Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುರ್ತು ಅಗತ್ಯಕ್ಕೆ 15 ಸಾವಿರ ಆಮ್ಲಜನಕ...

ತುರ್ತು ಅಗತ್ಯಕ್ಕೆ 15 ಸಾವಿರ ಆಮ್ಲಜನಕ ಸಾಂದ್ರಕಗಳ ಖರೀದಿ: ಡಾ.ಅಶ್ವತ್ಥ ನಾರಾಯಣ

ವಾರ್ತಾಭಾರತಿವಾರ್ತಾಭಾರತಿ9 May 2021 11:14 PM IST
share
ತುರ್ತು ಅಗತ್ಯಕ್ಕೆ 15 ಸಾವಿರ ಆಮ್ಲಜನಕ ಸಾಂದ್ರಕಗಳ ಖರೀದಿ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು, ಮೇ 9: ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ತುರ್ತು ಸಂದರ್ಭದಲ್ಲಿ ಒದಗಿಸಲು ಕೂಡಲೇ 15,000 ಆಮ್ಲಜನಕ ಸಾಂದ್ರಕಗಳನ್ನು ಖರೀದಿ ಮಾಡಲಾಗುತ್ತಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ರವಿವಾರ ನಗರದ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್ ಸೋಂಕಿತರಿಗೆ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕಾರ್ಯಕ್ರಮಕ್ಕೆ ಯದುಗಿರಿ ಯತಿರಾಜ ಮಠದ ನಾರಾಯಣ ರಾಮಾನುಜ ಜಿಯರ್ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ತಕ್ಷಣವೇ ಯಾರ ಬಳಿ ಸ್ಟಾಕ್ ಇದ್ದರೆ ಅವರಿಂದ 5 ಸಾವಿರ ಸಾಂದ್ರಕಗಳನ್ನು ಖರೀದಿಸುತ್ತೇವೆ. ಉಳಿದ 10 ಸಾವಿರ ಸಾಂದ್ರಕಗಳ ಖರೀದಿಗೆ ತಕ್ಷಣವೇ ಟೆಂಡರ್ ಕರೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. 

ಮಲ್ಲೇಶ್ವರಕ್ಕೆ 70 ಮತ್ತು ಕೋಲಾರಕ್ಕೆ 20: ಮಲ್ಲೇಶ್ವರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾರಾಯಣ ರಾಮಾನುಜ ಜಿಯರ್ ಸ್ವಾಮೀಜಿ ಅವರು 70 ಆಮ್ಲಜನಕ ಸಾಂದ್ರಕಗಳನ್ನು ಕ್ಷೇತ್ರದ ಜನರ ಸೇವೆಗೆ ಮುಕ್ತಗೊಳಿಸಿದರು. ನಂತರ ಡಾ.ಅಶ್ವತ್ಥ ನಾರಾಯಣ, ಕೋಲಾರ ಸಂಸದ ಮುನಿಸ್ವಾಮಿ ಅವರಿಗೆ 20 ಸಾಂದ್ರಕಗಳನ್ನು ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಸ್ವಾಮೀಜಿ, ಕೋವಿಡ್ ಕಾರ್ಮೋಡ ಕವಿದ ಈ ಹೊತ್ತಿಗೆ ಆಮ್ಲಜನಕ ಸಾಂದ್ರಕಗಳನ್ನು ಕೊಡುತ್ತಿರುವುದು ಬೆಳ್ಳಿಗೆರೆ ಮೂಡಿದಂತೆ ಆಗಿದೆ. ಎಲ್ಲರೂ ಧೈರ್ಯವಾಗಿ ಸೋಂಕಿನ ವಿರುದ್ಧ ಹೋರಾಟ ನಡೆಸಬೇಕೆ ವಿನಾ ಎದೆಗುಂದಬಾರದು ಎಂದರು. 

