Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. "ಸುಳ್ಳಿನ ಟ್ವೀಟ್‌ ಗಳನ್ನು ಡಿಲೀಟ್‌...

"ಸುಳ್ಳಿನ ಟ್ವೀಟ್‌ ಗಳನ್ನು ಡಿಲೀಟ್‌ ಮಾಡಬೇಕೆಂದಾದರೆ ಮೊದಲು ನಿಮ್ಮ ಟ್ವಿಟರ್‌ ಖಾತೆಯನ್ನೇ ಡಿಲೀಟ್‌ ಮಾಡಬೇಕಾದೀತು"

ತೇಜಸ್ವಿ ಸೂರ್ಯ ವಿರುದ್ಧ ಜೆಡಿಎಸ್‌ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ13 May 2021 2:12 PM IST
share
ಸುಳ್ಳಿನ ಟ್ವೀಟ್‌ ಗಳನ್ನು ಡಿಲೀಟ್‌ ಮಾಡಬೇಕೆಂದಾದರೆ ಮೊದಲು ನಿಮ್ಮ ಟ್ವಿಟರ್‌ ಖಾತೆಯನ್ನೇ ಡಿಲೀಟ್‌ ಮಾಡಬೇಕಾದೀತು

ಬೆಂಗಳೂರು: ಕನ್ನಡಿಗರಿಗೆ ತಾರತಮ್ಯವಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ್ದ ಸಂಸದ ತೇಜಸ್ವಿ ಸೂರ್ಯ, "ಸುಳ್ಳಿನ ಟ್ವೀಟ್‌ ಗಳನ್ನು ಡಿಲೀಟ್‌ ಮಾಡಬೇಕು" ಎಂದು ಹೇಳಿಕೆ ನೀಡಿದ್ದರು. ಇದೀಗ ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್‌, ""ಸುಳ್ಳಿನ ಟ್ವೀಟ್‌ ಗಳನ್ನು ಡಿಲೀಟ್‌ ಮಾಡಬೇಕೆಂದಾದರೆ ಮೊದಲು ನಿಮ್ಮ ಟ್ವಿಟರ್‌ ಖಾತೆಯನ್ನೇ ಡಿಲೀಟ್‌ ಮಾಡಬೇಕಾದೀತು" ಎಂದು ಟ್ವೀಟ್‌ ಮಾಡಿದೆ.

ಕನ್ನಡಿಗರಿಗೆ ಆಗುತ್ತಿರುವ ತಾರತಮ್ಯವನ್ನು ಪ್ರಶ್ನೆ ಮಾಡಿ @hd_kumaraswamy ಮಾಡಿದ ಟ್ವೀಟ್‌ಅನ್ನು ಸುಳ್ಳು ಎಂದಿರುವ ಬೆಂ.ದಕ್ಷಿಣದ ಬಿಜೆಪಿ ಸಂಸದರು ಆ ಟ್ವೀಟ್‌ಗಳನ್ನು ಡಿಲಿಟ್‌ ಮಾಡಬೇಕು ಎಂದಿದ್ದಾರೆ. ಸಂಸದರೇ, ಹಾಗೊಂದು ವೇಳೆ ಸುಳ್ಳಿನ ಟ್ವೀಟ್‌ ಡಿಲಿಟ್‌ ಮಾಡುವುದಿದ್ದರೆ ನಿಮ್ಮ ಇಡೀ ಟ್ವಿಟರ್‌ ಖಾತೆಯನ್ನೇ ಡಿಲೀಟ್ ಮಾಡಬೇಕು.

ಚುನಾವಣೆಗಳಲ್ಲಿ ನೀವು ಹೇಳಿದ ಸುಳ್ಳುಗಳು, ಕೊಟ್ಟ ಆಶ್ವಾಸನೆ, ಆತ್ಮರತಿ, ಕೋಮು ಭಾವನೆ ಕೆರಳಿಸಲು ನೀವು ಆಡಿದ ಮಾತುಗಳು, ತಿರುಚಿದ ಇತಿಹಾಸಗಳು ಒಂದೇ ಎರಡೇ?  ಬೆಂ. ದಕ್ಷಿಣದ ಬಿಜೆಪಿ ಸಂಸದರೇ, ನಿಮ್ಮ ಇಡೀ ಟ್ವಿಟರ್‌ ಖಾತೆ ಇಂಥ ಸುಳ್ಳುಗಳಿಂದ ತುಂಬಿದೆ. ಹಾಗಾದರೆ ಡಿಲೀಟ್‌ ಆಗಬೇಕಾದ್ದು ನಿಮ್ಮ ಟ್ವೀಟ್‌ಗಳೋ ಕುಮಾರಸ್ವಾಮಿ ಅವರದ್ದೋ?

