Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೋವಿಡ್ ಆಸ್ಪತ್ರೆಯಲ್ಲಿ ಮೃತರ ಸಂಖ್ಯೆ 24...

ಕೋವಿಡ್ ಆಸ್ಪತ್ರೆಯಲ್ಲಿ ಮೃತರ ಸಂಖ್ಯೆ 24 ಅಲ್ಲ 37: ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ಹೈಕೋರ್ಟ್ ಗೆ ವರದಿ

ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ14 May 2021 2:29 PM IST
share
ಕೋವಿಡ್ ಆಸ್ಪತ್ರೆಯಲ್ಲಿ ಮೃತರ ಸಂಖ್ಯೆ 24 ಅಲ್ಲ 37: ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿಯಿಂದ ಹೈಕೋರ್ಟ್ ಗೆ ವರದಿ

ಬೆಂಗಳೂರು, ಮೇ 14: ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ  ಮೇ 2ರ ರಾತ್ರಿ ಸಂಭವಿಸಿದ 24 ಕೊರೋನ ರೋಗಿಗಳ ಸಾವಿಗೆ ಆಕ್ಸಿಜನ್ ಕೊರತೆಯೇ ಕಾರಣವಾಗಿದೆ ಎಂದು ಹೈಕೋಟ್೯ ಗೆ ನಿವೃತ್ತ ನ್ಯಾಯಮೂರ್ತಿ ಎ.ಎನ್.ವೇಣುಗೋಪಾಲಗೌಡ ನೇತೃತ್ವದ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸಮಿತಿ ಸಲ್ಲಿಸಿರುವ ವರದಿಯಲ್ಲಿ ಸ್ಪಷ್ಟಪಡಿಸಿದೆ.

ಬೆಂಗಳೂರಿನ ಹೈಕೋರ್ಟ್ ಪ್ರಧಾನ ಪೀಠದ ನಿರ್ದೇಶನದಂತೆ ತನಿಖೆ ನಡೆಸಿರುವ ಕಾನೂನು ಸೇವಾ ಪ್ರಾಧಿಕಾರದ ಸಮಿತಿಯು 31 ಪುಟಗಳ ವರದಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠಕ್ಕೆ ಸಲ್ಲಿಸಿದೆ.

ಮೇ 2ರ ರಾತ್ರಿ 10.30ರಿಂದ ಮೇ 3ರ ಬೆಳಗಿನ ಜಾವ 2.30ರವರೆಗೆ ಆಸ್ಪತ್ರೆಯಲ್ಲಿ ಆಕ್ಸಿಜನ್ ಖಾಲಿಯಾಗಿತ್ತು. ಇದರಿಂದಾಗಿ ಆಕ್ಸಿಜನ್ ಪಡೆಯುತ್ತಿದ್ದ ಅನೇಕ ರೋಗಿಗಳಿಗೆ ತೊಂದರೆಯಾಗಿದ್ದು, ಈ ಸಮಯದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಮತ್ತೆ ಕೆಲವರಿಗೆ ದೇಹದ ಅಂಗಾಗಳಿಗೆ ಹಾನಿಯಾಗಿದ್ದು, ಬಳಿಕ ಕೆಲ ಹೊತ್ತಿನಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

37 ಮಂದಿ ಸಾವು: ಮೇ 3ರ ರಾತ್ರಿ 2.30ರ ಬಳಿಕ ಆಕ್ಸಿಜನ್ ಪೂರೈಕೆಯಾಗಿದೆ. ಆ ಬಳಿಕವೂ ಹಲವರು ಮೃತಪಟ್ಟಿದ್ದಾರೆ. ಒಟ್ಟಾರೆ ಮೇ 2ರ ರಾತ್ರಿ 10.30ರಿಂದ ಮೇ 3ರ ಸಂಜೆಯವರೆಗೆ ಆಸ್ಪತ್ರೆಯಲ್ಲಿ 37 ಸಾವು ದಾಖಲಾಗಿವೆ.

24 ಜನರ ಸಾವಿಗೆ ಸಂಬಂಧಿಸಿದಂತೆ ಜಿಲ್ಲಾ ಸರ್ಜನ್ ನೇತೃತ್ವದ ಸಮಿತಿ ನಡೆಸಿರುವ ಡೆತ್ ಆಡಿಟ್ ನಲ್ಲಿ ಕೇವಲ 3 ಕೊರೋನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದ್ದು, 7 ರೋಗಿಗಳು ಹೈಪೋಕ್ಸಿಕ್ ಬ್ರೇನ್ ಇಂಜ್ಯುರಿ ಕಾರಣದಿಂದ ಸಾವನ್ನಪ್ಪಿದ್ದಾರೆ. ಉಳಿದ 14 ಮಂದಿ ಕೊರೋನ ಕಾರಣದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಲಾಗಿದೆ. ಉಳಿದ 13 ಕೊರೋನ ಸೋಂಕಿತರ ಸಾವಿನ ಬಗ್ಗೆ ಯಾವುದೇ ಮಾಹಿತಿ ಡೆತ್ ಆಡಿಟ್ ನಲ್ಲಿ ಲಭ್ಯವಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

