Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಾಸಿಗೆ ಕೊರತೆ ನೀಗಿಸಲು 3,200 ಸ್ಟೆಪ್...

ಹಾಸಿಗೆ ಕೊರತೆ ನೀಗಿಸಲು 3,200 ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಾಣ: ಗೃಹ ಸಚಿವ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ12 May 2021 5:14 PM IST
share
ಹಾಸಿಗೆ ಕೊರತೆ ನೀಗಿಸಲು 3,200 ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಾಣ: ಗೃಹ ಸಚಿವ ಬೊಮ್ಮಾಯಿ

ಬೆಂಗಳೂರು, ಮೇ 12: ಕೋವಿಡ್ ಸೋಂಕಿತರಿಗೆ ಎದುರಾಗುತ್ತಿರುವ ಹಾಸಿಗೆಗಳ ಕೊರತೆಯನ್ನು ನೀಗಿಸುವ ಉದ್ದೇಶದಿಂದ ಈಗಾಗಲೇ 1,200 ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ನಿರ್ಮಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಇನ್ನು 2 ಸಾವಿರ ಸ್ಟೆಪ್ ಡೌನ್ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು ಎಂದು ಕೋವಿಡ್ ಬೆಡ್ ಉಸ್ತುವಾರಿ ಹಾಗೂ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿ ಖಾಸಗಿ ಆಸ್ಪತ್ರೆಗಳ ಸಂಘ, ಹೊಟೇಲ್ ಉದ್ಯಮಿಗಳ ಸಂಘ ಹಾಗೂ ಬಿಬಿಎಂಪಿ ಅಧಿಕಾರಿಗಳ ಜತೆ ವರ್ಚುವಲ್ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರಿಗೆ ಮಾತನಾಡಿದ ಅವರು, ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳ ಪಕ್ಕದಲ್ಲಿಯೇ ದೊಡ್ಡದೊಡ್ಡ ಹೊಟೇಲುಗಳಿವೆ. ಈ ಹೊಟೇಲ್‍ಗಳಲ್ಲಿ ರೂಂಗಳನ್ನು ಪಡೆದು ಅಲ್ಲಿ ಆಸ್ಪತ್ರೆ ನಿರ್ಮಿಸಲಾಗುತ್ತಿದೆ ಎಂದರು.

ಇದಕ್ಕಾಗಿ 13 ಆಸ್ಪತ್ರೆಗಳ ಜೊತೆ ಹೊಟೇಲ್‍ಗಳನ್ನು ಜೋಡಣೆ ಮಾಡಲಾಗಿದೆ. ಇನ್ನಷ್ಟು ಹೊಟೇಲ್ ಮತ್ತು ಆಸ್ಪತ್ರೆಗಳ ಜೋಡಣೆ ಕೆಲಸ ನಡೆಯುತ್ತಿದೆ. ಒಂದು ಸಾರಿ ಹೊಟೇಲ್‍ಗಳನ್ನು ಪಡೆದ ನಂತರ ಅಲ್ಲಿ ಆಕ್ಸಿಜನ್ ಕಾನ್ಸೆಂಟ್ರೇಟರ್, ರೋಗಿಗೆ ಊಟ ಮತ್ತು ಇತರೆ ಕೋವಿಡ್ ಸಂಬಂಧಿತ ಚಿಕಿತ್ಸೆ ಸೌಲಭ್ಯವನ್ನು ಕಲ್ಪಿಸಲಾಗುವುದು. ಹೊಟೇಲ್ ಸಂಘದವರ ಬೇಡಿಕೆ ಮೇರೆಗೆ ಎಸ್‍ಎಎಸ್ ಪೋರ್ಟಲ್ ಜತೆ ಸ್ಟೆಪ್‍ಡೌನ್ ಆಸ್ಪತ್ರೆಗಳನ್ನು ಜೋಡಣೆ ಮಾಡಲಾಗುವುದು. ಹೊಟೇಲ್ ಸಿಬ್ಬಂದಿಗೆ ಆದ್ಯತೆ ಮೇರೆಗೆ ಲಸಿಕೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು.

