ಮುಹಮ್ಮದ್ ಮೀರಾ ಸಿದ್ದೀಕ್

ಭಟ್ಕಳ, ಮೇ 14: ಭಟ್ಕಳದ ಮರ್ಕಝಿ ಕಲಿಫಾ ಜಮಾಅತುಲ್ ಮುಸ್ಲಿಮೀನ್ ಸಂಸ್ಥೆಯ ಅಧ್ಯಕ್ಷ ಮುಹಮ್ಮದ್ ಮೀರಾ ಸಿದ್ದೀಕ್(75) ಮಂಗಳೂರಿನ ಆಸ್ಪತ್ರೆಯಲ್ಲಿ ಗುರುವಾರ ರಾತ್ರಿ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಗುರುವಾರ ರಾತ್ರಿ ಕೊನೆಯುಸಿರೆಳೆದರೆಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಶುಕ್ರವಾರ ಬೆಳಗ್ಗೆ ಜಾಮಿಯಾ ಮಸೀದಿಯ ದಫನ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನೆರವೇರಿತು.
ಮೃತರು ಅಂಜುಮನ್ ಹಾಮಿ ಮುಸ್ಲಿಮೀನ್ ಶಿಕ್ಷಣ ಸಂಸ್ಥೆಯ ಪೋಷಕರು ಆಗಿದ್ದರು.
Next Story





