ಮಣಿಪಾಲ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ ಅಲಭ್ಯ
ಮಣಿಪಾಲ, ಮೇ 14: ಮಣಿಪಾಲದ ಕಸ್ತೂರ್‌ಬಾ ಆಸ್ಪತ್ರೆ, ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆ ಹಾಗೂ ಕಾರ್ಕಳದ ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ ಗಳಲ್ಲಿ ಕೋವಿಡ್ ಲಸಿಕೆ ಲಭ್ಯವಿರುವುದಿಲ್ಲ ಎಂದು ಕೆಎಂಸಿ ಮಣಿಪಾಲದ ವೈದ್ಯೀಕಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ ತಿಳಿಸಿದ್ದಾರೆ.
ಈ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಗಳ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆಗಾಗಿ ಆಸ್ಪತ್ರೆಗೆ ಬರುವಂತೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇದರಿಂದ ತಮಗಾಗುವ ಅನಾನೂಕೂಲತೆಯನ್ನು ತಪ್ಪಿಸಬಹುದು ಎಂದಿದ್ದಾರೆ.
ಜೂ.1ರ ಬಳಿಕ ಲಸಿಕೆ ಆಸ್ಪತ್ರೆಯಲ್ಲಿ ದೊರೆಯುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಲಸಿಕೆ ನೀಡುವಂತಾಗಲು ನಾವು ನೇರವಾಗಿ ಕಂಪೆನಿಯಿಂದ ಅದನ್ನು ಖರೀದಿಸುವ ಪ್ರಯತ್ನದಲ್ಲಿದ್ದು, ಲಭ್ಯವಾದಾಗ ಸಾರ್ವಜನಿಕರಿಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
ಇದಕ್ಕಾಗಿ ಸಾರ್ವಜನಿಕರು ಮಣಿಪಾಲ ಕಸ್ತೂರ್‌ಬಾ ಆಸ್ಪತ್ರೆ ದೂರವಾಣಿ: 0820-29922761, ಡಾ.ಟಿಎಂಎ ಪೈ ಆಸ್ಪತ್ರೆ ಉಡುಪಿ:08202942126, ಡಾ.ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ:08258230583ನ್ನು ಸಂಪರ್ಕಿಸುವಂತೆ ಅವರು ಕೋರಿದ್ದಾರೆ.





