Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗಂಭೀರವಲ್ಲದ ಶೇ.30-40ರಷ್ಟು...

ಗಂಭೀರವಲ್ಲದ ಶೇ.30-40ರಷ್ಟು ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರ: ಸರಕಾರ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ7 May 2021 10:36 PM IST
share
ಗಂಭೀರವಲ್ಲದ ಶೇ.30-40ರಷ್ಟು ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರ: ಸರಕಾರ ನಿರ್ಧಾರ

ಬೆಂಗಳೂರು, ಮೇ 7: ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಹಾಸಿಗೆ ಕೊರತೆ ನೀಗಿಸುವ ಉದ್ದೇಶದಿಂದ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಂಭೀರವಲ್ಲದ ಸೋಂಕಿತರನ್ನು ಸ್ಟೆಪ್‍ಡೌನ್ ಆಸ್ಪತ್ರೆ ಇಲ್ಲವೇ ಕೋವಿಡ್ ಕೇರ್ ಸೆಂಟರ್ ಗಳಿಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲು ಸರಕಾರ ನಿರ್ಧರಿಸಿದೆ.

ಶುಕ್ರವಾರ ವಿಕಾಸಸೌಧದಲ್ಲಿ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಾ.ಸಿಎನ್.ಅಶ್ವತ್ಥನಾರಾಯಣ, ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ಚಿಕಿತ್ಸೆ ಶಿಷ್ಟಾಚಾರ ಸಮಿತಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ತಜ್ಞರು ಕೊಟ್ಟ ವರದಿ ಪ್ರಕಾರ ಶೇ.30ರಿಂದ 40ರಷ್ಟು ಗಂಭೀರವಲ್ಲದ ಸೋಂಕಿತರು ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೂಡಲೇ ಇವರೆಲ್ಲರನ್ನೂ ಸ್ಟೆಪ್‍ಡೌನ್ ಆಸ್ಪತ್ರೆಗಳಿಗೆ ಶಿಫ್ಟ್ ಮಾಡುವ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು. ಕೂಡಲೇ ಈ ಕೆಲಸ ಆಗಬೇಕು. ಇಷ್ಟು ಬೆಡ್‍ಗಳು ಖಾಲಿಯಾದರೆ ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಬೆಡ್‍ಗಳು ಲಭ್ಯವಾಗುತ್ತವೆ. ಇದರಿಂದ ಸಾವಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಡಿಸಿಎಂ ಅಶ್ವತ್ಥನಾರಾಯಣ ಸಭೆಯಲ್ಲಿ ಹೇಳಿದರು.

ಸರಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ ಖಾಸಗಿ ಆಸ್ಪತ್ರೆಗಳು ಕೂಡ ಕಡ್ಡಾಯವಾಗಿ ಈ ನಿರ್ಣಯವನ್ನು ಜಾರಿಗೆ ತರಬೇಕು. ನೋಡೆಲ್ ಅಧಿಕಾರಿಗಳ ಉಸ್ತುವಾರಿಯಲ್ಲಿ ಈ ಪ್ರಕ್ರಿಯೆ ಕಟ್ಟುನಿಟ್ಟಾಗಿ ನಡೆಯಬೇಕು. ಅನೇಕರು ಆಸ್ಪತ್ರೆಗೆ ಸೇರುವ ಅಗತ್ಯ ಇಲ್ಲದಿದ್ದರೂ ಬಂದು ಸೇರುತ್ತಿದ್ದಾರೆ. ಇದನ್ನು ತಡೆಯಬೇಕು ಹಾಗೂ ಅವರನ್ನು ಹೋಮ್ ಐಸೋಲೇಷನ್ ಮಾಡಿ ಚಿಕಿತ್ಸೆ ಕೊಡಬೇಕು. ಸರಕಾರದ ಮಾರ್ಗಸೂಚಿ ಪ್ರಕಾರ 90ಕ್ಕಿಂತ ಕಡಿಮೆ ಸ್ಯಾಚುರೇಷನ್ ಇರುವವರು ಮಾತ್ರ ಆಸ್ಪತ್ರೆಗೆ ದಾಖಲಾಗಬೇಕು. ಹಣ ಕೊಡುತ್ತಾರೆ ಎಂದು ಆಸ್ಪತ್ರೆಗಳಿಗೆ ದಾಖಲು ಮಾಡಿಕೊಳ್ಳುವಂತಿಲ್ಲ. ಇದು ಖಾಸಗಿ ಆಸ್ಪತ್ರೆಗಳಿಗೂ ಕಡ್ಡಾಯವಾಗಿ ಅನ್ವಯವಾಗುತ್ತದೆ ಎಂದು ಅವರು ಸಭೆಯಲ್ಲಿ ಹೇಳಿದರು.

