ಬೈಕಂಪಾಡಿ ಎಪಿಎಂಸಿಯಲ್ಲಿ ವಾರಾಂತ್ಯದಲ್ಲೂ ವ್ಯಾಪಾರಕ್ಕೆ ಅವಕಾಶ

ಸಾಂದರ್ಭಿಕ ಚಿತ್ರ
ಮಂಗಳೂರು, ಮೇ 13: ಮಂಗಳೂರು ಎಪಿಎಂಸಿಯ ಬೈಕಂಪಾಡಿ ಮಾರುಕಟ್ಟೆ ಪ್ರಾಂಗಣದದಲ್ಲಿ ಶನಿವಾರ ಮತ್ತು ರವಿವಾರ ಬೆಳಗ್ಗೆ 6ರಿಂದ 9ರ ತನಕ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಎಪಿಎಂಸಿ ಅಧ್ಯಕ್ಷರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಾಂಗಣದಲ್ಲಿ ಹಣ್ಣು ಮತ್ತು ತರಕಾರಿ ಸಹಿತ ಎಲ್ಲಾ ವ್ಯಾಪಾರ ವಹಿವಾಟಿಗೆ ಅವಕಾಶವಿದೆ. ವ್ಯಾಪಾರಿಗಳು ಸರಕಾರದ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ವ್ಯಾಪಾರ ಮಾಡಬಹುದಾಗಿದೆ. ರೈತರು ಮತ್ತು ವರ್ತಕರಿಗೆ ಈ ಅವಧಿಯಲ್ಲಿ ವ್ಯಾಪಾರಕ್ಕೆ ಅವಕಾಶವಿದೆ ಎಂದು ಎಪಿಎಂಸಿ ಅಧ್ಯಕ್ಷ ಕೆ. ಕೃಷ್ಣರಾಜ ಹೆಗ್ಡೆ ತಿಳಿಸಿದ್ದಾರೆ.
Next Story





