ಜಿಲ್ಲೆಯಲ್ಲಿ ಪ್ರತ್ಯೇಕವಾದ ಯಾವುದೇ ವಾರಾಂತ್ಯ ಕರ್ಫ್ಯೂ ಇಲ್ಲ: ದ.ಕ. ಜಿಲ್ಲಾಧಿಕಾರಿ ರಾಜೇಂದ್ರ

ಮಂಗಳೂರು, ಮೇ 13: ದ.ಕ. ಜಿಲ್ಲೆಯಲ್ಲಿ ಪ್ರತ್ಯೇಕವಾದ ಯಾವುದೇ ವಾರಾಂತ್ಯ ಕರ್ಫ್ಯೂ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ತಡೆಗಟ್ಟಲು ಈಗಾಗಲೇ ಘೋಷಿಸಿರುವಂತೆ ಮೇ 10 ರಿಂದ ಮೇ 24ರ ವರೆಗಿನ ಕರ್ಫ್ಯೂ ಜಾರಿಯಲ್ಲಿರಲಿದ್ದು, ಜಿಲ್ಲೆಯಲ್ಲಿ ಪ್ರತ್ಯೇಕವಾದ ಯಾವುದೇ ವಾರಾಂತ್ಯ ಕರ್ಫ್ಯೂ ಇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಪ್ರಕಾರ ಅಗತ್ಯ ಸಾಮಗ್ರಿಗಳ ಖರೀದಿಗೆ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ವಾರಾಂತ್ಯದಲ್ಲೂ ಅನುಮತಿಸಲಾಗಿದೆ.
Next Story





