ್ ಸಿಂಹ

ಮೈಸೂರು, ಮೇ 6: ಒಳ್ಳೆಯ ಕೆಲಸಗಳನ್ನು ಮಾಡಿದವರನ್ನು ನೆನಸಿಕೊಳ್ಳುವುದು ಮಾಡಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಮೈಸೂರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕೊಡುಗೆಯನ್ನು ನೆನಪು ಮಾಡಿಕೊಂಡು ಸಂಸದ ಪ್ರತಾಪ್ ಸಿಂಹ ಮೆಚ್ಚುಗೆಯ ಮಾತುಗಳನ್ನು ಆಡಿದರು.
ನಗರದ ಕೆ.ಆರ್.ಎಸ್. ರಸ್ತೆಯಲ್ಲಿರು ಟ್ರಾಮ ಸೆಂಟರ್ ನೂತನ ಸೂಪರ್ ಸ್ಟೆಷಾಲಿಟಿ ಆಸ್ಪತ್ರೆ ಉದ್ಘಾಟನೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಹೇಬರು ಪಿಕೆಟಿಬಿ ಆಸ್ಪತ್ರೆ ಆವರಣದಲ್ಲಿ 270 ಬೆಡ್‍ಗಳ ಸುಸಜ್ಜಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ 127 ಕೋಟಿ ನೀಡಿ ನಿರ್ಮಾಣಕ್ಕೆ ಮೂಲ ಕಾರಣರಾಗಿದ್ದಾರೆ.
ಮೈಸೂರಿನ ಬಗ್ಗೆ ವಿಶೇಷ ಕಾಳಜಿ ವಹಿಸಿ ಮೈಸೂರಿನ ಜನರಿಗೆ ಅನುಕೂಲ ಮಾಡಿಕೊಟ್ಟ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅದೇ ರೀತಿ ಮೈಸೂರಿನಲ್ಲಿ ಜಯದೇವ, ಟ್ರಾಮ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಜಿಲ್ಲಾ ಮಟ್ಟದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಂತಹ ಆಸ್ಪತ್ರೆಗಳನ್ನು ನೀಡುವುದರ ಮೂಲಕ ದೊಡ್ಡ ಪ್ರಮಾಣದ ಅನುದಾನವನ್ನು ನೀಡಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಇವುಗಳು ಸದುಪಯೋಗವಾಗುತ್ತಿದೆ ಎಂದರೆ ಅದು ಅವರು ಕೊಟ್ಟಂತಹ ಕೊಡುಗೆ. ಇಂತಹ ಸಂದರ್ಭದಲ್ಲಿ ಅವರನ್ನು ನೆನಪು ಮಾಡಿಕೊಳ್ಳುವ ಮೂಲಕ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.







