ದ.ಕ. ಜಿಲ್ಲೆ : ಕೋವಿಡ್‌ಗೆ ಐದು ಬಲಿ; 1,175 ಮಂದಿಗೆ ಕೊರೋನ ಪಾಸಿಟಿವ್

ಮಂಗಳೂರು, ಮೇ 10: ದ.ಕ. ಜಿಲ್ಲೆಯಲ್ಲಿ ಸೋಮವಾರ 5 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 790ಕ್ಕೇರಿದೆ. ಅಲ್ಲದೆ ಸೋಮವಾರ ಜಿಲ್ಲೆಯಲ್ಲಿ 1,175 ಮಂದಿಗೆ ಕೊರೋನ ಸೋಂಕು ದೃಢಪಟ್ಟಿವೆ. 985 ಮಂದಿ ಕೊರೋನ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರಗೆ 7,82,738 ಮಂದಿಯ ದ್ರವ ಪರೀಕ್ಷೆ ಮಾಡಲಾಗಿದೆ. ಆ ಪೈಕಿ 7,25,187 ಮಂದಿಯ ವರದಿ ನೆಗೆಟಿವ್ ಬಂದಿದೆ. ಅಲ್ಲದೆ 57,551 ಮಂದಿ ಕೊರೋನ ಸೋಂಕಿಗೊಳಗಾಗಿದ್ದಾರೆ. ಈ ಪೈಕಿ 44,019 ಮಂದಿ ಗುಣಮುಖರಾಗಿದ್ದಾರೆ. ಸದ್ಯ 12,742 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಸ್ಕ್ ನಿಯಮ ಉಲ್ಲಂಸಿದ 53,355 ಮಂದಿಯಿಂದ 55,70,430 ರೂ. ದಂಡ ವಸೂಲು ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Next Story





