Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕೊರೋನ-ಲಾಕ್‌ಡೌನ್ ಹಿನ್ನೆಲೆ:...

ಕೊರೋನ-ಲಾಕ್‌ಡೌನ್ ಹಿನ್ನೆಲೆ: ಮುಟ್ಟುಗೋಲು ಹಾಕಲ್ಪಟ್ಟ ವಾಹನ ಬಿಡಿಸುವುದು ಸದ್ಯ ಸುಲಭವಲ್ಲ !

ವಾರ್ತಾಭಾರತಿವಾರ್ತಾಭಾರತಿ11 May 2021 9:18 PM IST
share

ಮಂಗಳೂರು, ಮೇ 11: ಕೊರೋನ-ಲಾಕ್‌ಡೌನ್-ಕರ್ಫ್ಯೂ ಅವಧಿಯಲ್ಲಿ ಪೊಲೀಸರು ವಶಪಡಿಸಿಕೊಂಡ ವಾಹನಗಳನ್ನು ಬಿಡಿಸಲು ಸದ್ಯ ಸುಲಭವಿಲ್ಲ. ಅಂದರೆ ಪೊಲೀಸರು ವಶಪಡಿಸಿಕೊಂಡ ಈ ವಾಹನವನ್ನು ಬಿಡಿಸಲು ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ. ಸದ್ಯ ನ್ಯಾಯಾಲಯ ತೆರೆದಿದ್ದರೂ ಕೂಡ ಕೋವಿಡ್-19 ಹಿನ್ನೆಲೆಯಲ್ಲಿ ಕಲಾಪಗಳು ನಡೆಯುತ್ತಿಲ್ಲ. ಹಾಗಾಗಿ ಪೊಲೀಸರು ಅನಗತ್ಯವಾಗಿ ತಿರುಗಾಡಿದ ವಾಹನಗಳನ್ನು ವಶಪಡಿಸಿಕೊಂಡರೆ ಅವುಗಳನ್ನು ಬಿಡಿಸಲು ಕನಿಷ್ಟ ಒಂದೆರೆಡು ತಿಂಗಳು ಕಾಯಬೇಕಾಗುತ್ತದೆ.

ಕೊರೋನ-ಕರ್ಫ್ಯೂ ವೇಳೆ ಮಾರ್ಗಸೂಚಿ ಉಲ್ಲಂಘಿಸಿ ವಾಹನ ಚಲಾಯಿಸಿದರೆ ಏನೂ ಆಗುವುದಿಲ್ಲ ಎಂದು ಭಾವಿಸುವವರಿಗೆ ಪೊಲೀಸರ ಈ ಬಿಗು ನಿಲುವು ವಾಹನಿಗರಿಗೆ ಸಮಸ್ಯೆಯಾಗಿ ಪರಿಣಮಿಸಿದರೆ ಆಶ್ಚರ್ಯವಿಲ್ಲ.

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ ಮತ್ತು ದ.ಕ. ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ದ್ವಿಚಕ್ರ ವಾಹನಗಳ ಸಹಿತ ಸುಮಾರು 2,500ಕ್ಕೂ ಅಧಿಕ ವಾಹನಗಳನ್ನು ಪೊಲೀಸ್ ಇಲಾಖೆ ಮುಟ್ಟುಗೋಲು ಹಾಕಿವೆ. ಆ ಪೈಕಿ ಕೆಲವು ವಾಹನಗಳನ್ನು ಪ್ರತ್ಯೇಕ ನಿಯಮದಡಿ ದಂಡ ಕಟ್ಟಿ ಬಿಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಇನ್ನು ಕೆಲವು ವಿನಾ ಕಾರಣ ಸುತ್ತಾಡುತ್ತಿದ್ದು, ಆ ವಾಹನಗಳ ಮೇಲೆ ಎಂಡಿಎಂಎ ಕಾಯ್ದೆಯಡಿ ಎಪಿಡೆಮಿಕ್ ಕೇಸು ಹಾಕಲಾಗಿದೆ. ಕೊರೋನ ಕರ್ಫ್ಯೂ ನಿರ್ಬಂಧ ಉಲ್ಲಂಸಿದ ಕಾರಣ ಈ ವಾಹನವನ್ನು ನ್ಯಾಯಾಲಯಗಳಲ್ಲೇ ದಾಖಲೆಗಳನ್ನು ಹಾಜರುಪಡಿಸಿ ಬಿಡಿಸಬೇಕಾಗುತ್ತದೆ.