ಬೆಂಗಳೂರು ನಗರದಲ್ಲಿ ಕೋವಿಡ್ ಹಾಸಿಗೆಗಳ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳ ಆವರಣದಲ್ಲಿ ಹೆಚ್ಚುವರಿಯಾಗಿ ತಲಾ 10 ರಿಂದ 15 ಆಕ್ಸಿಜನ್ ಬೆಡ್‍ಗಳನ್ನು ನಿರ್ಮಾಣ ಮಾಡಲು ಒಪ್ಪಿಗೆ ನೀಡಲಾಗಿದೆ. ಇದಕ್ಕೆ ಸರಕಾರದಿಂದ ಸಹಕಾರ ನೀಡಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಬೆಡ್ ನೀಡದ ಆಸ್ಪತ್ರೆಗಳ ಮೇಲೆ ಕ್ರಮ: ಖಾಸಗಿ ಆಸ್ಪತ್ರೆಗಳಲ್ಲಿನ ಬೆಡ್ ಉಸ್ತುವಾರಿಗೆ ನಿಯೋಜಿಸಲಾಗಿರುವ ಹಿರಿಯ ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಲಾಯಿತು. ಸರಕಾರಕ್ಕೆ ಬೆಡ್‍ಗಳನ್ನು ನೀಡದೆ ಸುಳ್ಳು ಮಾಹಿತಿ ನೀಡುತ್ತಿದ್ದ ಮೂರು ಖಾಸಗಿ ಆಸ್ಪತ್ರೆಗಳ ಮೇಲೆ ಈಗಾಗಲೇ ಕ್ರಮ ಜರುಗಿಸಲಾಗಿದೆ. ಮೂವತ್ತಕ್ಕಿಂತಲೂ ಕಡಿಮೆ ಬೆಡ್ ಇರುವ ಆಸ್ಪತ್ರೆಗಳಿಂದಲೂ ಸರಕಾರಿ ಕೋಟಾ ಪಡೆಯಲು ನಿರ್ಧರಿಸಲಾಗಿದೆ. ಅವುಗಳಲ್ಲಿ ಐಸಿಯು ಮತ್ತು ಆಕ್ಸಿಜನ್ ಬೆಡ್‍ಗಳು ಸೇರಿವೆ. ಈ ಆಸ್ಪತ್ರೆಗಳ ಜೊತೆ ಸಮಾಲೋಚನೆ ನಡೆಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಆಕ್ಸಿಜನ್ ಪೂರೈಕೆ: ಒರಿಸ್ಸಾ, ಟಾಟಾನಗರ ಮತ್ತು ಇತರೆ ಕಡೆಗಳಿಂದ ರಾಜ್ಯಕ್ಕೆ ಆಕ್ಸಿಜನ್ ಬರಬೇಕಾಗಿದೆ. ಒಂದು ಬಾರಿ ರಾಜ್ಯಕ್ಕೆ ಆಕ್ಸಿಜನ್ ಟ್ಯಾಂಕರ್‍ಗಳು ಬಂದ ನಂತರ ಅವುಗಳ ರೀಫಿಲ್ ತೊಂದರೆಯಾಗುವುದಿಲ್ಲ. ನಿರಂತರವಾಗಿ ಆಕ್ಸಿಜನ್ ಪೂರೈಕೆ ಆಗುತ್ತದೆ. ರಾಜ್ಯದಲ್ಲಿ ಕೋವಿಡ್ ಸೋಂಕಿತರ ಪರೀಕ್ಷೆ ಕಡಿಮೆಯಾಗುತ್ತಿಲ್ಲ. ನಿಯಮಗಳ ಪ್ರಕಾರ ಯಾರಿಗೆಲ್ಲ ತಪಾಸಣೆ ಮಾಡಬೇಕೋ ಅವರೆಲ್ಲರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ಹೇಳಿದರು.

ಆತಂಕ ಬೇಡ: ವ್ಯಾಕ್ಸಿನ್ ಎಲ್ಲರಿಗೂ ಸಿಗುತ್ತದೆ. ಸ್ವಲ್ಪ ತಾಳ್ಮೆ ಇರಲಿ. ವ್ಯಾಕ್ಸಿನ್ ತಯಾರಿಕೆಯಲ್ಲಿ ವಿಳಂಬವಾಗುತ್ತಿದೆ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕು. ಆರಂಭದಲ್ಲಿ ಜನ ವ್ಯಾಕ್ಸಿನ್ ತೆಗೆದುಕೊಳ್ಳಲಿಲ್ಲ. ಈಗ ಬೇಡಿಕೆ ಹೆಚ್ಚಿದೆ. ಈಗಿರುವ ಲಸಿಕೆಯನ್ನು ಮೊದಲ ಡೋಸ್ ಪಡೆದವರಿಗೆ ಆದ್ಯತೆ ಮೇರೆಗೆ ನೀಡುವಂತೆ ಸೂಚಿಸಲಾಗಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

`ಮನೆಯಿಂದ ಹೊರಗೆ ಬರುವ ಮುನ್ನ ಸಾರ್ವಜನಿಕರು ಒಂದು ಬಾರಿ ಯೋಚಿಸಬೇಕು. ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಇದೆ. ಸೋಂಕಿನಿಂದ ಸಾವು-ನೋವುಗಳು ಆಗುತ್ತಿವೆ. ನಮ್ಮ ಆರೋಗ್ಯ, ನಮ್ಮ ಕುಟುಂಬದ ಆರೋಗ್ಯ ಮತ್ತು ನಮ್ಮೆಲ್ಲರ ಆರೋಗ್ಯ ನಮ್ಮ ಕೈಯಲ್ಲಿಯೇ ಇದೆ. ಇದನ್ನು ತಿಳಿದುಕೊಂಡರೆ ಒಳ್ಳೆಯದು'

-ಬಸವರಾಜ್ ಬೊಮ್ಮಾಯಿ, ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X