Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನ...

ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನ ಸೋಂಕಿನಿಂದ ನಿಧನ

ವಾರ್ತಾಭಾರತಿವಾರ್ತಾಭಾರತಿ14 May 2021 5:33 PM IST
share
ಹಿರಿಯ ಪತ್ರಕರ್ತ ಮಹದೇವ ಪ್ರಕಾಶ್ ಕೊರೋನ ಸೋಂಕಿನಿಂದ ನಿಧನ

ಬೆಂಗಳೂರು, ಮೇ 14: ಹಿರಿಯ ಪತ್ರಕರ್ತ, ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಧ್ಯಮ ಸಲಹೆಗಾರರಾಗಿದ್ದ ಮಹದೇವ ಪ್ರಕಾಶ್(68) ಅವರು ಕೊರೋನ ವೈರಸ್ ಸೋಂಕಿನಿಂದಾಗಿ ಅಸುನೀಗಿದ್ದಾರೆ.

ಪತ್ನಿ, ಪುತ್ರಿ, ಅಳಿಯನ ಸಹಿತ ಅಪಾರ ಸಂಖ್ಯೆಯ ಬಂಧು-ಮಿತ್ರರನ್ನು ಶ್ರೀಯುತರು ಅಗಲಿದ್ದಾರೆ. ಹತ್ತು ದಿನಗಳ ಹಿಂದೆ ಕೋವಿಡ್ ಸೋಂಕಿಗೆ ಒಳಗಾಗಿದ್ದ ಮಹದೇವ ಪ್ರಕಾಶ್ ಅವರು ನಗರದಲ್ಲಿರುವ ನಾರಾಯಣ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದು, ಶುಕ್ರವಾರ ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಮರಳೇಬೇಕುಪ್ಪೆ ಗ್ರಾಮದವರಾದ ಮಹದೇವ ಪ್ರಕಾಶ್ ಅವರು ಅಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಾಸ, ಬಳಿಕ ಬೆಂಗಳೂರಿನಲ್ಲಿ ಹೆಚ್ಚಿನ ಶಿಕ್ಷಣ ಪಡೆದಿದ್ದಾರೆಂದು ಗೊತ್ತಾಗಿದೆ. 80ರ ದಶಕದಲ್ಲಿ ಲೋಕವಾಣಿ ಪತ್ರಿಕೆಯ ಸಂಪಾದಕರಾಗಿದ್ದ ಅವರು, ಕಸಾಪದ `ಕನ್ನಡ ನುಡಿ' ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು. ‘ವಾರದ ಆರಂಭ’ ವಾರಪತ್ರಿಕೆಯನ್ನು ಆರಂಭಿಸಿದ್ದ ಅವರು, ಅದರ ನಂತರ `ಈ ಭಾನುವಾರ' ಮಾಸಪತ್ರಿಕೆಯನ್ನು ಸ್ವತಃ ತಮ್ಮ ಸಂಪಾದಕತ್ವದಲ್ಲಿ ಹೊರತರುತ್ತಿದ್ದರು. ಮುಖ್ಯಮಂತ್ರಿ ಯಡಿಯೂರಪ್ಪನವರ ಮಾಧ್ಯಮ ಸಲಹೆಗಾರರಾಗಿಯೂ ಕೆಲಸ ಮಾಡಿದ್ದರು. ವಿದ್ಯುನ್ಮಾನ ಮಾಧ್ಯಮಗಳಲ್ಲಿ ರಾಜಕೀಯ ವಿಶ್ಲೇಷಕರಾಗಿ ಗುರುತಿಸಿಕೊಂಡಿದ್ದ ಮಹದೇವ ಪ್ರಕಾಶ್, ಕೆಲ ಪತ್ರಿಕೆಗಳಲ್ಲಿ ರಾಜಕೀಯ ವಿಷಯಗಳಿಗೆ ಸಂಬಂಧಿಸಿದಂತೆ ಅಂಕಣಗಳನ್ನು ಬರೆಯುತ್ತಿದ್ದರು.

ಸಿಎಂ ಸಹಿತ ಗಣ್ಯರ ಕಂಬನಿ: ಪತ್ರಕರ್ತ ಮಹದೇವ ಪ್ರಕಾಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ.ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಸಚಿವರಾದ ಈಶ್ವರಪ್ಪ, ಸುರೇಶ್ ಕುಮಾರ್, ನಾರಾಯಣಗೌಡ, ಕೆ.ಗೋಪಾಲಯ್ಯ, ವಿ.ಸೋಮಣ್ಣ, ಮಾಜಿ ಸಚಿವ ಸಿ.ಟಿ.ರವಿ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

ನನಗೆ ಮಾಧ್ಯಮ ಸಲಹೆಗಾರರಾಗಿದ್ದ ಹಿರಿಯ ಪತ್ರಕರ್ತ, ಈ ಭಾನುವಾರ ಪತ್ರಿಕೆಯ ಸಂಪಾದಕ, ಅತ್ಯುತ್ತಮ ವಾಗ್ಮಿಯೂ ಆಗಿದ್ದ ಮಹದೇವ ಪ್ರಕಾಶ್ ಅವರ ಕೋವಿಡ್‍ಗೆ ಬಲಿಯಾಗಿದ್ದು ಅತ್ಯಂತ ದುರದೃಷ್ಟಕರ. ಕರ್ನಾಟಕದ ರಾಜಕೀಯ ವಿದ್ಯಮಾನಗಳ ಕುರಿತು ತಮ್ಮ ಪತ್ರಿಕೆಯಲ್ಲಿ, ಪತ್ರಿಕೆಗಳ ಅಂಕಣಗಳಲ್ಲಿ ಅಧ್ಯಯನಶೀಲ ಲೇಖನಗಳನ್ನು ಪ್ರಕಟಿಸುತ್ತಿದ್ದ ಅವರು, ವಿದ್ಯುನ್ಮಾನ ಮಾಧ್ಯಮಗಳ ಚರ್ಚೆಯಲ್ಲಿಯೂ ಸಮರ್ಥವಾಗಿ ತಮ್ಮ ಅಭಿಪ್ರಾಯ ಮಂಡಿಸುತ್ತಿದ್ದರು. ಅವರ ನಿಧನ ಮಾಧ್ಯಮ ಲೋಕಕ್ಕೆ ಆದ ನಷ್ಟ'

-ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ

`ಕನಕಪುರ ತಾಲೂಕಿನ ಮರಳೇಬೇಕುಪ್ಪೆ ಗ್ರಾಮ ಮೂಲದವರಾದ ಮಹದೇವ ಪ್ರಕಾಶ್ ಅವರು ಅಲ್ಲಿಯೇ ಪ್ರಾಥಮಿಕ ವಿದ್ಯಾಭ್ಯಾಸ ಮಾಡಿದ್ದರು. ನನಗೆ ವೈಯಕ್ತಿಕವಾಗಿಯೂ ಪರಿಚಿತರಿದ್ದರು. ಹಲವು ಪತ್ರಿಕೆಗಳಲ್ಲಿ ಅಂಕಣಕಾರರೂ ಆಗಿದ್ದ ಅವರ ಅಂಕಣಗಳು ನೇರ, ನಿಷ್ಠುರವಾಗಿದ್ದು, ಜನಪ್ರಿಯತೆ ಗಳಿಸಿದ್ದವು. ಅಲ್ಲದೆ, ಅವರು ಅನೇಕ ಪುಸ್ತಕಗಳನ್ನು ಬರೆದಿದ್ದರು. ಅವರ ನಿಧನ ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟ'

-ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X