Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಶೀರೂರು ಮಠದ 31ನೇ ಯತಿಯಾಗಿ...

ಶೀರೂರು ಮಠದ 31ನೇ ಯತಿಯಾಗಿ ಶ್ರೀವೇದವರ್ಧನ ತೀರ್ಥ: ಸೋದೆಶ್ರೀಗಳಿಂದ ಪಟ್ಟಾಭಿಷೇಕ

ವಾರ್ತಾಭಾರತಿವಾರ್ತಾಭಾರತಿ14 May 2021 9:21 PM IST
share
ಶೀರೂರು ಮಠದ 31ನೇ ಯತಿಯಾಗಿ ಶ್ರೀವೇದವರ್ಧನ ತೀರ್ಥ: ಸೋದೆಶ್ರೀಗಳಿಂದ ಪಟ್ಟಾಭಿಷೇಕ

ಉಡುಪಿ, ಮೇ 14: ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶೀರೂರು ಮಠದ 31ನೇ ಪೀಠಾಧಿಪತಿಯಾಗಿ ಶ್ರೀವೇದವರ್ಧನ ತೀರ್ಥರಿಗೆ ಸೋದೆ ವಾದಿರಾಜ ಮಠದ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಶುಕ್ರವಾರ ಅಪರಾಹ್ನ 12:35ಕ್ಕೆ ಶೀರೂರು ಮೂಲ ಮಠದಲ್ಲಿ ಪಟ್ಟಾಭಿಷೇಕ ನೆರವೇರಿಸಿದರು.

16ರ ಹರೆಯದ ಶ್ರೀವೇದವರ್ಧನ ತೀರ್ಥರು, 2018ರ ಜು.19ರಂದು ನಿಧನರಾದ ಶ್ರೀಲಕ್ಷ್ಮೀವರ ತೀರ್ಥರ ಉತ್ತರಾಧಿಕಾರಿಯಾಗಿರುವರು. ಗುರುವಾರ ಸೋದೆಶ್ರೀಗಳು ಉಡುಪಿಯ ಅನಿರುದ್ಧ ಸರಳತ್ತಾಯರಿಗೆ ಸನ್ಯಾಸ ದೀಕ್ಷೆ ನೀಡಿದ್ದರು. ಇಂದು ಅಕ್ಷಯ ತೃತಿಯಾ ಶುಭದಿನದಂದು ಮಧ್ವಾಚಾರ್ಯರ ಶಿಷ್ಯ ವಾಮನ ತೀರ್ಥರ ಪರಂಪರೆಯ ಶೀರೂರು ಮಠದ 31ನೇ ಪೀಠಾಧಿಪತಿಯಾಗಿ ನೂತನ ಯತಿಗೆ ನಾಮಕರಣ ಮಾಡಿದ ಬಳಿಕ ಶಿರೂರು ಮಠದ ಉತ್ತರಾಧಿಕಾರಿಯಾಗಿ ಪಟ್ಟಾಭಿಷೇಕ ನೆರವೇರಿಸಿದರು.

ಇದಕ್ಕೂ ಮುನ್ನ ಪುರುಷಸೂಕ್ತ ಹೋಮ, ವಿರಜಾ ಹೋಮ ಹಾಗೂ ವೇದವ್ಯಾಸ ಮಂತ್ರ ಹೋಮ ಇತ್ಯಾದಿ ಧಾರ್ಮಿಕ ಪ್ರಕ್ರಿಯೆಗಳು ಅವಧಾನಿ ಸುಬ್ರಹ್ಮಣ್ಯ ಭಟ್ ಗುಂಡಿಬೈಲು, ಗಿರಿರಾಜ ಉಪಾಧ್ಯಾಯ ಹಾಗೂ ನಾರಾವಿ ಗುರುರಾಜ ಭಟ್‌ರ ನೇತೃತ್ವದಲ್ಲಿ ನೆರವೇರಿದವು.

