ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿ ಬೆಡ್ ಹಂಚಿಕೆ ಪರಿಶೀಲನೆ ನಡೆಸಿದ ಸಿಎಂ ಯಡಿಯೂರಪ್ಪ

Photo: Twitter.com/CMofKarnataka
ಬೆಂಗಳೂರು, ಮೇ 11: ಬೆಂಗಳೂರಿನಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಏರುತ್ತಲಿದ್ದು, ಈ ಹಿನ್ನೆಲೆ ಇಂದು ಸ್ವತಃ ಕಾರ್ಯಾಚರಣೆಗಿಳಿದ ಸಿಎಂ ಯಡಿಯೂರಪ್ಪ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿ ಬೆಡ್ ಗಳ ಹಂಚಿಕೆ ಕುರಿತು ಪರಿಶೀಲನೆ ನಡೆಸಿದರು.
ಇಂದು ಬೆಳಗ್ಗೆ ಮಲ್ಲೇಶ್ವರಂನ ಬಿಬಿಎಂಪಿ ವಾರ್ ರೂಮ್ ಗೆ ಭೇಟಿ ನೀಡಿದ ಯಡಿಯೂರಪ್ಪ ಬೆಡ್ ಗಳ ಹಂಚಿಕೆ ಕುರಿತು ಪರಿಶೀಲಿಸಿದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತಿತರ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ ಸೌಧದಲ್ಲಿರುವ ವಾರ್ ರೂಮ್ ಗೆ ಭೇಟಿ ನೀಡಿದ ಯಡಿಯೂರಪ್ಪ ಅಧಿಕಾರಿಗಳ ಬಳಿ ಕೊರೋನ ನಿಯಂತ್ರಣಕ್ಕೆ ತೆಗೆದುಕೊಂಡ ವಿಚಾರಗಳ ಬಗ್ಗೆ ಮಾಹಿತಿ ಪಡೆದಿದ್ದಾರೆ. ಈ ಮೂಲಕ ಸರ್ಕಾರ ಮಾಡಿರುವ ವ್ಯವಸ್ಥೆಗಳನ್ನು ತಾವೇ ಸ್ವತಃ ಪರಿಶೀಲನೆ ಮಾಡಲು ಸಿಎಂ ಮುಂದಾಗಿದ್ದಾರೆ.
ಮಾನ್ಯ ಮುಖ್ಯಮಂತ್ರಿ @BSYBJP ರವರು ಇಂದು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಆರೋಗ್ಯ ಸೌಧದಲ್ಲಿ ವಾರ್ ರೂಮ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.@BBMPCOMM ಗೌರವ್ ಗುಪ್ತಾ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.#KarnatakaFightsCorona pic.twitter.com/2TaEga65rh
— CM of Karnataka (@CMofKarnataka) May 11, 2021







