Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಡುಗಡೆಯಾಗುವ ರೋಗಿ, ಖಾಲಿ ಬೆಡ್ ಬಗ್ಗೆ...

ಬಿಡುಗಡೆಯಾಗುವ ರೋಗಿ, ಖಾಲಿ ಬೆಡ್ ಬಗ್ಗೆ ಪ್ರತಿದಿನ ಮಾಹಿತಿ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಬೊಮ್ಮಾಯಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ6 May 2021 11:18 PM IST
share
ಬಿಡುಗಡೆಯಾಗುವ ರೋಗಿ, ಖಾಲಿ ಬೆಡ್ ಬಗ್ಗೆ ಪ್ರತಿದಿನ ಮಾಹಿತಿ ನೀಡಿ: ಖಾಸಗಿ ಆಸ್ಪತ್ರೆಗಳಿಗೆ ಬೊಮ್ಮಾಯಿ ಸೂಚನೆ

ಬೆಂಗಳೂರು, ಮೇ 6: ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಚಿಕಿತ್ಸೆ ಪಡೆದು ಬಿಡುಗಡೆ ಹೊಂದುವ ಕೋವಿಡ್ ಸೋಂಕಿತರು ಮತ್ತು ಖಾಲಿ ಆಗುವ ಹಾಸಿಗೆಗಳ ಸ್ಟೇಟಸ್ ಅನ್ನು ಇನ್ನು ಮುಂದೆ ಪ್ರತಿದಿನ ಕೋವಿಡ್ ವಾರ್ ರೂಂ ಮತ್ತು ಆಪ್ತಮಿತ್ರ ಪೋರ್ಟಲ್‍ಗೆ ನೀಡುವಂತೆ ಖಾಸಗಿ ಆಸ್ಪತ್ರೆಗಳ ಮಾಲಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಕೋವಿಡ್ ಚಿಕಿತ್ಸಾ ಹಾಸಿಗೆ ಉಸ್ತುವಾರಿ ಹಾಗೂ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಗುರುವಾರ ನಗರದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳ ಮುಖಂಡರುಗಳ ಜೊತೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರತಿದಿನ ವೈದ್ಯಕೀಯ ಕಾಲೇಜುಗಳಿಂದ ಎಷ್ಟು ರೋಗಿಗಳು ದಾಖಲಾಗುತ್ತಾರೆ? ಎಷ್ಟು ರೋಗಿಗಳು ಬಿಡುಗಡೆ ಹೊಂದುತ್ತಾರೆ ಎಂಬುದರ ಮಾಹಿತಿ ಸಿಗುತ್ತಿರಲಿಲ್ಲ. ಆದರೆ, ಇಂದಿನ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ. ಇದರ ಪರಿಣಾಮವಾಗಿ ಆಕ್ಸಿಜನ್, ಎಚ್‍ಡಿಯು, ವೆಂಟಿಲೇಟರ್ ಸೇರಿದಂತೆ ಒಟ್ಟು 1,035 ವಿವಿಧ ಪ್ರಕಾರದ ಹಾಸಿಗೆಗಳು ಸರಕಾರದ ಸುಪರ್ದಿಗೆ ಲಭಿಸಿವೆ ಎಂದರು.

ಕೋವಿಡ್ ರೋಗಿಗಳ ತಪಾಸಣೆಗೆ ಸ್ನಾತಕೋತ್ತರ, ನರ್ಸಿಂಗ್ ಮತ್ತು ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳ ಸೇವೆಯನ್ನು ಬಳಕೆ ಮಾಡಿಕೊಳ್ಳಲಾಗುವುದು. ಇದಕ್ಕಾಗಿ ವಿದ್ಯಾರ್ಥಿಗಳಿಗೆ ಗೌರವಧನ ನೀಡುವ ಸಂಬಂಧ ಸಿಎಂ ಜೊತೆ ಚರ್ಚಿಸಿ ಆದೇಶ ಹೊರಡಿಸಲಾಗುವುದು ಎಂದ ಅವರು, ಆಸ್ಪತ್ರೆಗಳಲ್ಲಿ ಆಕ್ಸಿಜನ್ ಬೆಡ್‍ಗಳ ಸಂಖ್ಯೆ ಹೆಚ್ಚಾಗಬೇಕಾಗಿದೆ. ಆಕ್ಸಿಜನ್ ಬೆಡ್ ವ್ಯವಸ್ಥೆ ಕಲ್ಪಿಸಲು ತಗಲುವ ಒಟ್ಟು ವೆಚ್ಚದ ಶೇ.75ರಷ್ಟು ಹಣವನ್ನು ಖಾಸಗಿ ಆಸ್ಪತ್ರೆಗಳಿಗೆ ರಾಜ್ಯ ಸರಕಾರ ನೀಡಲು ನಿರ್ಧರಿಸಿದೆ ಎಂದರು.

ಸರಕಾರಕ್ಕೆ ನೀಡಬೇಕಾಗಿರುವ ಹಾಸಿಗೆಗಳ ಕುರಿತು ಮನವರಿಕೆ ಮಾಡಿಕೊಳ್ಳುವ ಸಂಬಂಧ ಪ್ರತಿಯೊಂದು ಖಾಸಗಿ ಆಸ್ಪತ್ರೆಗೆ ಒಬ್ಬ ಕೆಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗುವುದು. ಪ್ರತಿ ಐದು ಆಸ್ಪತ್ರೆಗಳಿಗೆ ಒಬ್ಬ ಹಿರಿಯ ಅಧಿಕಾರಿಯನ್ನು ನೇಮಿಸಿ ಒಟ್ಟಾರೆ ಸರಕಾರದ ಪಾಲಿನ ಹಾಸಿಗೆಗಳು ಸಮರ್ಪಕವಾಗಿ ಬಳಕೆಯಾಗುವಂತೆ ನೋಡಿಕೊಳ್ಳಲು ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು

ಬೆಂಗಳೂರಿನಲ್ಲಿ ಒಟ್ಟು 5 ಸಾವಿರ ಸ್ಟೆಪ್‍ಡೌನ್ ಆಸ್ಪತ್ರೆ ನಿರ್ಮಾಣದ ಗುರಿ ಇದೆ. ಇದಕ್ಕಾಗಿ ಆಸ್ಪತ್ರೆ ಪಕ್ಕದ ದೊಡ್ಡ ಹೊಟೇಲ್‍ಗಳಲ್ಲಿನ ರೂಂಗಳನ್ನು ಪಡೆಯಲಾಗುತ್ತಿದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ'

-ಬಸವರಾಜ ಬೊಮ್ಮಾಯಿ ಗೃಹ, ಕಾನೂನು ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X