ಅಪರಾಹ್ನ 12:35ರ ಮುಹೂರ್ತದಲ್ಲಿ ಸೋದೆ ಶ್ರೀವಿಶ್ವವಲ್ಲಭ ತೀರ್ಥರು ತಲೆ ಮೇಲೆ ಶೀರೂರು ಮಠದ ಉಪಾಸ್ಯಮೂರ್ತಿ ಸಹಿತ ಸಾಲಿಗ್ರಾಮವನ್ನು ಇರಿಸಿಕೊಂಡಿದ್ದ ನೂತನ ಯತಿಗೆ ಪಟ್ಟಾಭಿಷೇಕದ ಅಂಗವಾಗಿ ಅಭಿಷೇಕ ನಡೆಸಿದರು. ಅನಂತರ ನೂತನ ಯತಿಯ ನಾಮಕರಣ ನಡೆಯಿತು.

ಈ ಸಂರ್ಭದಲ್ಲಿ ಅಶೀರ್ವಚನ ನೀಡಿದ ಸೋದೆಶ್ರೀಗಳು, ನೂತನ ಯತಿಗಳು ಮಠದ ಸನಾತನ ಪರಂಪರೆಯನ್ನು ಬೆಳಗಲಿ ಎಂಬ ಉದ್ದೇಶ ದಿಂದ ವೇದವರ್ಧನ ತೀರ್ಥ ಎಂದು ನಾಮಕರಣ ಮಾಡಿದ್ದೇವೆ. ಇದರೊಂದಿಗೆ ಮಠದ ಪರಂಪರೆ ಹಾಗೂ ಶ್ರೀಗಳ ಕೀರ್ತಿಯೂ ವರ್ಧಿಸಲಿ ಎಂದು ಹಾರೈಸಿದರು. ಶೀರೂರು ಶ್ರೀಗಳೂ ಅನುಗ್ರಹ ಸಂದೇಶ ನೀಡಿದರು.

ಶೀರೂರು ಶ್ರೀಗಳ ಪೂರ್ವಾಶ್ರಮದ ತಂದೆ ಉದಯಕುಮಾರ ಸರಳತ್ತಾಯ, ತಾಯಿ ಶ್ರೀವಿದ್ಯಾ, ಸೋದೆ ಮಠ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ರತ್ನಕುಮಾರ ಮೊದಲಾದವರು ಉಪಸ್ಥಿತರಿದ್ದರು.

ಶ್ರೀಕೃಷ್ಣಮಠಕ್ಕೆ ಆಗಮನ: ಇಂದು ಶೀರೂರು ಮೂಲಮಠದಲ್ಲಿ ಮಠದ 31ನೇ ಯತಿಯಾಗಿ ಪಟ್ಟಾಭಿಷೇಕಗೊಂಡ ಶ್ರೀವೇದವರ್ಧನತೀಥ ಸ್ವಾಮೀಜಿ ಅವರು ಸೋದೆ ಶ್ರೀಗಳೊಂದಿಗೆ ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದರು.ರಥಬೀದಿಯಲ್ಲಿ ಮೆರವಣಿಗೆಯಲ್ಲಿ ವಾದ್ಯಘೋಷ, ವೇದಘೋಷಗಳೊಂದಿಗೆ ಆಗಮಿಸಿದ ಯತಿಗಳನ್ನು ಪರ್ಯಾಯ ಅದಮಾರು ಮಠದ ಶ್ರೀಈಶಪ್ರಿಯತೀರ್ಥರು ಬರ ಮಾಡಿಕೊಂಡರು.

ಶ್ರೀಅನಂತೇಶ್ವರ, ಶ್ರೀಕೃಷ್ಣ ಹಾಗೂ ಮುಖ್ಯಪ್ರಾಣರ ದರ್ಶನದ ಬಳಿಕ ಚಂದ್ರಶಾಲೆಯಲ್ಲಿ ಮಾಲಿಕೆ ಮಂಗಳಾರತಿ ನಡೆಯಿತು. ಯತಿಗಳು ಅನುಗ್ರಹ ಸಂದೇಶ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X