Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ''ಕಾರ್ಪೋರೆಟ್ ವಹಿವಾಟಿನ ಮೇಲೆ ಶೇ.2...

''ಕಾರ್ಪೋರೆಟ್ ವಹಿವಾಟಿನ ಮೇಲೆ ಶೇ.2 ಕೊರೋನ ಸೆಸ್, ಉದ್ಯಮಿಗಳು, ರಾಜಕಾರಣಿಗಳ ಮೇಲೆ ಶೇ.5 ಸುಂಕ ವಿಧಿಸಿ''

ದೊರೆಸ್ವಾಮಿ ಸೇರಿ 400ಕ್ಕೂ ಹೆಚ್ಚು ಮಂದಿ ನೇತೃತ್ವದ 'ಜನಾಗ್ರಹ ಆಂದೋಲನ'ದಿಂದ ಸಿಎಂಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ10 May 2021 8:10 PM IST
share
ಕಾರ್ಪೋರೆಟ್ ವಹಿವಾಟಿನ ಮೇಲೆ ಶೇ.2 ಕೊರೋನ ಸೆಸ್, ಉದ್ಯಮಿಗಳು, ರಾಜಕಾರಣಿಗಳ ಮೇಲೆ ಶೇ.5 ಸುಂಕ ವಿಧಿಸಿ

ಬೆಂಗಳೂರು, ಮೇ 10: `ರಾಜ್ಯದಲ್ಲಿ ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ಮತ್ತು ಉಚಿತವಾಗಿ ಲಸಿಕೆ ನೀಡಲು ರಾಜ್ಯದಲ್ಲಿನ ಕಾರ್ಪೋರೇಟ್ ವಹಿವಾಟಿನ ಮೇಲೆ 'ಶೇ.2ರ ಕೊರೋನ ಸೆಸ್' ನಿಗದಿ ಮಾಡಬೇಕು. ಜೊತೆಗೆ ರಾಜ್ಯದಲ್ಲಿನ ಎಲ್ಲ ಕೋಟ್ಯಧಿಪತಿ ಉದ್ಯಮಪತಿಗಳು ಮತ್ತು ರಾಜಕಾರಣಿಗಳ ವಾರ್ಷಿಕ ಆದಾಯದ ಶೇ.5ರಷ್ಟು ಸುಂಕವಾಗಿ ಸಂಗ್ರಹಿಸಿ. ಕೂಡಲೇ ಈ ಹಣವನ್ನು ಸರಕಾರಕ್ಕೆ ಸಲ್ಲಿಸುವಂತೆ ಸುಗ್ರೀವಾಜ್ಞೆ ಹೊರಡಿಸಬೇಕು' ಎಂದು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ, ಸಾಣೆಹಳ್ಳಿಯ ಪಂಡಿತಾರಾಧ್ಯ ಸ್ವಾಮಿ, ನಾಡೋಜ ಬರಗೂರು ರಾಮಚಂದ್ರಪ್ಪ, ಸಸಿಕಾಂತ್ ಸೆಂಥಿಲ್, ಮಾವಳ್ಳಿ ಶಂಕರ್, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹಾಗೂ ನಟ ಚೇತನ್ ಸೇರಿದಂತೆ 400ಕ್ಕೂ ಹೆಚ್ಚು ಮಂದಿ ನೇತೃತ್ವದ `ಜನಾಗ್ರಹ ಆಂದೋಲನ' ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮನವಿ ಮಾಡಿದೆ.

'ಮೆಟ್ರೋ, ರಸ್ತೆ ವಿಸ್ತರಣೆ, ಸರಕಾರಿ ಸೌಧಗಳ ನಿರ್ಮಾಣ, ಮಠಗಳಿಗೆ ಅನುದಾನ ಮುಂತಾದ ಬಹುತೇಕ ತುರ್ತಲ್ಲದ ಯೋಜನೆಗಳಿಗೆ ಮಂಜೂರು ಮಾಡಿರುವ ಹಣವನ್ನು ಕೋವಿಡ್ ನಿರ್ವಹಣೆಗೆ ವರ್ಗಾವಣೆ ಮಾಡಬೇಕು. ಕೇಂದ್ರದಿಂದ ರಾಜ್ಯಕ್ಕೆ ಬರಬೇಕಿರುವ ಬರ ಪರಿಹಾರದ, ನೆರೆ ಪರಿಹಾರದ, ಜಿಎಸ್ಟಿ ಬಾಬ್ತಿನ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಆಗ್ರಹಿಸಬೇಕು. ಜೊತೆಗೆ `ಸೆಂಟ್ರಲ್ ವಿಸ್ಟಾ' (20 ಸಾವಿರ ಕೋಟಿ ರೂ.ಮೌಲ್ಯದ ಮೋದಿ ಮಹಲ್)ನಂತಹ ಐಶಾರಾಮಿ ದುಂದು ವೆಚ್ಚಗಳನ್ನು ರದ್ದುಗೊಳಿಸಿ ರಾಜ್ಯಗಳಿಗೆ ಕೋವಿಡ್ ನೆರವು ನೀಡಲು ಮುಂದಾಗಬೇಕೆಂದು ಪ್ರಧಾನಿ ಮೋದಿಯವರನ್ನು ಒತ್ತಾಯಿಸಬೇಕು' ಎಂದು ಸಲಹೆ ಮಾಡಲಾಗಿದೆ.

