ಆಂಧ್ರ: ಕ್ವಾರಿಯಲ್ಲಿ ಸ್ಫೋಟ, ಕನಿಷ್ಠ ಹತ್ತು ಕಾರ್ಮಿಕರು ಮೃತ್ಯು

ಸಾಂದರ್ಭಿಕ ಚಿತ್ರ
ಅಮರಾವತಿ: ಆಂಧ್ರಪ್ರದೇಶದ ಕಡಬ ಜಿಲ್ಲೆಯ ಕ್ವಾರಿಯೊಂದರಲ್ಲಿ ಜಿಲೆಟಿನ್ ಸ್ಫೋಟ ಸಂಭವಿಸಿದ್ದು, ಈ ದುರಂತದಲ್ಲಿ ಕನಿಷ್ಠ 10 ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಇನ್ನು ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ANI ಸುದ್ದಿಸಂಸ್ಥೆ ವರದಿ ಮಾಡಿದೆ.
ಮಾಮಿಲಪಲ್ಲಿ ಗ್ರಾಮದ ಹೊರವಲಯದಲ್ಲಿರುವ ಗಣಿಯೊಂದರಲ್ಲಿ ಜಿಲೆಟಿನ್ ಕಡ್ಡಿಗಳನ್ನು ಇಳಿಸುವಾಗ ಸ್ಫೋಟ ಸಂಭವಿಸಿದೆ ಎಂದು ಕಡಬ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಅನ್ಬುರಾಜನ್ ತಿಳಿಸಿದ್ದಾರೆ.
ಈ ಗಣಿಗಾರಿಕೆಯು ಸರಿಯಾದ ಲೈಸನ್ಸ್ ಇಲ್ಲದೇ ಕಾರ್ಯಾಚರಿಸುತ್ತಿತ್ತು ಎಂಬ ಆರೋಪ ಕೇಳಿಬಂದಿದೆ
ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ಕಡಪ ಜಿಲ್ಲಾಧಿಕಾರಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ಸ್ಫೋಟದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಜಿಲ್ಲೆಯ ಹಿರಿಯ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಘಟನೆಗೆ ಕಾರಣವನ್ನು ಶೋಧಿಸುತ್ತಿದ್ದಾರೆ.
Next Story