Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರಕಾರ ತಪಾಸಣೆ ಕಡಿಮೆಗೊಳಿಸಿ ಸೋಂಕಿತರ...

ಸರಕಾರ ತಪಾಸಣೆ ಕಡಿಮೆಗೊಳಿಸಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ ಎನ್ನುತ್ತಿದೆ: ಎಂ.ಬಿ.ಪಾಟೀಲ್ ಆರೋಪ

ವಾರ್ತಾಭಾರತಿವಾರ್ತಾಭಾರತಿ15 May 2021 3:21 PM IST
share
ಸರಕಾರ ತಪಾಸಣೆ ಕಡಿಮೆಗೊಳಿಸಿ ಸೋಂಕಿತರ ಸಂಖ್ಯೆ ಇಳಿಮುಖವಾಗಿದೆ ಎನ್ನುತ್ತಿದೆ: ಎಂ.ಬಿ.ಪಾಟೀಲ್ ಆರೋಪ

ಬೆಂಗಳೂರು, ಮೇ 15: ರಾಜ್ಯದಲ್ಲಿ ಕೊರೋನ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಸರಕಾರ ಮೌಖಿಕ ಆದೇಶದ ಮೂಲಕ ತಪಾಸಣೆಗಳನ್ನು ಕಡಿಮೆಗೊಳಿಸಲಾಗಿದೆ. ಕರ್ನಾಟಕದಲ್ಲಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಅಂಕಿ ಅಂಶಗಳ ತೋರಿಸುವ ಮೂಲಕ ರಾಜ್ಯದ ಜನತೆಯ ಆರೋಗ್ಯದ ಸ್ಥಿತಿಯನ್ನು ತೀರ ಗಂಭೀರವಾಗಿಸುವತ್ತ ಸರಕಾರದ ಮುನ್ನಡೆದಿದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಆರೋಪಿಸಿದ್ದಾರೆ. 

ಈ ಕುರಿತು ಹೇಳಿಕೆ ನೀಡಿರುವ ಅವರು ಕರ್ನಾಟಕದಲ್ಲಿ ರಾಜಧಾನಿ ಬೆಂಗಳೂರು ನಗರದಲ್ಲಿ ಅತೀ ಹೆಚ್ಚು ಪ್ರಕರಣಗಳು ದಾಖಲಾಗುತ್ತಿರುವುದರಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಕಳೆದ ವಾರದಿಂದ ತಪಾಸಣೆಗಳನ್ನು ಅತೀ ಕನಿಷ್ಠಗೊಳಿಸಲಾಗಿದೆ. ಇದರಿಂದ ಪಾಸಿಟಿವ್ ರೋಗಿಗಳ ಸಂಖ್ಯೆ ಸ್ವಾಭಾವಿಕವಾಗಿ ಇಳಿಮುಖವಾಗುತ್ತದೆ. ಇದೇ ಪ್ರಯೋಗವನ್ನು ರಾಜ್ಯಾದ್ಯಂತ ಮಾಡಲು ಹೊರಟಿರುವ ರಾಜ್ಯ ಸರಕಾರ, ಇಂದಿನಿಂದ ರಾಜ್ಯದ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ಕೇವಲ 10 ಆರ್.ಟಿ.ಪಿ.ಸಿ.ಆರ್ ತಪಾಸಣೆಗೆ ಸೀಮಿತಗೊಳಿಸಿ ಮಾತ್ರ ಮೌಖಿಕ ಆದೇಶ ಹೊರಡಿಸಿದೆ. ಉದಾಹರಣೆಗೆ ವಿಜಯಪುರ ಜಿಲ್ಲೆಯಲ್ಲಿ ಫೆಬ್ರವರಿಯಿಂದ ಇಲ್ಲಿಯವರಗೆ ಪ್ರತಿನಿತ್ಯ 4000 ತಪಾಸಣೆಗಳನ್ನು ಮಾಡಲಾಗುತ್ತಿತ್ತು, ಇದೀಗ ಜಿಲ್ಲೆಯಲ್ಲಿ 1660 ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಗಳಿಗೆ ಗರಿಷ್ಠ ಅವಕಾಶ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಕೂಡಾ ಪ್ರತಿನಿತ್ಯ 6000 ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಗಳನ್ನು 2500ಕ್ಕೆ ಇಳಿಸಲಾಗಿದೆ. ಇದರಿಂದ ಕೃತ್ರಿಮವಾಗಿ ರೋಗಿಗಳ ಸಂಖ್ಯೆ ಇಳಿಮುಖವಾಗಿದೆ ಎಂದು ತೋರಿಸುವ ಸರಕಾರ ನಿಜವಾದ ರೋಗಿಗಳ ಸಂಖ್ಯೆಯನ್ನು ಮುಚ್ಚಿಟ್ಟು ರೋಗಿಗಳಿಗೆ ಚಿಕಿತ್ಸೆ ಸೌಲಭ್ಯವನ್ನು ಒದಗಿಸದೇ ವಂಚನೆ ಮಾಡುತ್ತಿರುವುದು ಅತ್ಯಂತ ಅಮಾನವೀಯ ಕೃತ್ಯ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಮಹಾನಗರ, ನಗರ, ಪಟ್ಟಣಗಳಲ್ಲಿ ಹೆಚ್ಚಾಗಿದ್ದ ಕೊರೋನ ಗ್ರಾಮಾಂತರ ಪ್ರದೇಶಕ್ಕೂ ವ್ಯಾಪಿಸಿದ್ದು, ಅತೀ ಕಡಿಮೆ ಜನಸಾಂದ್ರತೆ ಹೊಂದಿರುವ ಮಲೆನಾಡಿನ ಹಳ್ಳಿಗಳಲ್ಲಿಯೂ ಇದು ವ್ಯಾಪಕವಾಗಿ ಹಬ್ಬುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದರ ಹರಡುವಿಕೆಯನ್ನು ಗಮನಿಸಿದರೆ ಈ ರೋಗದ ಭೀಕರತೆ ತಿಳಿಯುತ್ತದೆ. ಇಂತಹ ಸ್ಥಿತಿಯಲ್ಲಿ ಸರಕಾರ ಹೆಚ್ಚೆಚ್ಚು ಆರ್.ಟಿ.ಪಿ.ಸಿ.ಆರ್. ಟೆಸ್ಟ್ ಗಳನ್ನು ಮಾಡಿ, ಅಗತ್ಯವಿರುವ ರೋಗಿಗಳಿಗೆ ಚಿಕಿತ್ಸೆ ಸೌಲಭ್ಯ, ಔಷಧಿ ಒದಗಿಸಲು ಮುಂದಾಗಬೇಕು ಅದನ್ನು ಬಿಟ್ಟು ವಾಮ ಮಾರ್ಗದ ಮೂಲಕ ರೋಗಿಗಳ ಸಂಖ್ಯೆ ಇಳಿಕೆಯಗಿದೆ ಎಂದು ತೋರಿಸುವ ಮೂಲಕ ಮಾಡಿದೆ ಎಂದು ರಾಜ್ಯದ ಜನತೆಯನ್ನು ಮತ್ತಷ್ಟು ಪ್ರಪಾತಕ್ಕೆ ದೂಡುವ ಕಾರ್ಯ ಇದಾಗಿದೆ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X