ಮೇ 15ರ ಬಳಿಕ ಪೂರ್ವನಿಗದಿತ ಮದುವೆ ಕಾರ್ಯಕ್ರಮಗಳಿಗೆ ಅವಕಾಶ: ಪ್ರಕಟನೆ
ಮಂಗಳೂರು ಮೇ 14: ದ.ಕ. ಜಿಲ್ಲೆಯಲ್ಲಿ ಇತ್ತೀಚೆಗೆ ತೆಗೆದುಕೊಂಡ ನಿರ್ಣಯದಂತೆ ಮೇ 15ರ ಬಳಿಕ ಮದುವೆ ಸಮಾರಂಭಗಳನ್ನು ನಡೆಸಬಾರದು ಎಂದು ಜಿಲ್ಲೆಯ ಜನತೆಗೆ ಮನವಿ ಮಾಡಲಾಗಿತ್ತು. ಆದರೆ ಈಗಾಗಲೇ ಮದುವೆಗೆ ದಿನ ನಿಗದಿಪಡಿಸಿದವರು ಎಲ್ಲಾ ಪೂರ್ವಸಿದ್ಧತೆ ಮಾಡಿಕೊಂಡವರು ಮನವಿ ಮಾಡಿದ ಮೇರೆಗೆ ಮೇ15ರ ಬಳಿಕ 25 ಜನರಿಗೆ ಸೀಮಿತಗೊಳಿಸಿ ಮದುವೆ ಕಾರ್ಯಕ್ರಮಕ್ಕೆ ಅವಕಾಶ ನೀಡಲು ದ.ಕ ಜಿಲ್ಲಾಡಳಿತ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯ ಪ್ರಕಟನೆ ತಿಳಿಸಿದೆ.
Next Story