ಕೋವಿಡ್ ಆಸ್ಪತ್ರೆಗೆ ಮೇ 3ರ ಬೆಳಗಿನ ಜಾವ 2 ಗಂಟೆ ಬಳಿಕ ಆಕ್ಸಿಜನ್ ಪೂರೈಕೆಯಾಗಿದ್ದು, ಆ ಬಳಿಕ ಸಂಭವಿಸಿರುವ ಸಾವುಗಳಿಗೆ ಆಕ್ಸಿಜನ್ ಕೊರತೆ ಕಾರಣವಲ್ಲ ಎಂದು ಹೇಳಲಾಗಿದೆ. ಮಿದುಳಿಗೆ ಪೂರೈಕೆಯಾಗುವ ಆಕ್ಸಿಜನ್ ನಲ್ಲಿ ಅಭಾವ ಉಂಟಾದಾಗಲೇ ಮಿದುಳಿಗೆ ಹಾನಿ ಸಂಭವಿಸುತ್ತದೆ. ಆಕ್ಸಿಜನ್ ಪೂರೈಕೆ ನಿಂತ ತಕ್ಷಣದ 5 ನಿಮಿಷಗಳಲ್ಲಿ ಸಾವು ಸಂಭವಿಸುತ್ತದೆ. ಹೀಗಾಗಿ, ಹೈಪೋಕ್ಸಿಕ್ ಬ್ರೇನ್ ಇಂಜ್ಯುರಿ ಎಂಬ 7 ಮಂದಿ ಜನರ ಸಾವಿಗೂ ಆಮ್ಲಜನಕ ಕೊರತೆಯೇ ಕಾರಣವಾಗಿದೆ.

ಇನ್ನು 14 ಮಂದಿ ಕೊರೋನ ಚಿಕಿತ್ಸೆಗಾಗಿ ಒಳ ರೋಗಿಗಳಾಗಿ ದಾಖಲಾಗಿದ್ದವರಿಗೆ ಆಕ್ಸಿಜನ್ ಅಗತ್ಯವಿದ್ದ‌ ಸಂದರ್ಭದಲ್ಲಿ ಪೂರೈಕೆ ಸ್ಥಗಿತಗೊಂಡಿರುವುದೇ ಅವರ ಸಾವಿಗೆ ಕಾರಣ ಎನ್ನುವುದು ಸ್ಪಷ್ಟವಾಗುತ್ತದೆ ಎಂದು ಸಮಿತಿ ಸ್ಪಷ್ಟಪಡಿಸಿದೆ.

ಈ ಕುರಿತಂತೆ ಸಮಿತಿಯ ವರದಿ ಪರಿಶೀಲಿಸಿದ ವಿಭಾಗೀಯ ನ್ಯಾಯಪೀಠ, ಅಧಿಕಾರಿಗಳ ನಿರ್ಲಕ್ಷ್ಯದಿಂದಲೇ ಸಾವುಗಳು ಸಂಭವಿಸಿವೆ. ಹೀಗಾಗಿ, ತಪ್ಪಿತಸ್ಥರ ವಿರುದ್ಧ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಬಗ್ಗೆ ಮುಂದಿನ ವಿಚಾರಣೆ ವೇಳೆ ಮಾಹಿತಿ ನೀಡುವಂತೆ ಸರಕಾರಕ್ಕೆ ಸೂಚಿಸಿದೆ. ಜತಗೆ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸುವ ಸರಕಾರದ ನಿಲುವು ತಿಳಿಸಬೇಕೆಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಮೇ 2ರಂದು 37 ಜನ ಒಳ ರೋಗಿಗಳಾಗಿ ದಾಖಲಾಗಿದ್ದರು ಎಂಬುದು ಆಸ್ಪತ್ರೆಯ ದಾಖಲೆಗಳಿಂದ ತಿಳಿದು ಬಂದಿದೆ.  ಹೀಗಾಗಿ, ಆ 37 ಮಂದಿ ಒಳರೋಗಿಗಳ ಸಾವು ಆಕ್ಸಿಜನ್ ಕೊರತೆಯಿಂದಲೇ ಆಗಿರುವ ಸಾಧ್ಯತೆ ಇದೆ ಎಂದು ಸಮಿತಿ ತನ್ನ ವರದಿಯಲ್ಲಿ ತಿಳಿಸಿದೆ.

ಸಂಪನ್ಮೂಲ ಸಂಗ್ರಹಿಸುವಲ್ಲಿ ಡಿಸಿ ವಿಫಲ: ಚಾಮರಾಜನಗರಕ್ಕೆ ಮೈಸೂರಿನಿಂದ ಆಮ್ಲಜನಕ‌‌ ಪೂರೈಕೆ ಮಾಡುವಲ್ಲಿ ಅಲ್ಲಿನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಡೆಯೊಡ್ಡಿರುವುದಾಗಿ ಆರೋಪ ಮಾಡಿದ್ದ ಡಿಸಿ ಡಾ.ಎಂ.ಆರ್.ರವಿ ಈ‌ ಪ್ರಕರಣದಲ್ಲಿ ತೋರಿದ ಕರ್ತವ್ಯ ಪಾಲನೆಯ ವಿಫಲತೆಯ ಬಗ್ಗೆ ವರದಿ ತಿಳಿಸಿದೆ.  ಮೆಡಿಕಲ್ ಡೀನ್ ಡಾ.ಸಂಜೀವ್ ನಾಯಕತ್ವದ ಗುಣವನ್ನು ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ ಎಂದು ವರದಿಯಲ್ಲಿ ತಿಳಿಸಿದೆ.

ಕೇಸ್ ಶೀಟ್ ಸರಿಯಾಗಿ ಇಲ್ಲ: ಸೋಂಕಿತರ ಸಾವಿಗೆ ‌ಸಂಬಂಧಿಸಿದ ಕೇಸ್ ಶೀಟ್ ಗಳ ನಿರ್ವಹಣೆ ಸಮಾಧಾನಕರವಾಗಿಲ್ಲ ಎಂದು ಸಮಿತಿ ವರದಿಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X