Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಓಲಾ ಕ್ಯಾಬ್ ಮೂಲಕ ಮನೆ...

ಬೆಂಗಳೂರು: ಓಲಾ ಕ್ಯಾಬ್ ಮೂಲಕ ಮನೆ ಬಾಗಿಲಿಗೆ ಆಮ್ಲಜನಕ ಒದಗಿಸುವ ಕಾರ್ಯಕ್ರಮಕ್ಕೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ12 May 2021 6:17 PM IST
share
ಬೆಂಗಳೂರು: ಓಲಾ ಕ್ಯಾಬ್ ಮೂಲಕ ಮನೆ ಬಾಗಿಲಿಗೆ ಆಮ್ಲಜನಕ ಒದಗಿಸುವ ಕಾರ್ಯಕ್ರಮಕ್ಕೆ ಚಾಲನೆ

ಬೆಂಗಳೂರು, ಮೇ 12: ಆಮ್ಲಜನಕ ಕೊರತೆ ಎದುರಿಸುತ್ತಿರುವ ಕೋವಿಡ್ ಸೋಂಕಿತರಿಗೆ ಮನೆ ಬಾಗಿಲಿಗೆ ಓಲಾ ಕ್ಯಾಬ್‍ಗಳ ಮೂಲಕ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಮಹತ್ವದ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಬುಧವಾರ ಚಾಲನೆ ನೀಡಿದರು.

ಮೊಟ್ಟ ಮೊದಲಿಗೆ ಬೆಂಗಳೂರು ನಗರದಲ್ಲಿ ಈ ವ್ಯವಸ್ಥೆ ಆರಂಭವಾಗುತ್ತಿದ್ದು, ಕ್ರಮೇಣ ರಾಜ್ಯಾದ್ಯಂತ ವಿಸ್ತರಣೆಯಾಗಲಿದೆ. ಈ ಕೆಲಸದಲ್ಲಿ ರಾಜ್ಯ ಸರಕಾರದ ಜತೆ ಗಿವ್ ಇಂಡಿಯಾ ಹಾಗೂ ಓಲಾ ಕ್ಯಾಬ್ ಕಂಪೆನಿಗಳು ಕೈಜೋಡಿಸಿವೆ ಎಂದು ಡಾ.ಅಶ್ವತ್ಥ ನಾರಾಯಣ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಡಾ.ಅಶ್ವತ್ಥ ನಾರಾಯಣ, 'ಇಡೀ ರಾಜ್ಯದಲ್ಲಿಯೇ ಮೊತ್ತ ಮೊದಲಿಗೆ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಕೋವಿಡ್ ಸೋಂಕಿನಿಂದ ಗಂಭೀರ ಸ್ವರೂಪದಲ್ಲಿರುವ ರೋಗಿಗಳ ಮನೆ ಬಾಗಿಲಿಗೆ ಆಮ್ಲಜನಕ ಸಾಂದ್ರಕಗಳನ್ನು ಒದಗಿಸುವ ಕೆಲಸವನ್ನು ನಾನು ಆರಂಭ ಮಾಡಿದೆ. ಅದಕ್ಕೆ ಉತ್ತಮ ಫಲಿತಾಂಶ ಸಿಕ್ಕಿತು. ಈಗ ಇಡೀ ಬೆಂಗಳೂರಿಗೆ ವಿಸ್ತರಿಸುತ್ತಿದ್ದು, ಅದಕ್ಕೆ ಓಲಾ ಸಹಕಾರ ನೀಡುತ್ತಿರುವುದು ಖುಷಿಯ ವಿಚಾರ' ಎಂದು ಬಣ್ಣಿಸಿದರು.

ಹೋಮ್ ಐಸೋಲೇಷನ್ ಆಗಿರುವ ಯಾರೇ ಸೋಂಕಿತರಲ್ಲಿ ಆಮ್ಲಜನಕದ ಸ್ಯಾಚುರೇಶನ್ ಮಟ್ಟವು ಶೇ.94ಕ್ಕಿಂತ ಕಡಿಮೆ ಇದ್ದರೆ ಅಂಥವರಿಗೆ ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗುವುದು. ಅವರು ಓಲಾ ಆಪ್ ಮೂಲಕ ಆನ್‍ಲೈನ್‍ನಲ್ಲಿ ಬೇಡಿಕೆ ಸಲ್ಲಿಸಿದ 30 ನಿಮಿಷದೊಳಗೆ ಅವರಿಗೆ ತಲುಪುತ್ತದೆ. ಸೋಂಕಿತರು 5 ಸಾವಿರ ರೂ. ಭದ್ರತಾ ಠೇವಣಿ (ಡಿಜಿಟಲ್ ಮೂಲಕ) ಇಟ್ಟು ಇವುಗಳನ್ನು ಪಡೆಯಬೇಕು. ಈ ಸಾಂದ್ರಕಗಳನ್ನು ವಾಪಸ್ ಪಡೆಯುವಾಗ ಈ ಮೊತ್ತವನ್ನು ಹಿಂತಿರುಗಿಸಲಾಗುವುದು. ಜತೆಗೆ, ಸೋಂಕಿತರಿಗೆ ಈ ಯಂತ್ರವನ್ನು ಹೇಗೆ ಬಳಕೆ ಮಾಡಬೇಕು ಎಂಬುದನ್ನೂ ಹೇಳಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

