Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ...

ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ: ಸಚಿವ ಡಾ. ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ9 May 2021 12:40 PM IST
share
ಮೇ 10 ರಿಂದ 18-44 ವರ್ಷ ವಯೋಮಾನದವರಿಗೆ ಕೋವಿಡ್ ಲಸಿಕೆ:  ಸಚಿವ ಡಾ. ಸುಧಾಕರ್

ಬೆಂಗಳೂರು, ಮೇ 9: ನಾಳೆಯಿಂದ(ಮೇ 10) 18ರಿಂದ 44ವರ್ಷದೊಳಗಿನ ವಯೋಮಾನದವರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುವುದೆಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. 

ಬೆಂಗಳೂರಿನ ಕೆ.ಸಿ.ಜನರಲ್, ಜಯನಗರ ಜನರಲ್, ಸರ್.ಸಿ.ವಿ.ರಾಮನ್ ಜನರಲ್, ಇಎಸ್‍ಐ ಮತ್ತು ನಿಮ್ಹಾನ್ಸ್ ಆಸ್ಪತ್ರೆಗಳಲ್ಲಿ ಹಾಗೂ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 18ರರಿಂದ 44 ವರ್ಷದವರಿಗೆ ಕೋವಿಡ್ ಲಸಿಕೆ ವಿತರಿಸಲಾಗುವುದು. ಇತರೆ ಜಿಲ್ಲೆಗಳಲ್ಲಿ ಆರಂಭಿಕವಾಗಿ ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಹಾಗೂ ಸರಕಾರಿ ಮೆಡಿಕಲ್ ಕಾಲೇಜುಗಳಲ್ಲಿ ಲಸಿಕೆ ನೀಡಲಾಗುವುದು. ಲಸಿಕೆ ಪೂರೈಕೆ ಹೆಚ್ಚಾಗುತ್ತಿದ್ದಂತೆ, ಮುಂದಿನ ದಿನಗಳಲ್ಲಿ ಇನ್ನಷ್ಟು ಲಸಿಕೆ ಕೇಂದ್ರಗಳಲ್ಲಿ ವಿತರಣೆ ಆರಂಭಿಸಲಾಗುವುದು ಎಂದು ಅವರು ವಿವರಿಸಿದ್ದಾರೆ.

ಪ್ರತಿ ವ್ಯಕ್ತಿಗೂ ಆದಷ್ಟು ಶೀಘ್ರದಲ್ಲಿ ಲಸಿಕೆ ಒದಗಿಸಲು ಸರಕಾರ ಬದ್ಧವಾಗಿದೆ. ಅಗತ್ಯ ಲಸಿಕೆ ಪೂರೈಕೆ ಮಾಡಿಕೊಳ್ಳಲು ನಿರಂತರ ಪ್ರಯತ್ನ ಸಾಗಿದೆ. ಆದ್ದರಿಂದ ಎಲ್ಲಾ ನಾಗರಿಕರು, ಅದರಲ್ಲೂ ವಿಶೇಷವಾಗಿ ನನ್ನ ಯುವಮಿತ್ರರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಬೇಕು. ಖಂಡಿತವಾಗಿ ಲಸಿಕೆ ಸಿಗುತ್ತದೆ ಎಂದು ಸಚಿವರು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ 18ರಿಂದ 44ವರ್ಷದೊಳಗಿನ ವಯೋಮಾನದವರು 3.26 ಕೋಟಿ ಮಂದಿ ಇದ್ದಾರೆ. ಎಲ್ಲರಿಗೂ 6.52 ಕೋಟಿ ಡೋಸ್ ಬೇಕಾಗಬಹುದು ಎಂದು ಅಂದಾಜಿಸಲಾಗಿದೆ. ಇದಕ್ಕಾಗಿ ರಾಜ್ಯ ಸರಕಾರದಿಂದ 2 ಕೋಟಿ ಕೋವಿಶೀಲ್ಡ್ ಡೋಸ್ ಹಾಗೂ 1 ಕೋಟಿ ಕೋವ್ಯಾಕ್ಸಿನ್ ಡೋಸ್ ಪೂರೈಕೆಗೆ ಬೇಡಿಕೆ ಇಡಲಾಗಿದೆ. ಸೀರಂ ಸಂಸ್ಥೆಯಿಂದ ಈವರೆಗೆ 6.5 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಪಡೆಯಲಾಗಿದೆ. ಇನ್ನಷ್ಟು ಲಸಿಕೆ ಮೇ 2 ಅಥವಾ ಮೂರನೇ ವಾರ ಸಿಗಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

'ಆ್ಯಪ್ ಮೂಲಕ ನೋಂದಣಿ'
18ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ವಿತರಿಸುವ ಎಲ್ಲಾ ಕೇಂದ್ರಗಳಲ್ಲಿ ಈ ಗುಂಪಿನವರಿಗೆ ಪ್ರತ್ಯೇಕ ಸ್ಥಳ ಗುರುತಿಸಲಾಗುವುದು. ಕೋವಿಡ್ ಅಥವಾ ಆರೋಗ್ಯ ಸೇತು ಆ್ಯಪ್ ಮೂಲಕ ನೋಂದಣಿ ಮಾಡಿಸಿ, ಸಮಯ ನಿಗದಿ ಮಾಡಿಕೊಂಡಿರುವವರಿಗೆ ಮಾತ್ರ ಲಸಿಕೆ ನೀಡಲಾಗುವುದು. ನೋಂದಣಿ ಇಲ್ಲದೆ ನೇರವಾಗಿ ಲಸಿಕೆ ಕೇಂದ್ರಕ್ಕೆ ಬರುವವರಿಗೆ ಅವಕಾಶವಿಲ್ಲ.
-ಡಾ.ಸುಧಾಕರ್, ಆರೋಗ್ಯ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X