Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇಂದ್ರದಿಂದ ರಾಜ್ಯಕ್ಕೆ ಇನ್ನೂ ನಾಲ್ಕು...

ಕೇಂದ್ರದಿಂದ ರಾಜ್ಯಕ್ಕೆ ಇನ್ನೂ ನಾಲ್ಕು ಕಂಟೇನರ್ ದ್ರವೀಕೃತ ಆಮ್ಲಜನಕ ಕಂಟೇನರ್: ಜಗದೀಶ್ ಶೆಟ್ಟರ್

ಆಮ್ಲಜನಕ ಸಮರ್ಪಕ ಸರಬರಾಜಿನ ಬಗ್ಗೆ ಹೆಚ್ಚಿನ ಗಮನ ನೀಡುವಂತೆ ಸೂಚನೆ

ವಾರ್ತಾಭಾರತಿವಾರ್ತಾಭಾರತಿ11 May 2021 9:53 PM IST
share
ಕೇಂದ್ರದಿಂದ ರಾಜ್ಯಕ್ಕೆ ಇನ್ನೂ ನಾಲ್ಕು ಕಂಟೇನರ್ ದ್ರವೀಕೃತ ಆಮ್ಲಜನಕ ಕಂಟೇನರ್: ಜಗದೀಶ್ ಶೆಟ್ಟರ್

ಬೆಂಗಳೂರು, ಮೇ 11: ರಾಜ್ಯದ ಜಿಲ್ಲೆಗಳಲ್ಲಿ ಆಮ್ಲಜನಕದ ಬೇಡಿಕೆಯ ಅನುಗುಣವಾಗಿ ಅದನ್ನು ಪೂರೈಸುವುದರ ಮೇಲೆ ಹೆಚ್ಚಿನ ಗಮನ ನೀಡುವ ಮೂಲಕ ಸಮರ್ಪಕ ಸರಬರಾಜು ಆಗುವಂತೆ ನೋಡಿಕೊಳ್ಳಬೇಕು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಜ್ಯದಲ್ಲಿ ಆಕ್ಸಿಜನ್ ಪೂರೈಕೆ ಮತ್ತು ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಮಂಗಳವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜಿನ ಕುರಿತ ಸಮಗ್ರ ಮಾಹಿತಿಯನ್ನ ಪಡೆದುಕೊಂಡು ಅವರು ಮಾತನಾಡಿದರು.

ಇಂದು ರಾಜ್ಯಕ್ಕೆ ಆಗಮಿಸಿರುವ 6 ಕಂಟೇನರ್ ಆಮ್ಲಜನಕವನ್ನು ನೀಡಿದ ಕೇಂದ್ರ ಸರಕಾರಕ್ಕೆ ಅಭಿನಂದನೆ. ಮುಂದಿನ ದಿನಗಳಲ್ಲಿ ಇನ್ನೂ 4 ಕಂಟೇನರ್ ಆಮ್ಲಜನಕ ಸರಬರಾಜು ಆಗಲಿದೆ. ರಾಜ್ಯಕ್ಕೆ ಇದುವರೆಗೂ ಸರಾಸರಿ 1015 ಮೆಟ್ರಿಕ್ ಟನ್‍ನಷ್ಟು ಆಮ್ಲಜನಕವನ್ನು ನಿಯೋಜಿಸಲಾಗಿದೆ. ರಾಜ್ಯಕ್ಕೆ ವಿವಿಧ ಮೂಲಗಳಿಂದ ಅಗತ್ಯವಿರುಷ್ಟು ಪ್ರಮಾಣದ ಆಮ್ಲಜನಕ ಪೂರೈಕೆ ಆಗುತ್ತಿದೆ. ಆದರೆ, ಅದೇ ರೀತಿಯಲ್ಲಿ ಬೇಡಿಕೆಯೂ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಸರಬರಾಜನ್ನು ಕ್ರಮಬದ್ದಗೊಳಿಸುವಂತೆ ಅವರು ಸೂಚನೆ ನೀಡಿದರು.

ರಾಜ್ಯದ ಜಿಲ್ಲೆಗಳಿಗೆ ಅವುಗಳ ಬೇಡಿಕೆಯ ಅನುಗುಣವಾಗಿ ಸರಬರಾಜು ಆಗುವುದನ್ನು ನೋಡಿಕೊಳ್ಳುವತ್ತ ಹೆಚ್ಚಿನ ಗಮನ ನೀಡಬೇಕು. 24 ಗಂಟೆಯೂ ಈ ಬಗ್ಗೆ ಮಾಹಿತಿಯನ್ನು ತರಿಸಿಕೊಂಡು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕು. ಯಾವುದೇ ಗೊಂದಲ ಅಥವಾ ಸಮಸ್ಯೆಗೆ ಎಡೆಮಾಡಿಕೊಡಬಾರದು ಎಂದು ಅಧಿಕಾರಿಗಳಿಗೆ ಜಗದೀಶ್ ಶೆಟ್ಟರ್ ಸೂಚನೆ ನೀಡಿದರು.