ದಾನಿಗಳ ನೆರವು: ಆಕ್ಷನ್ ಕೋವಿಡ್ ಟೀಂ ಹಾಗೂ ಝಿರೋದ ಸಂಸ್ಥೆಗಳು 70 ಆಮ್ಲಜನಕ ಸಾಂದ್ರಕಗಳನ್ನು ದಾನ ಕೊಟ್ಟಿವೆ. ಸೇವಾ ಸಂಘಟನೆ ಮೂಲಕ ಜನರ ಸೇವೆಗೆ ನೀಡಲಾಗುವುದು. ಆಮ್ಲಜನಕ ಕೊರತೆ, ಅದರಲ್ಲೂ ಶೇ.85 ಆಕ್ಸಿಜನ್ ಸ್ಯಾಚುರೇಷನ್ ಕಡಿಮೆ ಇರುವವರಿಗೆ ಇವುಗಳನ್ನು ಕೊಡುತ್ತೇವೆ ಎಂದು ಅವರು ಹೇಳಿದರು. 

ಏನಿದು ಆಮ್ಲಜನಕ ಸಾಂದ್ರಕ, ಹಂಚಿಕೆ ಹೇಗೆ?: ಇದು ರೆಡಿಮೇಡ್ ಆಮ್ಲಜನಕ ಘಟಕದ ರೀತಿ ಕೆಲಸ ಮಾಡುತ್ತದೆ. ಸಾಗಾಣಿಕೆ ಸುಲಭ. ಮನೆಯಲ್ಲೇ ಸರಳವಾಗಿ ಬಳಸಬಹುದು. ಹೋಮ್ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಪದ್ಭಾಂದವನಂತೆ ಕೆಲಸ ಮಾಡುತ್ತದೆ. ಮಲ್ಲೇಶ್ವರ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾರಿಗಾದರೂ ಆಮ್ಲಜನಕದ ಕೊರತೆ ಉಂಟಾದ ತಕ್ಷಣ ಹೆಲ್ಪ್‍ಲೈನ್ ಸಂಖ್ಯೆಗೆ ಕರೆ ಮಾಡಿದರೆ ಸಾಕು. ತತ್‍ಕ್ಷಣವೇ ಅವರ ಮನೆ ಬಾಗಿಲಿಗೇ ಆಮ್ಲಜನಕ ಸಾಂದ್ರಕವನ್ನು ಸ್ವಯಂ ಸೇವಕರು ತಲುಪಿಸುತ್ತಾರೆ.

ಜತೆಗೆ, ಅದನ್ನು ಬಳಸುವ ಬಗ್ಗೆ ಮಾಹಿತಿಯನ್ನೂ ನೀಡತ್ತಾರೆ. ಆ ಸೋಂಕಿತರು ಸಾಂದ್ರಕದ ಉಪಯೋಗ ಪಡೆದು ಅಪಾಯದಿಂದ ಪಾರಾದ ಮೇಲೆ ಅಥವಾ ಅವರಲ್ಲಿ ಆಮ್ಲಜನಕದ ಸಮಸ್ಯೆ ನೀಗಿದ ನಂತರ ಅದನ್ನು ವಾಪಸ್ ಪಡೆದು, ಸ್ಯಾನಿಟೈಸ್ ಮಾಡಿ ಪುನಾ ಅಗತ್ಯ ಇರುವ ಮತ್ತೊಬ್ಬ ಸೋಂಕಿತರಿಗೆ ನೀಡಲಾಗುವುದು. ಗಂಭೀರ ಸ್ಥಿತಿಯಲ್ಲಿರುವ ಸೋಂಕಿತರಿಗೆ ಆದ್ಯತೆಯ ಮೇಲೆ ಇವುಗಳನ್ನು ನೀಡಲಾಗುವುದು. ಅತ್ಯಾಧುನಿಕವಾದ ಆಮ್ಲಜನಕ ಸಾಂದ್ರಕಗಳನ್ನು ಆಮದು ಮಾಡಿಕೊಂಡಿದ್ದು, ಅತ್ಯಂತ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X