ಉಡುಪಿ :18 ವರ್ಷ ಮೇಲಿನ 487 ಮಂದಿಗೆ ಕೋವಿಡ್ ಲಸಿಕೆ
ಉಡುಪಿ, ಮೇ 11: ಜಿಲ್ಲೆಯ ನಾಲ್ಕು ಲಸಿಕಾ ಕೇಂದ್ರಗಳಲ್ಲಿ ನಿನ್ನೆ ಪ್ರಾರಂಭ ಗೊಂಡ 18ರಿಂದ 44ವರ್ಷ ಪ್ರಾಯದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ಕ್ರಮದಲ್ಲಿ ಮಂಗಳವಾರ 487 ಮಂದಿ ಕೋವಿಡ್ ಲಸಿಕೆ ನೀಡಲಾಯಿತು. ಈ ಮೂಲಕ ಎರಡು ದಿನಗಳಲ್ಲಿ ಒಟ್ಟು 873 ಮಂದಿಗೆ ಲಸಿಕೆಯನ್ನು ನೀಡಿದಂತಾಗಿದೆ ಎಂದು ಎಂದು ಡಿಎಚ್‌ಓ ಡಾ.ಸುಧೀರ್‌ಚಂದ್ರ ಸೂಡ ತಿಳಿಸಿದ್ದಾರೆ.
45 ವರ್ಷ ಮೇಲಿನವರಲ್ಲಿ ಇಂದು ಎಂಟು ಮಂದಿ ಮೊದಲ ಡೋಸ್‌ನ್ನು ಪಡೆದರೆ, 1526 ಮಂದಿ ಎರಡನೇ ಡೋಸ್‌ನ್ನು ಪಡೆದುಕೊಂಡಿದ್ದಾರೆ. 103 ಮಂದಿ ಆರೋಗ್ಯ ಕಾರ್ಯಕರ್ತರು ಹಾಗೂ 70 ಮಂದಿ ಕೊರೋನ ಮುಂಚೂಣಿ ಕಾರ್ಯಕರ್ತರು ಸಹ ಇಂದು ಲಸಿಕೆಯನ್ನು ಪಡೆದಿದ್ದಾರೆ.
ಒಟ್ಟಾರೆಯಾಗಿ ಜಿಲ್ಲೆಯಲ್ಲಿಂದು 522 ಮಂದಿ ಮೊದಲ ಡೋಸ್‌ನ್ನು, 1682 ಮಂದಿ ಎರಡನೇ ಡೋಸ್ ಪಡೆದಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,95,719 ಮಂದಿ ಲಸಿಕೆಯ ಮೊದಲ ಡೋಸ್‌ನ್ನು ಪಡೆದಿದ್ದರೆ, 60,457 ಮಂದಿ ಎರಡನೇ ಡೋಸ್‌ನ್ನು ಸ್ವೀಕರಿಸಿದ್ದಾರೆ ಎಂದು ಡಾ.ಸೂಡ ತಿಳಿಸಿದರು.
Next Story





