Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೊರೋನ ಪ್ರಕರಣ ಇಳಿಕೆ ತೋರಿಸಲು ಪರೀಕ್ಷೆ...

ಕೊರೋನ ಪ್ರಕರಣ ಇಳಿಕೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್ ಆರೋಪ

''ರಾಜ್ಯಪಾಲರ ಆಡಳಿತ ಬರುವುದೇ ಉತ್ತಮ''

ವಾರ್ತಾಭಾರತಿವಾರ್ತಾಭಾರತಿ15 May 2021 3:36 PM IST
share
ಕೊರೋನ ಪ್ರಕರಣ ಇಳಿಕೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡಿದ್ದಾರೆ: ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು, ಮೇ 15: 'ರಾಜ್ಯದಲ್ಲಿ ಕೊರೋನ ಸೋಂಕು ಪ್ರಕರಣ ಸಂಖ್ಯೆ ಕಡಿಮೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡಿರುವುದು ಸರಿಯಲ್ಲ. ಇದು ಸರ್ಕಾರವೇ ಜನರನ್ನು ಹತ್ಯೆ ಮಾಡುವ ನಿರ್ಧಾರ. ಜನರ ಸಾವಿಗೆ ಸರ್ಕಾರವೇ ನೇರ ಕಾರಣವಾಗುತ್ತದೆ' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆರೋಪಿಸಿದ್ದಾರೆ.

ಶನಿವಾರ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, 'ಐಸಿಎಂಆರ್ ವರದಿ ಹೆಚ್ಚಿನ ಪ್ರಮಾಣದಲ್ಲಿ ಪರೀಕ್ಷೆ ನಡೆಸಬೇಕು ಎಂದು ಹೇಳಿದೆ. ಸರ್ಕಾರ ಶೇ.50 ರಷ್ಟು ಪರೀಕ್ಷೆ ಕಡಿಮೆ ಮಾಡಲು ಎಲ್ಲ ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಪರೀಕ್ಷೆ ಮಾಡಿದಷ್ಟು ಜನ ಜಾಗೃತರಾಗಿರುತ್ತಾರೆ. ಸೋಂಕಿನ ಪ್ರಕರಣ ಹೆಚ್ಚಾಗುತ್ತದೆ ಎಂದು ಪರೀಕ್ಷೆ ಪ್ರಮಾಣ ಕಡಿಮೆ ಮಾಡುವುದು ಸರಿಯಲ್ಲ. ಜನರನ್ನು ಸರ್ಕಾರವೇ ಹತ್ಯೆ ಮಾಡಿದಂತೆ ಆಗುತ್ತದೆ. ಹೀಗಾಗಿ ಸರ್ಕಾರ ಹೆಚ್ಚಿನ ಪರೀಕ್ಷೆ ನಡೆಸಬೇಕು. ಇದರಿಂದ ಸೋಂಕಿತರು ಆರಂಭದಲ್ಲೇ ಗುಣಪಡಿಸಿಕೊಳ್ಳಲು ನೆರವಾಗುತ್ತದೆ. ಡಿಸಿಎಂ ಅಶ್ವಥ್ ನಾರಾಯಣ್ ಅವರು ಜವಾಬ್ದಾರಿ ವಹಿಸಿಕೊಂಡ ನಂತರ ಈ ರೀತಿ ಆದೇಶ ನೀಡಲಾಗಿದೆ ಎಂದರು.

ಸರ್ಕಾರ ಜೀವ ಉಳಿಸಲು ಯಾವ ಕ್ರಮ ಬೇಕಾದರೂ ತೆಗೆದುಕೊಳ್ಳಲಿ. ನಾವು ಸಹಕಾರ ನೀಡುತ್ತೇವೆ. ಆದರೆ ಮಾಡಿದ ತಪ್ಪನ್ನು ಒಪ್ಪಿಕೊಳ್ಳದೇ ನಾವು ಮಾಡಿದ್ದೆ ಸರಿ ಎನ್ನುವುದಾದರೆ ನಾವು ಅದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ. ಸರ್ಕಾರದ ಕಾರ್ಯವೈಖರಿ ಬಗ್ಗೆ ನ್ಯಾಯಾಧೀಶರು ಏನೆಲ್ಲಾ ಹೇಳುತ್ತಿದ್ದಾರೆ, ಮಾಧ್ಯಮಗಳು ಏನು ವರದಿ ಮಾಡುತ್ತಿವೆ, ಜನ ಸಾಮಾನ್ಯರು ಏನು ಮಾತನಾಡುತ್ತಿದ್ದಾರೆ ಎಂಬುದನ್ನು ಸರಕಾರ ಗಮನಿಸಬೇಕು‌ ಎಂದು ಹೇಳಿದರು.