ಬೆಡ್‌ ಬ್ಲಾಕಿಂಗ್‌ ದಂಧೆಯನ್ನು ಬಯಲಿಗೆಳೆದ ನಾಟಕವಾಡುವಾಗ ನೀವು ಅಪರಾಧಿಯನ್ನೇ ಪಕ್ಕದಲ್ಲಿ ಇಟ್ಟುಕೊಂಡಿರಲಿಲ್ಲವೇ? ಪಟ್ಟಿಯಲ್ಲಿರುವ ಸಿಬ್ಬಂದಿಯ ಹೆಸರುಗಳನ್ನು ಮರೆ ಮಾಚಿ ಮಾತನಾಡಲಿಲ್ಲವೇ? ಅಡಿಗಡಿಗೂ ಸುಳ್ಳು ನುಡಿಯುವ, ಅಪದ್ಧ ಮಾತಾಡುವ ನಿಮ್ಮಿಂದ ಕುಮಾರಸ್ವಾಮಿ ಅವರು ಸತ್ಯ-ಸುಳ್ಳುಗಳ ಪಾಠ ಕಲಿಯಬೇಕೆ ಬೆಂ.ದಕ್ಷಿಣದ ಬಿಜೆಪಿ ಸಂಸದರೇ? 

ಕುಮಾರಸ್ವಾಮಿ ಅವರು ಇಂದು ಮಾಡಿರುವ ಟ್ವೀಟ್‌ಗೆ @PIB_India ನೀಡಿದ ಮಾಹಿತಿಯೇ ಆಧಾರ. ಅಲ್ಲಿರುವ ಅಂಶಗಳನ್ನು ಬಿಟ್ಟು ಒಂದಿನಿತೂ ಬೇರೆ ಅಂಶಗಳನ್ನು ಕುಮಾರಸ್ವಾಮಿ ಅವರು ಪ್ರಸ್ತಾಪಿಸಿಲ್ಲ. ಅಲ್ಲದೆ, ಇಂದು ನೀವು ನೀಡಿರುವ ಮಾಹಿತಿ ಅಸ್ಪಷ್ಟವಾಗಿದೆ. ನಿಮ್ಮ ಟ್ವೀಟ್‌ನಲ್ಲಿರುವ ಅಂಕಿ ಅಂಶಗಳನ್ನು ಕನ್ನಡಿಗರಿಗೆ ಕನ್ನಡದಲ್ಲಿ ವಿವರಿಸಿ ಹೇಳಿ.

ಬಿಜೆಪಿಯ ಮರ್ಜಿಯಿಂದ ನೀವೂ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದು ಗೊತ್ತಿರುವ ವಿಚಾರ. ಪಕ್ಷಕ್ಕೆ ಋಣ ಸಂದಾಯ ಮಾಡುವುದಕ್ಕಾಗಿ ಕನ್ನಡಿಗರನ್ನೇ ಮರೆಯುವುದು ಸರಿಯಲ್ಲ ಸಂಸದರೇ. ನೀವು ಬಿಜೆಪಿ ಸಂಸದರಾಗುವುದಕ್ಕೂ ಮೊದಲು ಕನ್ನಡಿಗ. ಅದನ್ನು ಮರೆಯಬೇಡಿ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತಾಡಿ. ನಿಜವಾದ ಕನ್ನಡಿಗ ಎನಿಸಿಕೊಳ್ಳಿ ಎಂದು ಜೆಡಿಎಸ್‌ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್‌ ಮಾಡಿದೆ.

ಬಿಜೆಪಿಯ ಮರ್ಜಿಯಿಂದ ನೀವೂ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದು ಗೊತ್ತಿರುವ ವಿಚಾರ. ಪಕ್ಷಕ್ಕೆ ಋಣ ಸಂದಾಯ ಮಾಡುವುದಕ್ಕಾಗಿ ಕನ್ನಡಿಗರನ್ನೇ ಮರೆಯುವುದು ಸರಿಯಲ್ಲ ಸಂಸದರೇ. ನೀವು ಬಿಜೆಪಿ ಸಂಸದರಾಗುವುದಕ್ಕೂ ಮೊದಲು ಕನ್ನಡಿಗ. ಅದನ್ನು ಮರೆಯಬೇಡಿ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಮಾತಾಡಿ. ನಿಜವಾದ ಕನ್ನಡಿಗ ಎನಿಸಿಕೊಳ್ಳಿ.
5/5

— Janata Dal Secular (@JanataDal_S) May 13, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X