ಕೇಂದ್ರ ಸಚಿವರಾದ ಪಿಯೂಶ್ ಗೋಯಲ್, ಪ್ರಹ್ಲಾದ್ ಜೋಷಿ ಹಾಗೂ ಸದಾನಂದಗೌಡ ಅವರೊಂದಿಗೆ ನಡೆಸಿದ ನಿರಂತರ ಸಮಾಲೋಚನೆಯಿಂದಾಗಿ ಇಂದು ಕೇಂದ್ರ ಸರಕಾರ 6 ಕಂಟೇನರ್ ಗಳಲ್ಲಿ 120 ಮೆಟ್ರಿಕ್ ಟನ್‍ನಷ್ಟು ದ್ರವೀಕೃತ ಆಮ್ಲಜನಕವನ್ನು ನೀಡಿದೆ. ಇದು ಬಹಳ ಅಭಿನಂದನೀಯ ವಿಷಯ. ಮುಂದಿನ ದಿನಗಳಲ್ಲಿ ಇನ್ನೂ 4 ಕಂಟೇನರ್ ಆಮ್ಲಜನಕ ನೀಡುವ ಭರವಸೆಯನ್ನು ಕೇಂದ್ರ ಸಚಿವರು ನೀಡಿದ್ದಾರೆ ಎಂದು ಅವರು ತಿಳಿಸಿದರು.

ಬಫರ್ ಸ್ಟೋರೇಜ್ ಹೊಂದಲು ಕ್ರಮ ಕೈಗೊಳ್ಳಿ: ರಾಜ್ಯದಲ್ಲಿ ಅನಿವಾರ್ಯ ಸಂದರ್ಭಗಳಲ್ಲಿ ಉಪಯೋಗಿಸಿಕೊಳ್ಳಲು ಅನುಕೂಲವಾಗುವಂತೆ ಬಫರ್ ಸ್ಟೋರೇಜ್ ಅನ್ನು ಹೊಂದುವುದು ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದರು.

ಸಿಲಿಂಡರ್ ಹಾಗೂ ಆಕ್ಸಿಜನ್ ಕಾನ್ಸನ್‍ಟ್ರೇಟರ್ ಒದಗಿಸಿ: ರಾಜ್ಯಕ್ಕೆ ಈಗ ಇನ್ನೂ ಹೆಚ್ಚಿನ ಸಿಲಿಂಡರ್‍ಗಳು ಹಾಗೂ ಆಕ್ಸಿಜನ್ ಕಾನ್ಸನ್‍ಟ್ರೇಟರ್ ಗಳ ಅವಶ್ಯಕತೆ ಇದೆ. ಇದುವರೆಗೂ ಕೇಂದ್ರ ಸರಕಾರದಿಂದ 320 ಸಿಲಿಂಡರ್ ಹಾಗೂ 400 ಆಕ್ಸಿಜನ್ ಕಾನ್ಸನ್‍ಟ್ರೇಟರ್ ನೀಡಿದ್ದಾರೆ. ನಾವು 7700 ಸಿಲಿಂಡರ್ ಹಾಗೂ 1000 ಆಕ್ಸಿಜನ್ ಕಾನ್ಸನ್‍ಟ್ರೇಟರ್ ಗೆ ಬೇಡಿಕೆ ಇಟ್ಟಿದ್ದು, ಕೇಂದ್ರ ಸರಕಾರದ ಜೊತೆ ಈ ಬಗ್ಗೆ ಸಮಾಲೋಚನೆ ನಡೆಸುವುದಾಗಿ ಅವರು ತಿಳಿಸಿದರು.

ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಜ್‍ಕುಮಾರ್ ಖತ್ರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಗಣಿ ಮತ್ತು ಎಂಎಸ್‍ಎಂಇ ಪ್ರಧಾನ ಕಾರ್ಯದರ್ಶಿ ಪಂಕಜ್‍ಕುಮಾರ್ ಪಾಂಡೆ, ಕೈಗಾರಿಕಾ ಅಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣಾ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಐಪಿಎಸ್ ಅಧಿಕಾರಿ ಪ್ರತಾಪ್ ರೆಡ್ಡಿ, ಕೆಐಎಡಿಬಿ ಸಿಇಓ ಡಾ.ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X