Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೋವಿಡ್ ಲಸಿಕೆ, ಆಕ್ಸಿಜನ್ ಸಾಂದ್ರಕಗಳ...

ಕೋವಿಡ್ ಲಸಿಕೆ, ಆಕ್ಸಿಜನ್ ಸಾಂದ್ರಕಗಳ ಮೇಲೆ ಜಿಎಸ್ಟಿ ಮನ್ನಾ ಕೋರಿ ಸುಪ್ರೀಂ ಮಧ್ಯಪ್ರವೇಶಕ್ಕೆ ಎಸ್‍ಎಫ್‍ಐ ಅರ್ಜಿ

ವಾರ್ತಾಭಾರತಿವಾರ್ತಾಭಾರತಿ9 May 2021 6:13 PM IST
share
ಕೋವಿಡ್ ಲಸಿಕೆ, ಆಕ್ಸಿಜನ್ ಸಾಂದ್ರಕಗಳ ಮೇಲೆ ಜಿಎಸ್ಟಿ ಮನ್ನಾ ಕೋರಿ ಸುಪ್ರೀಂ ಮಧ್ಯಪ್ರವೇಶಕ್ಕೆ ಎಸ್‍ಎಫ್‍ಐ ಅರ್ಜಿ

ಬೆಂಗಳೂರು, ಮೇ 9: ದೇಶದ ಎಲ್ಲ ನಾಗರಿಕರಿಗೆ ಕೋವಿಡ್ ಲಸಿಕೆ ಉಚಿತವಾಗಿ ನೀಡುವಂತೆ ಕೇಂದ್ರ ಸರಕಾರಕ್ಕೆ ನಿರ್ದೇಶಿಸಲು ಮತ್ತು ವೈಯಕ್ತಿಕ ಬಳಕೆಯ ಆಮದು ಮೇಲೆ ವಿಧಿಸಲಾಗುತ್ತಿರುವ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್ಟಿ) ಮನ್ನಾ ಮಾಡಬೇಕೆಂದು ಕೋರಿ ಎಸ್‍ಎಫ್‍ಐ ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿದೆ.

2021ರ ಮೇ 1ರಂದು ಹೊರಡಿಸಲಾದ ಅಧಿಸೂಚನೆಯ ಮೂಲಕ ಕೇಂದ್ರ ಸರಕಾರವು ಆಕ್ಸಿಜನ್ ಸಾಂದ್ರಕಗಳ ಆಮದಿಗೆ ಶೇ.12ರಷ್ಟು ಜಿಎಸ್ಟಿ ವಿಧಿಸಿದೆ. ಇದು ಅತ್ಯಂತ ಜನವಿರೋಧಿ ನೀತಿಯಾಗಿದೆ. ದೇಶದಲ್ಲಿ ಜನ ಆಕ್ಸಿಜನ್ ಸಿಗದೆ ಪ್ರಾಣ ಬಿಡುತ್ತಿದ್ದರೂ ಕೇಂದ್ರ ಸರಕಾರ ಶೇ.12ರಷ್ಟು ಜಿಎಸ್ಟಿ ಮೂಲಕ ತೆರಿಗೆ ಸಂಗ್ರಹಕ್ಕೆ ಹೊತ್ತು ನೀಡಿರುವುದು ನೋಡಿದರೆ ಬಿಜೆಪಿ ಸರಕಾರಕ್ಕೆ ಜನರ ಹಿತ ಕಾಪಾಡುವ ಸಂವೇದನೆ ಕಳೆದುಕೊಂಡಿದೆ. ಆದುದರಿಂದ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಬೇಕು ಎಂದು ಎಸ್‍ಎಫ್‍ಐ ಕೋರಿದೆ.

ಚಾಲ್ತಿಯಲ್ಲಿರುವ ಸಾಂಕ್ರಾಮಿಕ ರೋಗವನ್ನು ಗಮನಿಸಿದರೆ, ದೇಶಾದ್ಯಂತ ಆಮ್ಲಜನಕದ ಪೂರೈಕೆ ಕೊರತೆಯಿದೆ ಮತ್ತು ನಾಗರಿಕರಿಗೆ ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಖಾತ್ರಿಪಡಿಸುವಲ್ಲಿ ಕೇಂದ್ರ ಸರಕಾರಿ ಸಂಸ್ಥೆಗಳು ವಿಫಲವಾಗಿವೆ. ಆಮ್ಲಜನಕದ ಬೇಡಿಕೆ ಪೂರೈಸಲು, ವಿವಿಧ ದೇಶಗಳಿಂದ ಆಮ್ಲಜನಕ ಸಾಂದ್ರಕಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. ಈ ಸನ್ನಿವೇಶದಲ್ಲಿ ಎಲ್ಲ ಸಾಮಾನ್ಯ ಜನರಿಗೆ ಕೈಗೆಟುಕುವ ದರದಲ್ಲಿ ಆಕ್ಸಿಜನ್ ಪ್ರವೇಶವನ್ನು ಖಾತ್ರಿಪಡಿಸಿಕೊಳ್ಳಲು ಜಿಎಸ್ಟಿ ಮನ್ನಾ ಮಾಡಬೇಕು ಎಂದು ಎಸ್‍ಎಫ್‍ಐ ಆಗ್ರಹಿಸಿದೆ.

