ಗಾಂಜಾ ಸಾಗಾಟ: ಆರೋಪಿಯ ಬಂಧನ
ಕೊಣಾಜೆ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ದೇರಳಕಟ್ಟೆ ಬಳಿ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ನಾಟೆಕಲ್ ನ ಮಹಮ್ಮದ್ ಹನೀಫ್ (33) ಎಂದು ಗುರುತಿಸಲಾಗಿದೆ.
ಈತ ದೇರಳಕಟ್ಟೆ ಬಳಿ ಸ್ಕೂಟರ್ ನಲ್ಲಿ ಸುಮಾರು ಒಂದು ಕೆ.ಜಿ.ಯಷ್ಟು ಗಾಂಜಾ ಸಾಗಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈತ ಈ ಹಿಂದೆಯೂ ಗಾಂಜಾ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಈತನ ವಿರುದ್ದ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story