‘ಸಂಜೆವಾಣಿ’ ಪತ್ರಿಕೆಯ ವಿಜಯ್ ರಾವ್ ಕೋವಿಡ್‌ಗೆ ಬಲಿ
ಮಂಗಳೂರು, ಮೇ 14: ‘ಸಂಜೆವಾಣಿ’ ಪತ್ರಿಕೆಯ ಮಂಗಳೂರು ವಿಭಾಗದ ಮ್ಯಾನೇಜರ್ ಆಗಿದ್ದ ವಿಜಯ್ ರಾವ್ (56) ಗುರುವಾರ ತಡರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್‌ಗೆ ಬಲಿಯಾಗಿದ್ದಾರೆ.
ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಅವರು ಕಳೆದ 18 ವರ್ಷಗಳಿಂದ ಸಂಜೆವಾಣಿ ಪತ್ರಿಕೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕೋವಿಡ್ ಸೋಂಕಿಗೆ ಪಾಸಿಟಿವ್ ಆಗಿದ್ದ ಅವರು ಕಳೆದೆರಡು ವಾರಗಳಿಂದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
Next Story





