Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಉಚಿತ...

ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಉಚಿತ ಆರೋಗ್ಯ ಕಿಟ್ : ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ10 May 2021 9:10 PM IST
share
ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಉಚಿತ ಆರೋಗ್ಯ ಕಿಟ್ : ಉಡುಪಿ  ಜಿಲ್ಲಾ ಉಸ್ತುವಾರಿ ಸಚಿವ ಬೊಮ್ಮಾಯಿ

ಉಡುಪಿ, ಮೇ 10: ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆಯನ್ನು ನಿಯಂತ್ರಿಸಲು, ಕೋವಿಡ್ ಸೋಂಕಿತರಾಗಿ ಹೋಂ ಐಸೋಲೇಷನ್‌ನಲ್ಲಿ ಇರುವವರಿಗೆ ಕಡ್ಡಾಯವಾಗಿ ಉಚಿತ ಅಗತ್ಯ ಮಾತ್ರೆಗಳನ್ನು ಒಳಗೊಂಡ ಕಿಟ್‌ಗಳನ್ನು ನೀಡಿ ಎಂದು ರಾಜ್ಯ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹೋಂ ಐಸೋಲೇಶನ್‌ನಲ್ಲಿರುವವರಿಗೆ ಉಚಿತವಾಗಿ ಅಗತ್ಯ ಮಾತ್ರೆಗಳ ನ್ನೊಳಗೊಂಡ ಕಿಟ್‌ಗಳನ್ನು ಕಡ್ಡಾಯವಾಗಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಪ್ರತೀ ದಿನ ಹೋಂ ಐಸೋಲೇಷನ್‌ನಲ್ಲಿ ಇರುವವರನ್ನು ಭೇಟಿ ಮಾಡಿ, ಅವರ ಆರೋಗ್ಯ ಪರಿಶೀಲನೆ ನಡೆಸಿ ವರದಿ ಪಡೆಯುವಂತೆ ತಿಳಿಸಿದರು.

ಇದರಿಂದ ರೋಗಿಗಳಿಗೆ ಆಕ್ಸಿಜನ್ ಪ್ರಮಾಣ ಕಡಿಮೆ ಇದ್ದಲ್ಲಿ ಕೂಡಲೇ ಆಸ್ಪತ್ರೆಗಳಿಗೆ ದಾಖಲಿಸಲು ಸಾಧ್ಯವಾಗುತ್ತದೆ ಹಾಗೂ ಮರಣ ಸಂಭವಿಸುವುದನ್ನು ತಡೆಯಲು ಸಾಧ್ಯವಾಗಲಿದೆ ಎಂದವರು ಹೇಳಿದರು.

ಜಿಲ್ಲೆಗೆ ಆಕ್ಸಿಜನ್: ಜಿಲ್ಲೆಯಲ್ಲಿ ಆಕ್ಸಿಜನ್ ಸರಬರಾಜು ಹೆಚ್ಚಳಕ್ಕೆ ಈಗಾಗಲೇ ಕ್ರಮ ಕೈಗೊಳ್ಳಲಾ ಗಿದೆ. ಬಹರೈನ್ ಮತ್ತು ಕುವೈತ್‌ನಿಂದ ಬರುವ ಆಕ್ಸಿಜಿನ್‌ನಲ್ಲಿ ಸಹ ಜಿಲ್ಲೆಗೆ ಸಾಕಷ್ಟು ಪ್ರಮಾಣದ ಆಕ್ಸಿಜನ್ ಸರಬರಾಜು ಮಾಡುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ 1500 ಎಲ್‌ಪಿಎಂನ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಸರಕಾರದಿಂದ ಅನುಮತಿ ದೊರೆತಿದೆ. ಸಾಕಷ್ಟು ಪ್ರಮಾಣದಲ್ಲಿ ಆಕ್ಸಿಜಿನ್ ಸಂಗ್ರಸಲು ಸಿಲೆಂಡರ್‌ಗಳ ಕೊರತೆ ಇದ್ದಲ್ಲಿ ಖಾಸಗಿಯವರಿಂದ ಲೀಸ್ ಆಧಾರದಲ್ಲಿ ಖಾಲಿ ಸಿಲೆಂಡರ್‌ ಗಳನ್ನು ಪಡೆಯಿರಿ. ಆದರೆ ಆಕ್ಸಿಜಿನ್ ಅನಗತ್ಯ ಪೋಲಾಗದಂತೆ ಎಚ್ಚರ ವಹಿಸಿ ಎಂದವರು ಸೂಚನೆ ಗಳನ್ನು ನೀಡಿದರು.

ಜಿಲ್ಲಾಸ್ಪತ್ರೆಯಲ್ಲಿ ಹೊಸದಾಗಿ ಪರೀಕ್ಷಾ ಕೇಂದ್ರ ಆರಂಭಿಸಲು ಸೂಚನೆ ನೀಡಲಾಗಿದೆ. ಜಿಲ್ಲೆಗೆ 480 ರೆಮ್‌ಡಿಸಿವರ್ ಸರಬರಾಜು ಮಾಡಿದ್ದು, ಇನ್ನೂ ಹೆಚ್ಚುವರಿಯಾಗಿ 1000 ರೆಮ್‌ಡಿಸಿವರ್ ಸರಬರಾಜು ಮಾಡುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಗೆ ಯಾವುದೇ ಅಗತ್ಯ ಔಷಧಗಳು ಮತ್ತು ಆಕ್ಸಿಜಿನ್ ಕೊರತೆ ಇದ್ದಲ್ಲಿ ಕನಿಷ್ಠ 2 ದಿನ ಮೊದಲೇ ತಮ್ಮ ಗಮನಕ್ಕೆ ತರುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈಗಾಗಲೇ ಜಿಲ್ಲೆಯಲ್ಲಿ ಅರಂಭಿಸಲಾಗಿರುವ ಕೋವಿಡ್ ಕೇರ್ ಸೆಂಟರ್ ಗಳಲ್ಲಿ ಸೋಂಕಿತರನ್ನು ದಾಖಲಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ ಸಚಿವರು, ಇದರಿಂದ ಕುಟುಂಬದ ಇತರರಿಗೆ ಸೋಂಕು ಹರಡುವುದನ್ನು ತಡೆಯುವುದರ ಜೊತೆಗೆ ತುರ್ತು ಸಂದರ್ಭದಲ್ಲಿ ಕೂಡಲೇ ಅಸ್ಪತ್ರೆಗೆ ದಾಖಲು ಮಾಡಲು ಹಾಗೂ ಸೂಕ್ತ ಚಿಕಿತ್ಸೆ ಒದಗಿಸಲು ಸಾಧ್ಯವಾಗಲಿದೆ ಎಂದರು.

ಜಿಲ್ಲೆಯಲ್ಲಿ ಖಾಸಗಿ ಸಂಸ್ಥೆಗಳ ಸಿಎಸ್‌ಆರ್ ನಿಧಿಯಿಂದ ಅಗತ್ಯವಿರುವ ವೈದ್ಯಕೀಯ ನೆರವು ಪಡೆಯುವಂತೆ ಸಚಿವರು ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ರಘುಪತಿ ಭಟ್, ಲಾಲಾಜಿ ಆರ್ ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಪಂ ಸಿಇಓ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಸ್ಪಿ ವಿಷ್ಣುವರ್ಧನ್, ಡಿಎಚ್‌ಓ ಡಾ.ಸುಧೀರ್‌ ಚಂದ್ರ ಸೂಡಾ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X