Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅಮಾಯಕ ರೋಗಿಗಳ ಸಾವಿನಲ್ಲೂ ಶಾಸಕ...

ಅಮಾಯಕ ರೋಗಿಗಳ ಸಾವಿನಲ್ಲೂ ಶಾಸಕ ಕಾಮತ್‌ಗೆ ಪ್ರಚಾರದ ತೆವಲು: ಜೆ. ಆರ್.ಲೋಬೊ ಆರೋಪ

ವಾರ್ತಾಭಾರತಿವಾರ್ತಾಭಾರತಿ11 May 2021 8:31 PM IST
share

ಮಂಗಳೂರು, ಮೇ 11: ಮಾರಣಾಂತಿಕ ರೋಗವಾಗಿ ಪರಿಣಮಿಸಿರುವ ಕೋವಿಡ್ ಸೋಂಕಿನ ಎರಡನೇ ಅಲೆಯು ಶರವೇಗದಲ್ಲಿ ಪಸರಿಸುತ್ತಾ ಅಮಾಯಕ ರೋಗಿಗಳನ್ನು ಬಲಿ ತೆಗೆದುಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಶಾಸಕ ವೇದವ್ಯಾಸ ಕಾಮತ್ ಅಮಾಯಕ ರೋಗಿಗಳ ಸಾವಿನಲ್ಲೂ ಪ್ರಚಾರದ ತೆವಲು ಹೊಂದಿದ್ದಾರೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಕೋವಿಡ್ ಟಾಸ್ಕ್ ಫೋರ್ಸ್ ಅಧ್ಯಕ್ಷ ಜೆ.ಆರ್.ಲೋಬೊ ಆಪಾದಿಸಿದ್ದಾರೆ.

ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ವಿಷಮ ಕಾಲದಲ್ಲಿ ರೋಗ ಪೀಡಿತರಿಗೆ ಸಕಾಲಿಕವಾಗಿ ಎಲ್ಲಾ ವಿಧದ ತುರ್ತು ವೈದ್ಯಕೀಯ ನೆರವು ಒದಗಿಸಿಕೊಡುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಕೋವಿಡ್ ವಾರಿಯರ್ಸ್‌ನವರು ದಿನದ 24 ಗಂಟೆಯೂ ಸಿದ್ಧರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಆದರೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅಮಾಯಕ ರೋಗಿಗಳ ಸಾವಿನಲ್ಲೂ ರಾಜಕೀಯ ಬೇಳೆ ಬೇಯಿಸುತ್ತಿದ್ದಾರೆ. ನಾನು ಶಾಸಕನಾಗಿದ್ದಾಗ ಅಂದಿನ ಆರೋಗ್ಯ ಸಚಿವರಾಗಿದ್ದ ಯು.ಟಿ.ಖಾದರ್, ಉಸ್ತುವಾರಿ ಸಚಿವರಾಗಿದ್ದ ರಮಾನಾಥ ರೈ ಮತ್ತು ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷದ ನಾಯಕರು, ಕಾರ್ಯಕರ್ತರು ಬಡರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆಯನ್ನು ಒದಗಿಸಿಕೊಡುವ ನಿಟ್ಟಿನಲ್ಲಿ ಶ್ರಮಿಸಿದ್ದರೂ ಕೂಡ ಶಾಸಕ ಕಾಮತ್ ವೆನ್ಲಾಕ್ ಆಸ್ಪತ್ರೆಗೆ ಕಾಂಗ್ರೆಸ್ ಪಕ್ಷದ ಕೊಡುಗೆ ಶೂನ್ಯ ಎಂದಿರುವುದು ಅವರ ಅಜ್ಞಾನದ ಪರಮಾವಧಿಯಾಗಿದೆ ಎಂದರು.

