Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸರ್ಕಾರ ಜಿಲ್ಲಾವಾರು ಆಕ್ಸಿಜನ್...

ರಾಜ್ಯ ಸರ್ಕಾರ ಜಿಲ್ಲಾವಾರು ಆಕ್ಸಿಜನ್ ಕೋಟಾ ನಿಗದಿ ಮಾಡಲಿ: ಸಂಸದ ಪ್ರತಾಪ್ ಸಿಂಹ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ8 May 2021 9:58 PM IST
share
ರಾಜ್ಯ ಸರ್ಕಾರ ಜಿಲ್ಲಾವಾರು ಆಕ್ಸಿಜನ್ ಕೋಟಾ ನಿಗದಿ ಮಾಡಲಿ: ಸಂಸದ ಪ್ರತಾಪ್ ಸಿಂಹ ಒತ್ತಾಯ

ಮೈಸೂರು: ಚಾಮರಾಜನಗರ,ಮಂಡ್ಯ, ಹಾಸನ ಜಿಲ್ಲೆಗಳ ನಾವು ಸಹೋದರರಿದ್ದಂತೆ. ಆಕ್ಸಿಜನ್ ವಿಚಾರದಲ್ಲಿ ನಮ್ಮ ನಡುವೆ ವಿರಸ ಮೂಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಈ ಪರಿಸ್ಥಿತಿ ತಪ್ಪಬೇಕಾದರೆ ರಾಜ್ಯ ಸರ್ಕಾರ ಕೂಡಲೇ ಜಿಲ್ಲಾವಾರು ಆಕ್ಸಿಜನ್ ಕೋಟಾ ನಿಗದಿ ಮಾಡಬೇಕು. ಕೋಟಾ ನಿಗದಿಯಾಗದ ಹೊರತು ಈ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದರು.

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆ.ಆರ್.ಆಸ್ಪತ್ರೆಯಲ್ಲಿ 680 ಬೆಡ್ ಗಳಿವೆ. ಜಿಲ್ಲಾಸ್ಪತ್ರೆಯಲ್ಲಿ 400, ಟ್ರಾಮಾ ಸೆಂಟರ್ ನಲ್ಲಿ 200, ಇಎಸ್ ಐ ಆಸ್ಪತ್ರೆಯಲ್ಲಿ 50, ತುಳಸಿದಾಸ ಆಸ್ಪತ್ರೆಯಲ್ಲಿ 200, ತಾಲೂಕು ಕೇಂದ್ರಗಳಲ್ಲಿರುವ ಆಸ್ಪತ್ರೆಯಲ್ಲಿ 500, ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ 270, ಪಂಚಕರ್ಮ ಆಸ್ಪತ್ರೆಯಲ್ಲಿ 300 ಸುಮಾರು 3000 ಸಾವಿರ ಸರ್ಕಾರಿ ಆಸ್ಪತ್ರೆಗಳಲ್ಲಿ ಆಕ್ಸಿಜನೇಟೆಡ್ ಬೆಡ್ ಗಳಿವೆ. 