ಮಂತ್ರಿಗಳು ಈಗ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈ ಕೆಲಸ ಮಾಡಿ ಎಂದು ನಾನು ಕಳೆದ ತಿಂಗಳ 18ರಂದೇ ಹೇಳಿದ್ದೆ. ವಿರೋಧ ಪಕ್ಷದವರು ಹೇಳಿದ್ದನ್ನು ಮಾಡಲು ಈ ಸರ್ಕಾರ ಬೇಕಾ? ಇವರ ಕೈಯಲ್ಲಿ ಇದನ್ನು ನಿಭಾಯಿಸಲು ಸಾಧ್ಯವಿಲ್ಲ. ಇವರು ಮನೆಗೆ ಹೋಗಿ, ರಾಜ್ಯಪಾಲರ ಆಡಳಿತ ಬರುವುದೇ ಉತ್ತಮ ಎಂದು ತಿಳಿಸಿದರು.

ಶ್ರೀನಿವಾಸ್ ಬೆಂಬಲಕ್ಕೆ ಕೆಪಿಸಿಸಿ: ದೆಹಲಿ ಪೊಲೀಸರು ರಾಷ್ಟ್ರೀಯ ಯುವ ಕಾಂಗ್ರೆಸ್ ಕಚೇರಿಗೆ ನುಗ್ಗಿ, ಯುವ ಅಧ್ಯಕ್ಷರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂಬ ವಿಚಾರ ತಿಳಿದಿದೆ. ಶ್ರೀನಿವಾಸ್ ಅವರು ಯಾವುದೇ ರಾಜಕೀಯ ಹಿನ್ನೆಲೆ ಇಲ್ಲದೆ ಯುವ ಹೋರಾಟದ ಮೂಲಕ ಬೆಳೆದು ಬಂದವರು ಎಂಬುದನ್ನು ದೆಹಲಿ ಪೊಲೀಸರು ಹಾಗೂ ಕೇಂದ್ರ ಸರ್ಕಾರ ಅರಿಯಬೇಕು. ಅವರ ಸೇವೆಗೆ ಇಡೀ ದೇಶ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶ್ಲಾಘನೆ ವ್ಯಕ್ತವಾಗಿದೆ. ಕರ್ನಾಟಕದ ಮೂಲದ, ನನ್ನ ಆತ್ಮೀಯರಾದ ಶ್ರೀನಿವಾಸ್ ರಂತಹ ನಾಯಕರ ಬಗ್ಗೆ ನಮಗೆ ಹೆಮ್ಮೆ ಇದೆ. ಅವರ ನಾಯಕತ್ವ ಗುಣ, ಅವರ ಸೇವೆಗೆ ನಾನು ಸೆಲ್ಯೂಟ್ ಮಾಡುತ್ತೇನೆ. ಅವರು ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಈ ದೇಶಕ್ಕೆ ದೊಡ್ಡ ಆಸ್ತಿ ಎಂದರು.

ಕೇಂದ್ರ ಸರ್ಕಾರದ ಈ ನಡೆಯನ್ನು ನಾನು ಖಂಡಿಸುತ್ತೇನೆ. ಅವರು ಯುವಕರ ಆಂದೋಲನ ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಶ್ರೀನಿವಾಸ್ ಅವರು ರಾಜಕೀಯ ಕೆಲಸ ಮಾಡುತ್ತಿಲ್ಲ. ಬದಲಿಗೆ ದೇಶದ ಜನರ ಸೇವೆಗೆ ಶ್ರಮಿಸುತ್ತಿದ್ದಾರೆ. ಮಾನವೀಯ ಸೇವೆ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಈ ಸಮಯದಲ್ಲಿ ಮೋಸ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳದೇ, ಜನರ ಸೇವೆ ಮಾಡುತ್ತಿರುವವರನ್ನು ವಿಚಾರಣೆ ಮಾಡುತ್ತಿದೆ ಎಂದು ಟೀಕಿಸಿದರು.

