ಬೆಂಗಳೂರು: ಆಕ್ಸಿಜನ್ ದೊರೆಯದೆ ಆಸ್ಪತ್ರೆಯ ಆವರಣದಲ್ಲೇ ನರಳಾಡಿದ ರೋಗಿ

ಸಾಂದರ್ಭಿಕ ಚಿತ್ರ
ಬೆಂಗಳೂರು, ಮೇ 11: ಕೋವಿಡ್ ಸೋಂಕಿತನೋರ್ವ ತೀವ್ರ ಉಸಿರಾಟ ತೊಂದರೆಯಿಂದಾಗಿ ನರಳಾಟ ನಡೆಸಿದ ಘಟನೆ ಯಲಹಂಕದ ಐವರ ಕಂಡಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.
ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ವ್ಯಕ್ತಿ ಬೆಳಗ್ಗೆ ಆಸ್ಪತ್ರೆಗೆ ಆಗಮಿಸಿದ್ದ. ಆದರೆ, ಆಸ್ಪತ್ರೆಯಲ್ಲಿ ಆಕ್ಸಿಜನ್ ಸೇರಿದಂತೆ ಸೂಕ್ತ ಚಿಕಿತ್ಸೆ ದೊರೆಯದೆ, ಉಸಿರಾಟ ಸಮಸ್ಯೆ ಹೆಚ್ಚಾಗಿದೆ ಎಂದು ತಿಳಿದುಬಂದಿದೆ.
ಇನ್ನು, ಆಸ್ಪತ್ರೆಯ ಆವರಣದಲ್ಲೇ ಆ್ಯಂಬುಲೆನ್ಸ್ ಇದ್ದರೂ, ರೋಗಿಯನ್ನು ಬೇರೆ ಆಸ್ಪತ್ರೆಗೆ ಕಳುಹಿಸಲು ಸ್ಥಳೀಯರು ಮುಂದಾಗಿಲ್ಲ ಎಂದು ರೋಗಿಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಗ್ಯ ಕೇಂದ್ರದ ಈ ನಿರ್ಲಕ್ಷ್ಯದಿಂದಾಗಿ ಸೋಂಕಿತ ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಆಸ್ಪತ್ರೆಯ ಆವರಣದಲ್ಲೇ ಒದ್ದಾಡಿದ್ದಾನೆ ಎಂದು ಹೇಳಲಾಗುತ್ತಿದೆ.
Next Story