ಸಂಬಂಧಿಕರಿಗೆ ಮಾಹಿತಿ ಕಡ್ಡಾಯ: ಸರಕಾರ ರೂಪಿಸಿರುವ ಕೋವಿಡ್ ಚಿಕಿತ್ಸಾ ವಿಧಾನದ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಖಾಸಗಿ ಆಸ್ಪತ್ರೆಗಳೂ ಪಾಲಿಸಬೇಕು. ಕೋವಿಡ್ ಶಿಷ್ಟಾಚಾರವನ್ನು ಯಾರೂ ಉಲ್ಲಂಘಿಸುವಂತಿಲ್ಲ. ಆಸ್ಪತ್ರೆಗಳಲ್ಲಿ ಸಮರ್ಪಕ ಚಿಕಿತ್ಸೆ ನೀಡುತ್ತಿಲ್ಲ ಎಂದು ದೂರುಗಳು ಬಂದಿವೆ. ಈ ಬಗ್ಗೆ ಕರಾರುವಕ್ಕಾದ ಸಮೀಕ್ಷೆ-ಪರಿವೇಕ್ಷಣೆ ನಡೆಸಿ. ಗುಣಮಟ್ಟದ ಚಿಕಿತ್ಸೆ ಸಿಗಬೇಕು. ಚಿಕಿತ್ಸೆಯಲ್ಲಿ ಎಲ್ಲಾದರೂ ಲೋಪವಾಗಿದ್ದರೆ ಕಠಿಣ ಕ್ರಮ ಜರುಗಿಸಿ. ಇದೇ ವೇಳೆ ರಿಮೋಟ್ ಐಸಿಯು ವ್ಯವಸ್ಥೆಯನ್ನು ಕೆಲ ದಿನಗಳಲ್ಲಿಯೇ ಅನುಷ್ಟಾನಕ್ಕೆ ತರಲಾಗುತ್ತಿದೆ ಎಂದು ಅವರು ತಿಳಿಸಿದರು.

ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಯಾವ ಚಿಕಿತ್ಸೆ ನೀಡಲಾಗುತ್ತಿದೆ? ಅವರ ಆರೋಗ್ಯ ಹೇಗಿದೆ? ಎಂಬ ಮಾಹಿತಿಯನ್ನು ಸಂಬಂಧಿಕರಿಗೆ ನೀಡುವುದು ಕಡ್ಡಾಯ. ವೈದ್ಯರು ಈ ಬಗ್ಗೆ ಸಂಬಂಧಿಕರಿಗೆ ಸಮರ್ಪಕ ಮಾಹಿತಿ ನೀಡಲಾಗುತ್ತಿಲ್ಲ ಎಂದು ದೂರುಗಳು ಬರುತ್ತಿವೆ. ಸಾವುಗಳ ಬಗ್ಗೆಯೂ ಸಮರ್ಪಕ ಆಡಿಟ್ ನಡೆಯಬೇಕು ಎಂದು ಉಪ ಮುಖ್ಯಮಂತ್ರಿ ಹೇಳಿದರು.

ರಕ್ತ ಪರೀಕ್ಷೆ ಮಾಡಿ: ಹೋಮ್ ಐಸೋಲೇಷನ್ ಆಗಿರುವ ಸೋಂಕಿತರ ರಕ್ತ ಪರೀಕ್ಷೆ ನಡೆಸುವಂತೆ ಸೂಚಿಸಿದ ಅಶ್ವತ್ಥ ನಾರಾಯಣ, ಇತ್ತೀಚಿನ ಕೆಲ ದಿನಗಳಲ್ಲಿ ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದಲ್ಲಿ ಬಹಳ ಏರುಪೇರಾಗುತ್ತಿರುವ ವರದಿಗಳು ಬರುತ್ತಿವೆ. ಹೀಗಾಗಿ ಅವರೆಲ್ಲರ ರಕ್ತ ಪರೀಕ್ಷೆ ಮಾಡಿ, ಸಮಸ್ಯೆ ಪತ್ತೆ ಹಚ್ಚಬೇಕು. ಸೋಂಕು ಪತ್ತೆ ಹಚ್ಚುವ ಕೆಲಸ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೆ ಮುಗಿಯಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತ ತ್ರಿಲೋಕ್ ಚಂದ್ರ, ಡಿಸಿಎಂ ಅವರ ಕಾರ್ಯದರ್ಶಿ ಪ್ರದೀಪ್, ಚಿಕ್ಸಿತೆಯ ಶಿಷ್ಟಾಚಾರ ಸಮಿತಿ ಅಧ್ಯಕ್ಷರೂ ಆದ ಆರೋಗ್ಯ ವಿವಿ ಕುಲಪತಿ ಡಾ.ಸಚ್ಚಿದಾನಂದ ಸೇರಿದಂತೆ ಇತರ ಹಿರಿಯ ವೈದ್ಯರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X