140 ಸಣ್ಣಪುಟ್ಟ ಹಾಗೂ ದೊಡ್ಡ ಖಾಸಗಿ ಆಸ್ಪತ್ರೆಗಳನ್ನು ಗುರುತು ಮಾಡಿದ್ದು, ಅವರು ಕೂಡ ಬಹಳ ದೊಡ್ಡ ಪ್ರಮಾಣದಲ್ಲಿ ಆಕ್ಸಿಜನ್ ಗೆ ಬೇಡಿಕೆ ಕೊಟ್ಟಿದ್ದಾರೆ. ಅವರದ್ದೂ ಕೂಡ 2900ರಷ್ಟು ಬೆಡ್ ಗಳಿವೆ. 6000ಬೆಡ್ ಗಳಿಗೆ ಆಕ್ಸಿಜನ್, ರೆಮ್ಡಿಸಿವಿರ್ ನ್ನು ಪೂರೈಸಬೇಕಾದ ಒತ್ತಡದಲ್ಲಿದ್ದೇವೆ. ಹಾಗಾಗಿ ನಿನ್ನೆ ಕೂಡ ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ಮನವಿಯನ್ನು ಮಾಡಿಕೊಂಡಿದ್ದೆ. ಒಂದು ರೀತಿಯ ಒತ್ತಡದಲ್ಲಿ ನಾವಿದ್ದೇವೆ. ಮಂಡ್ಯ, ಚಾಮರಾಜನಗರದವರು ಇಲ್ಲಿಗೆ ಬಂದಾಗ ನಮಗೆ ಆಕ್ಸಿಜನ್ ಕೊಡಲು ಸಾಧ್ಯವಾಗದಿದ್ದರೆ. ಮೈಸೂರನ್ನು ಮತ್ತೆ ಕಟಕಟೆಯಲ್ಲಿ ನಿಲ್ಲಿಸುವ ಪರಿಸ್ಥಿತಿ ನಿರ್ಮಾಣ ಆಗಲಿದೆ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು. ಮೈಸೂರಿನಲ್ಲಿ 6 ಸಾವಿರ ಬೆಡ್ ಗಳ ಆಕ್ಸಿಜನ್ ವ್ಯವಸ್ಥೆ ಆಗುತ್ತಿದೆ. ನಮಗೂ ಆಕ್ಸಿಜನ್ ಕೊರತೆ ಉಂಟಾಗಬಹುದು. ಸರ್ಕಾರ ತುರ್ತಾಗಿ ಕೋಟಾ ನಿಗದಿ ಮಾಡಲಿ. ಮುಖ್ಯಮಂತ್ರಿಗಳು ಇದನ್ನ ಆದಷ್ಟು ಬೇಗ ಮಾಡುತ್ತಾರೆಂಬ ವಿಶ್ವಾಸ ಇದೆ ಎಂದು  ಹೇಳಿದರು.

ಸಂಸದ ತೇಜಸ್ವಿ ಸೂರ್ಯ ಬಹಳ ಒಳ್ಳೆಯ ಕೆಲಸ ಮಾಡಿದ್ದಾರೆ. ಒಳ್ಳೆ ಕೆಲಸ ಮಾಡಿದ ಸಂಸದರನ್ನು ಟೀಕಿಸುವ ಬದಲು ಬೆಡ್ ಗಳ ವ್ಯವಸ್ಥೆ ಮಾಡಿ  ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದರು.

ಬಿಬಿಎಂಪಿಯ ಬೆಡ್ ಬ್ಲಾಕ್ ದಂಧೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಸಂಸದ  ತೇಜಸ್ವಿ ಸೂರ್ಯ ಅವರು ಒಂದು ಧರ್ಮದವರ ಪಟ್ಟಿ ಓದಿದರು ಎಂದು ಅವರನ್ನು ಟೀಕಿಸುತ್ತ ಈ ವಿಚಾರದಲ್ಲಿ ಹಿಮ್ಮುಖರಾಗುವಂತೆ ಮಾಡುವುದು ಸರಿಯಲ್ಲ. ವಿರೋಧ ಪಕ್ಷಗಳು ಒಳ್ಳೆಯ ಕೆಲಸ ಮಾಡಿದ ಸಂಸದರನ್ನು ಟೀಕಿಸಲು ಸಮಯ ವ್ಯರ್ಥ ಮಾಡುವ ಬದಲು  ತಮ್ಮ ಕ್ಷೇತ್ರಗಳಲ್ಲಿ ಬೆಡ್ ಗಳ ವ್ಯವಸ್ಥೆ ಮಾಡಲಿ. ಸಾಮಾಜಿಕ ಜಾಲತಾಣಗಳಲ್ಲಿ ಬೇರೆ ಕಡೆಗಳಲ್ಲಿ ತೇಜಸ್ವಿ ಸೂರ್ಯನನ್ನು ಟೀಕಿಸುವುದು ಯಾರು ಒಪ್ಪಿಕೊಳ್ಳುವ ಮಾತಲ್ಲ ಎಂದು ಕಿಡಿಕಾರಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X