ಸಾರ್ವತ್ರಿಕ ಸಾಮೂಹಿಕ ಲಸಿಕೆ ನೀತಿಯನ್ನು ರೂಪಿಸಲು ಮತ್ತು ಅದನ್ನು ಉಚಿತವಾಗಿ ನೀಡಲು ಕೇಂದ್ರ ಸರಕಾರಕ್ಕೆ ನಿರ್ದೇಶಿಸಲು ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಬೇಕು ಎಂದು ಅರ್ಜಿಯಲ್ಲಿ ಕೋರಿದೆ. ಪ್ರಸ್ತುತ ಎರಡು ಔಷಧೀಯ ಕಂಪೆನಿಗಳಾದ ಸೀರಮ್ ಇನ್‍ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಭಾರತ್ ಬಯೋಟೆಕ್ ಮಾತ್ರ ಭಾರತದಲ್ಲಿ ಕೋವಿಡ್-19 ಲಸಿಕೆಗಳನ್ನು ತಯಾರಿಸಲು ಪರವಾನಿಗೆ ನೀಡಿದೆ.

ಪೇಟೆಂಟ್ ಕಾಯ್ದೆ 1970ರ ಸಂಬಂಧಿತ ನಿಬಂಧನೆಗಳನ್ನು ಲಸಿಕೆಗಳ ಉತ್ಪಾದನೆಯನ್ನು ವೇಗವಾಗಿ ಮತ್ತು ದೊಡ್ಡ ಪ್ರಮಾಣದಲ್ಲಿ ಖಚಿತಪಡಿಸಿಕೊಳ್ಳಲು ಹಲವು ಔಷಧೀಯ ಕಂಪೆನಿಗಳಿಗೆ ಕಡ್ಡಾಯ ಪರವಾನಿಗೆಗಳನ್ನು ಒದಗಿಸಲು ಅರ್ಜಿಯನ್ನು ಮುಂದಿಡಲಾಗಿದೆ. ದೇಶದಲ್ಲಿ ಹಲವು ಸರಕಾರಿ ನಿಯಂತ್ರಿತ ಔಷಧೀಯ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿವೆ. ಕೇಂದ್ರ ಸರಕಾರವು ಮೂಲಸೌಕರ್ಯಗಳನ್ನು ಬಳಸಿಕೊಳ್ಳಬಹುದು ಮತ್ತು ಲಸಿಕೆಗಳ ಹೆಚ್ಚಿನ ಬೇಡಿಕೆಯನ್ನು ಪೂರೈಸಲು ಆ ಸೌಲಭ್ಯಗಳಲ್ಲಿ ಕೋವಿಡ್ ಲಸಿಕೆ ತಯಾರಿಸಬಹುದು ಎಂದು ಎಸ್‍ಎಫ್‍ಐ ತಿಳಿಸಿದೆ.

ಕೋವಿಡ್ ಮಹಾಮಾರಿ ಹಬ್ಬುತ್ತಿರುವ ಸಮಯದಲ್ಲಿ ಅಗತ್ಯ ಸರಬರಾಜು ಮತ್ತು ಸೇವೆಗಳ ವಿತರಣೆಗೆ ಸಂಬಂಧಿಸಿದ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಬೇಕು ಎಂದು ಸುಯೊ ಮೊಟೊ ರಿಟ್ ಅರ್ಜಿಯಲ್ಲಿ ಎಸ್‍ಎಫ್‍ಐ ಕೇಂದ್ರ ಸಮಿತಿ ಸಲ್ಲಿಸಿದೆ ಎಂದು ಎಸ್‍ಎಫ್‍ಐ ರಾಜ್ಯಾಧ್ಯಕ್ಷ ಅಮರೇಶ ಕಡಗದ, ರಾಜ್ಯ ಕಾರ್ಯದರ್ಶಿ ವಾಸುದೇವರೆಡ್ಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X