ಎಲ್ಲ ಯುವಕರು ಶ್ರೀನಿವಾಸ್ ಅವರ ಪರ ನಿಲ್ಲಬೇಕು. ಅವರ ಪರಿಶ್ರಮ, ಅಪಾರ ಜನಸೇವೆಗೆ ಇಡೀ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಶ್ರೀನಿವಾಸ್ ಅವರ ಬೆನ್ನಿಗೆ ನಿಲ್ಲಲಿದೆ. ಶ್ರೀನಿವಾಸ್ ನೀವು ಯಾವುದೇ ಕಾರಣಕ್ಕೂ ಅಂಜಬೇಡಿ. ನಾವು ನಿಮ್ಮ ಜತೆಗಿದ್ದೇವೆ. ಇಂತಹ ಅಡೆತಡೆಗಳು ನಮಗೆ ಸಾಮಾನ್ಯ. ಎಂತಹ ಪರಿಸ್ಥಿತಿ ಬಂದರೂ ನಮ್ಮ ತಾಯ್ನಾಡಿನ ರಕ್ಷಣೆ ಮಾಡೋಣ ಎಂದು ಡಿಕೆಶಿ ಅಭಯ ನೀಡಿದರು.

ಶಿಕ್ಷಕರ ಸಾವಿಗೆ ಆಡಳಿತ ಹಾಗೂ ಸರ್ಕಾರವೇ ಹೊಣೆ:

ಚುನಾವಣಾ ಆಯೋಗ, ಸರ್ಕಾರ, ಎಲ್ಲ ರಾಜಕೀಯ ಪಕ್ಷಗಳು ಜಾಗ್ರತೆ ವಹಿಸಬೇಕಿತ್ತು. ಚುನಾವಣೆ ಮುಂದೂಡಬೇಕು ಎಂಬ ಸಲಹೆ ಇತ್ತಾದರೂ ಚುನಾವಣೆ ನಡೆಸುವುದು ಆಯೋಗದ ತೀರ್ಮಾನವಾಗಿತ್ತು. ನನ್ನನ್ನೂ ಸೇರಿ ನಾವು ರಾಜಕೀಯ ಪಕ್ಷದವರು ಸುರಕ್ಷಿತ ಅಂತರ ಕಾಪಾಡಲು ಸಾಧ್ಯವಾಗಲಿಲ್ಲ. ಇಂದು ಬಸವಕಲ್ಯಾಣದಲ್ಲಿ 42 ಜನ ಶಿಕ್ಷಕರು ಕೊರೋನದಿಂದ ಮೃತಪಟ್ಟಿರುವುದು ನಮ್ಮೆಲ್ಲರ ಅಪರಾಧ. ನಾವು ಜನ ಸಂಘಟನೆ, ಮತ ಪಡೆಯಬೇಕು ಎಂಬ ಅಮಲಿನಲ್ಲಿದ್ದೆವು. ಆದರೆ ಸರ್ಕಾರ ಚುನಾವಣೆ ಕೆಲಸ ಮಾಡಿದ ನಮ್ಮ ಶಿಕ್ಷಕ ವೃಂದಕ್ಕೆ ರಕ್ಷಣೆ ನೀಡಬಹುದಾಗಿತ್ತು ಎಂದರು.

ಇದಕ್ಕೆ ಚುನಾವಣೆ ನಡೆಸಿದ ಆಡಳಿತವೇ ಹೊಣೆ. ಸೋಂಕು ಹೆಚ್ಚುತ್ತಿದೆ, ಹೀಗಾಗಿ ಚುನಾವಣೆ ಮುಂದೂಡಿ ಎಂದು ಸರ್ಕಾರ ಹೇಳಿದ್ದರೆ, ಆಯೋಗ ಚುನಾವಣೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಕೆಲವರಿಗೆ ಆತುರವಾಗಿ ಚುನಾವಣೆ ಮಾಡಬೇಕಿತ್ತು. ಅದಕ್ಕೆ ಶಿಕ್ಷಕರನ್ನು ಬಲಿ ಕೊಟ್ಟಿದ್ದಾರೆ ಎಂದು ಶಿವಕುಮಾರ್ ಆರೋಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X