ಎಲ್ಲ ಊರುಗಳಲ್ಲಿ ಕೊರೋನ ಕೇರ್ ಸೆಂಟರ್ ಮತ್ತು ಆಕ್ಸಿಜನ್ ಸಹಿತ ಬೆಡ್‍ಗಳ ಸಂಖ್ಯೆಯನ್ನು ತೀವ್ರಗತಿಯಲ್ಲಿ ಪ್ರತಿನಿತ್ಯ ಹೆಚ್ಚಿಸಬೇಕು ಮತ್ತು ನಿತ್ಯವೂ ಇದರ ಮಾಹಿತಿ ಜನರಿಗೆ ನೀಡಬೇಕು. ಎಲ್ಲ ವಯಸ್ಸಿನ ಜನರಿಗೂ ಲಸಿಕೆಯನ್ನು ಸರಕಾರವೇ ಉಚಿತವಾಗಿ ನೀಡಬೇಕು. ಎಲ್ಲ ಕುಟುಂಬಗಳಿಗೂ ಪಡಿತರ ಕಿಟ್ ಅನ್ನು ವಿತರಿಸಬೇಕು. ಕೆಲಸ ಕಳೆದುಕೊಂಡಿರುವ ಅಸಂಘಟಿತ ವಲಯದ ಆಟೋ, ಟ್ಯಾಕ್ಸಿ ಚಾಲಕ, ನೇಕಾರ, ಕೃಷಿ ಕಾರ್ಮಿಕ, ಸಣ್ಣ ವ್ಯಾಪಾರಿ, ಸ್ವಯಂ ಉದ್ಯೋಗಿ ಮುಂತಾದ ಶ್ರಮಿಕ ವರ್ಗದ ಜನರಿಗೆ ದಿಲ್ಲಿ ಸರಕಾರದ ಮಾದರಿಯಲ್ಲಿ ಮಾಸಿಕ ಕನಿಷ್ಠ 5 ಸಾವಿರ ರೂ.ಗಳ ಆರ್ಥಿಕ ನೆರವು ನೀಡಬೇಕು. ಕಚೇರಿಗಳ ಸುತ್ತ ಅಲೆದಾಡಿಸದೆ ಕೂಡಲೇ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಬೇಕು. ಕೊರೋನದಿಂದ ದುಡಿಯುವ ವ್ಯಕ್ತಿಯನ್ನು ಕಳೆದುಕೊಂಡ ಕುಟುಂಬಗಳಿಗೆ ಬದುಕನ್ನು ಕಟ್ಟಿಕೊಳ್ಳಲು ಕನಿಷ್ಠ 5 ಲಕ್ಷ ರೂ.ಪರಿಹಾರ ಧನವನ್ನು ನೀಡಬೇಕು' ಎಂದು ಮನವಿ ಮಾಡಲಾಗಿದೆ.

'ಕೇರಳ, ತಮಿಳುನಾಡು, ಆಂಧ್ರ, ದಿಲ್ಲಿ ಮುಂತಾದ ಸರಕಾರಗಳು ಈಗಾಗಲೇ ಈ ನಿಟ್ಟಿನಲ್ಲಿ ನಿರ್ಧಾರಗಳನ್ನು ತೆಗೆದುಕೊಂಡಾಗಿದೆ. ತಮ್ಮ ಸರಕಾರದಿಂದ ದೇಶಕ್ಕೆ ಮಾದರಿಯಾಗಬಲ್ಲ ಮತ್ತು ಜನರಿಗೆ ನಿರಾಳತೆಯನ್ನು ತರಬಲ್ಲ ಘೋಷಣೆಯ ಅಗತ್ಯವಿದೆ. ಸಿಎಂ ಆಗಿ ನೀವು ದಿಟ್ಟ ಕ್ರಮಗಳ ಮೂಲಕ ಜನರ ನೆರವಿಗೆ ಧಾವಿಸದಿದ್ದರೆ ಕೋವಿಡ್ ನಿಯಮಗಳನ್ನು ಪಾಲಿಸುತ್ತಲೇ ಪ್ರತಿಭಟಿಸುವ ಮತ್ತು `ನಿಮ್ಮ ಬಳಿಗೂ ಬರುವ' ಅನಿವಾರ್ಯ ನಿರ್ಧಾರಗಳನ್ನು ನಾವೂ ಮಾಡಲೇಬೇಕಾಗುತ್ತದೆ. ಏಕೆಂದರೆ ನಮ್ಮ ಜೀವಕ್ಕಿಂತಲೂ ಜನರ ಜೀವನ ಮುಖ್ಯವಿದೆ. ಅದರ ಪತನವನ್ನು ನೋಡುತ್ತಾ ಕೈಕಟ್ಟಿ ಕೂರಲು ನಮಗೆ ಸಾಧ್ಯವಿಲ್ಲ' ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X