ಜಿಲ್ಲೆಯಲ್ಲಿ 3.65 ಲಕ್ಷ ಮಂದಿಗೆ ಈಗಾಗಲೇ ಮೊದಲ ಹಂತದ ಕೋವಿಡ್ ಲಸಿಕೆ ನೀಡಲಾಗಿದೆ. ಬಳಿಕ 60 ದಿನಗಳ ಒಳಗೆ 2ನೇ ಹಂತದ ಲಸಿಕೆ ನೀಡಬೇಕಿದೆ. ಆದರೆ ಇದೀಗ ಬಂದಿರುವ ಲಸಿಕೆಯನ್ನು ಆದ್ಯತೆ ಮೇರಗೆ ನೀಡದೆ ಬಿಜೆಪಿ ಕಚೇರಿಯಿಂದ ಕರೆ ಮಾಡಿ ತಮಗೆ ಬೇಕಾಗಿದ್ದವರಿಗೆ ನೀಡಲಾಗುತ್ತಿದೆ. ವೇದವ್ಯಾಸ ಕಾಮತರು ರೋಗಿಗಳ ಅನುಪಾತಕ್ಕೆ ಅನುಗುಣವಾಗಿ ಸರಕಾರದೊಂದಿಗೆ ಮಾತುಕತೆ ನಡೆಸಿ ಇನ್ನಷ್ಟು ಲಸಿಕೆ ತರಿಸಿಕೊಳ್ಳುವ ಬದಲು ಲಭ್ಯವಿರುವ ಲಸಿಕೆಯನ್ನು ತನಗೆ ಬೇಕಿದ್ದವರಿಗೆ ಕೊಡಿಸುವಂತೆ ಶಿಫಾರಸ್ಸು ಮಾಡುತ್ತಿರುವುದು ನಾಚಿಕೆಯ ಸಂಗತಿ ಎಂದರು.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವೆನ್ಲಾಕ್ ಆಸ್ಪತ್ರೆಯ ಹಳೆ ಕಟ್ಟಡದ ನವೀಕರಣದಿಂದ ಹಿಡಿದು ಸುಸಜ್ಜಿತ ಬ್ಲಡ್ ಬ್ಯಾಂಕ್, ಕೋವಿಡ್ ಬಿಲ್ಡಿಂಗ್ ಆಯುಷ್ ಬಿಲ್ಡಿಂಗ್ ಎಲ್ಲವೂ ಆಗಿತ್ತು. ಆದರೆ ಹಾಲಿ ಶಾಸಕರು ಆಸ್ಪತ್ರೆ ಅಭಿವೃದ್ಧಿ ಸಮಿತಿಯನ್ನು ರಚಿಸಿಲ್ಲ. ತಾನು ಮಾಡದ ಕೆಲಸಕ್ಕೂ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ. ಇನ್ನಾದರೂ ತನ್ನನ್ನು ಪ್ರಾಮಾಣಿಕವಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಚಿಂತಿಸಲಿ. ಅದು ಬಿಟ್ಟು ಬಾಲಿಷ ಹೇಳಿಕೆ ನೀಡುವುದನ್ನು ನಿಲ್ಲಿಸಲಿ ಎಂದು ಜೆ,ಆರ್,ಲೋಬೋ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮನಪಾ ವಿಪಕ್ಷ ನಾಯಕ ಎ.ಸಿ.ವಿನಯರಾಜ್, ಕಾರ್ಪೊರೇಟರ್‌ಗಳಾದ ಅಶ್ರಫ್ ಬಜಾಲ್, ಸಂಶುದ್ದೀನ್ ಕುದ್ರೋಳಿ, ಪಕ್ಷದ ಪದಾಧಿಕಾರಿಗಳಾದ ಪ್ರಕಾಶ್ ಸಾಲ್ಯಾನ್, ಸಂತೋಷ್ ಶೆಟ್ಟಿ, ವಿಶ್ವಾಸ್‌ಕುಮಾರ್ ದಾಸ್, ಟಿ.ಕೆ.ಸುಧೀರ್, ಮುಹಮ್ಮದ್ ಕುಂಜತ್ತಬೈಲ್, ನೀರಜ್‌ಪಾಲ್, ಆರೀಫ್ ಬಾವಾ, ರಮಾನಂದ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X