ಆದರೆ ಈಗ ಕೋವಿಡ್-19 ಹಿನ್ನೆಲೆಯಲ್ಲಿ ನ್ಯಾಯಾಲದ ತೆರೆದಿದ್ದರೂ ಕಲಾಪಗಳು ನಡೆಯುತ್ತಿಲ್ಲ. ಹಾಗಾಗಿ ಮುಟ್ಟುಗೋಲು ಆದ ವಾಹನ ಗಳನ್ನು ಠಾಣೆಯ ಆವರಣದಲ್ಲೇ ಇಡಬೇಕಾಗುತ್ತದೆ. ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಮುಟ್ಟುಗೋಲು ಹಾಕಲಾದ ವಾಹನಗಳನ್ನಿಡಲು ಸ್ಥಳಾವಕಾಶದ ಕೊರತೆಯೂ ಇದೆ.

ವಶಕ್ಕೆ ಪಡೆದ ವಾಹನಗಳು ಕಳವು ಆಗದಂತೆ ಅಥವಾ ಅವುಗಳಿಗೆ ಹಾನಿಯಾಗದಂತೆ ಸಂರಕ್ಷಿಸಿಡುವ ಜವಾಬ್ದಾರಿ ಕೂಡ ಪೊಲೀಸ್ ಇಲಾಖೆಯ ಮೇಲಿದೆ. ಒಂದು ವೇಳೆ ವಾಹನಗಳಿಗೆ ಹಾನಿ ಉಂಟಾದರೆ ಪೊಲೀಸರೇ ಅದರ ವೆಚ್ಚವನ್ನು ಭರಿಸಬೇಕಾಗುತ್ತದೆ. ಹಾಗಾಗಿ ವಾಹನಗಳನ್ನು ಸಂರಕ್ಷಿಸಿಡುವ ಜವಾಬ್ದಾರಿಯನ್ನು ಪ್ರತಿಯೊಂದು ಠಾಣೆಯಲ್ಲಿ ಒಂದಿಬ್ಬರು ಪೊಲೀಸ್ ಸಿಬ್ಬಂದಿಗೆ ವಹಿಸಿ ಕೊಡಲಾಗಿದೆ.
ಆದಾಗ್ಯೂ ನಿಯಮ ಉಲ್ಲಂಘಿಸಿ ರಸ್ತೆಗೆ ಇಳಿಯುವ ವಾಹನಗಳ ಮೇಲೆ ಕಣ್ಣಿಡಲು ಪೊಲೀಸರು ಹಿಂದೇಟು ಹಾಕುತ್ತಿಲ್ಲ. ದಿನದಿಂದ ದಿನಕ್ಕೆ ಮುಟ್ಟು ಗೋಲು ಹಾಕಲಾಗುವ ವಾಹನಗಳ ಸಂಖ್ಯೆ ಹೆಚ್ಚುತ್ತಿರುವುದು ಅದಕ್ಕೆ ಸಾಕ್ಷಿಯಾಗಿದೆ.

ಮುಟ್ಟುಗೋಲು ಹಾಕಿದ ವಾಹನಗಳಲ್ಲಿ ಪ್ರಕರಣದ ಗಂಭೀರತೆ ಅರಿತು ಕೆಲವು ವಾಹನಗಳಿಗೆ ಮಾತ್ರ ಎಪಿಡೆಮಿಕ್ ಕೇಸು ಹಾಕಲಾಗಿದೆ. ಇದೀಗ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ಅನಗತ್ಯವಾಗಿ ವಾಹನಗಳಲ್ಲಿ ತಿರುಗಾಡಿದರೆ ಕಠಿಣ ಕ್ರಮ ಜರುಗಿಸ ಲಾಗುವುದು ಎಂದು ಮಂಗಳೂರು ನಗರ ಸಂಚಾರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ನಟರಾಜ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X