ಸದ್ಯಕ್ಕೆ 500 ಆಮ್ಲಜನಕ ಸಾಂದ್ರಕಗಳ ಮೂಲಕ ಈ ನೆಟ್‍ವರ್ಕ್ ಮಾಡಲಾಗಿದೆ. ಇವತ್ತು ಮಲ್ಲೇಶ್ವರ ಮತ್ತು ಕೋರಮಂಗಲದಲ್ಲಿ ವಿದ್ಯುಕ್ತವಾಗಿ ಆರಂಭ ಮಾಡಲಾಗಿದೆ. ಕ್ರಮೇಣ ಮತ್ತಷ್ಟು ಪ್ರಮಾಣದಲ್ಲಿ ವಿಸ್ತರಣೆ ಮಾಡಲಾಗುವುದು. ಈ ಸೇವೆ ಸಂಪೂರ್ಣ ಉಚಿತವಾಗಿರುತ್ತದೆ. ಇದರ ಜತೆಯಲ್ಲೇ ಟೆಲಿಕನ್ಸಲ್‍ಟೆನ್ಸಿ ಕೊಡುವ ಚಿಂತನೆಯೂ ಇದೆ. ಅಗತ್ಯ ಬಿದ್ದರೆ ಅಂತಹ ಸೋಂಕಿತರಿಗೆ ಔಷಧೋಪಾಚಾರವನ್ನೂ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಸೆಕೆಂಡ್ ಡೋಸ್‍ಗೆ ಸಮಸ್ಯೆ ಇಲ್ಲ: ಪ್ರಸ್ತುತ ದಿನಕ್ಕೆ 2.5 ಲಕ್ಷ ಡೋಸ್ ಲಸಿಕೆಯನ್ನು ಒದಗಿಸಲಾಗುತ್ತಿದೆ. ಹೀಗಾಗಿ ಎಲ್ಲಿಯೂ ಲಸಿಕೆ ಸಮಸ್ಯೆ ಇಲ್ಲ. ಮೊದಲು ಕೇವಲ 1 ಲಕ್ಷ ಡೋಸ್ ಮಾತ್ರ ನೀಡಲಾಗುತ್ತಿತ್ತು. ಸೆಕೆಂಡ್ ಡೋಸ್ ಪಡೆಯುತ್ತಿರುವವರಿಗೆ ಕೊರತೆ ಉಂಟಾಗುತ್ತಿಲ್ಲ. ಮೊದಲ ಡೋಸ್ ಪಡೆಯುತ್ತಿರುವರಿಗೆ ಮಾತ್ರ ಸಣ್ಣ ಪ್ರಮಾಣದಲ್ಲಿ ಸಮಸ್ಯೆ ಆಗುತ್ತಿದೆ ಎಂದು ಡಾ.ಅಶ್ವತ್ಥ ನಾರಾಯಣ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಒಂದೇ ದಿನ ಏಕಾಎಕಿ ಹೆಚ್ಚು ಜನ ಲಸಿಕೆ ಕೇಂದ್ರಕ್ಕೆ ನುಗ್ಗಬಾರದು. ಈ ಮುನ್ನ ಮೊದಲು ಬಂದರಿಗೆ ಲಸಿಕೆ ಕೊಡಲಾಗುತ್ತಿತ್ತು. ಇನ್ನು ಮುಂದೆ 45 ವರ್ಷ ಮೇಲ್ಪಟ್ಟವರು ಆನ್‍ಲೈನ್ ಮೂಲಕವೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಓಲಾ ಕಂಪೆನಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗೌರವ್ ಪೋರ್‍ವಾಲ್ ಮಾತನಾಡಿ, ಇಂತಹ ಸಂಕಷ್ಟ ಸಂದರ್ಭದಲ್ಲಿ ಸರ್ಕಾರದ ಜತೆ ಕೈಜೋಡಿಸಿ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದ್ದು ನಮ್ಮ ಪುಣ್ಯ. ಈ ಯೋಜನೆಯನ್ನು ಬೆಂಗಳೂರು ಮಾತ್ರವಲ್ಲದೆ, ಇಡೀ ದೇಶದಲ್ಲಿ ವಿಸ್ತರಿಸಲಾಗುವುದು. 10 ಸಾವಿರ ಆಮ್ಲಜನಕ ಸಾಂದ್ರಕಗಳನ್ನು ಜನ ಬಳಕೆ ನೀಡುವ ಉದ್ದೇಶ ಇದೆ ಎಂದು ಹೇಳಿದರು.

ಗಿವ್ ಇಂಡಿಯಾದ ಸರಕಾರದ ಜತೆಗಿನ ಪಾಲುದಾರಿಕೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ವಿನೋದ್ ಮಾತನಾಡಿ, ಸರಕಾರ ಮತ್ತು ಓಲಾ ಜತೆಗೆ ಗೀವ್ ಇಂಡಿಯಾ ಸೇರಿ ಕೆಲಸ ಮಾಡುತ್ತಿರುವುದು ಖುಷಿಯ ವಿಚಾರ. ಮೊದಲ ಹಂತದಲ್ಲಿ 500 ಸಾಂದ್ರಕ ಕೊಡುತ್ತಿದ್ದು ಅಗತ್ಯ ನೋಡಿಕೊಂಡು ಇನ್ನೂ ಹೆಚ್ವು ಸರಬರಾಜು ಮಾಡಲಾಗುವುದು ಎಂದರು. ಗೀವ್ ಇಂಡಿಯಾ, ಓಲಾ ಜತೆ ಸಂಯೋಜನೆಯ ಕೆಲಸ ಮಾಡಿದ ಕರಕುಶಲ ನಿಗಮದ ಅಧ್ಯಕ್ಷ ರಾಘವೇಂದ್ರ ಬೇಲೂರು ಈ ವೇಳೆ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X