Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಲಾಕ್‍ಡೌನ್ ವಿಸ್ತರಣೆ ಬಗ್ಗೆ...

ಲಾಕ್‍ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ನಿರ್ಧಾರ ಮಾಡುತ್ತಾರೆ: ಬಸವರಾಜ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ15 May 2021 6:26 PM IST
share
ಲಾಕ್‍ಡೌನ್ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ನಿರ್ಧಾರ ಮಾಡುತ್ತಾರೆ: ಬಸವರಾಜ ಬೊಮ್ಮಾಯಿ

ಬೆಂಗಳೂರು, ಮೇ 15: ಲಾಕ್‍ಡೌನ್ ಸಂದರ್ಭದಲ್ಲಿ ಪ್ರತಿದಿನ ಕರ್ತವ್ಯ ನಿರತ 1000 ಪೊಲೀಸ್ ಸಿಬ್ಬಂದಿ ಸೇರಿದಂತೆ ಆಹಾರದ ಅಗತ್ಯ ಇರುವವರಿಗೆ ಮಧ್ಯಾಹ್ನದ ಊಟ ವಿತರಿಸುವ ಇಸ್ಕಾನ್ ಸಂಸ್ಥೆಯ ಅಕ್ಷಯ ಪಾತ್ರೆ ಯೋಜನೆಗೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ಶನಿವಾರ ನಗರದ ಕೆ.ಆರ್.ಮಾರುಕಟ್ಟೆಯ ಬಳಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಆಹಾರದ ಪೊಟ್ಟಣಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಲಾಕ್‍ಡೌನ್ ಸಂದರ್ಭದಲ್ಲಿ ಯಾರೂ ಆಹಾರದ ಸಮಸ್ಯೆ ಎದುರಿಸಬಾರದು. ಈ ಹಿನ್ನೆಲೆಯಲ್ಲಿ ಕಳೆದ ಬಾರಿಯೂ ನಮ್ಮ ಜೊತೆಗೆ ದಾಸೋಹದ ಕೆಲಸದಲ್ಲಿ ಇಸ್ಕಾನ್ ಸಂಸ್ಥೆ ಕೈ ಜೋಡಿಸಿತ್ತು. ಈ ಬಾರಿಯೂ ಅವರ ಸಹಕಾರಕ್ಕೆ ನಾನು ಮನವಿ ಮಾಡಿದೆ. ಅದರ ಪ್ರತಿಫಲವಾಗಿ ಇಂದು ಪೊಲೀಸ್ ಸಿಬ್ಬಂದಿ ಸೇರಿದಂತೆ ಊಟದ ಅವಶ್ಯಕತೆಯಿರುವವರಿಗೆ ಇಸ್ಕಾನ್ ಸಂಸ್ಥೆ ಶುಚಿ ರುಚಿಯಾಗಿರುವ ಊಟವನ್ನು ಮಧ್ಯಾಹ್ನ ವಿತರಿಸುತ್ತಿದೆ ಎಂದು ಅವರು ಹೇಳಿದರು.

ಲಾಕ್‍ಡೌನ್ ಬಗ್ಗೆ ಸಿಎಂ ನಿರ್ಧಾರ: ಲಾಕ್‍ಡೌನ್ ವಿಸ್ತರಣೆ ವಿಷಯ ಕುರಿತಂತೆ ಇದುವರೆಗೆ ಅಧಿಕೃತವಾಗಿ ಸರಕಾರದ ಮಟ್ಟದಲ್ಲಿ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರೊಂದಿಗೆ ಚರ್ಚೆ ನಡೆಸಲಿದ್ದಾರೆ. ಆ ಸಂದರ್ಭದಲ್ಲಿನ ಪರಿಸ್ಥಿತಿ ಹಾಗೂ ಕೋವಿಡ್ ಅಂಕಿ ಅಂಶಗಳನ್ನು ಪರಿಶೀಲಿಸಲಿದ್ದಾರೆ. ಅದಾದ ಬಳಿಕ ಅಂತಿಮ ನಿರ್ಧಾರವನ್ನು ಮುಖ್ಯಮಂತ್ರಿ ಕೈಗೊಳ್ಳುತ್ತಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಪರೀಕ್ಷೆ ಕಡಿಮೆ ಮಾಡಿಲ್ಲ: ಕೋವಿಡ್ ಆರ್‍ಟಿಪಿಸಿಆರ್ ಪರೀಕ್ಷಾ ಪ್ರಮಾಣವನ್ನು ಕಡಿಮೆ ಮಾಡಿಲ್ಲ. ಈ ಹಿಂದೆ ಸಾರ್ವಜನಿಕ ಸ್ಥಳಗಳಾದ ರೈಲ್ವೆ ಸ್ಟೇಷನ್, ಬಸ್ ನಿಲ್ದಾಣ ಸೇರಿದಂತೆ  ಜನನಿಬಿಡ ಪ್ರದೇಶ ಗಳಲ್ಲಿ ಟೆಸ್ಟಿಂಗ್ ನಡೆಯುತ್ತಿತ್ತು. ಆದರೆ ಈಗ ಲಾಕ್‍ಡೌನ್ ಜಾರಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ನಡೆಯುತ್ತಿದ್ದ ಟೆಸ್ಟಿಂಗ್ ನಿಂತಿದೆ. ಹೀಗಾಗಿ ಟೆಸ್ಟಿಂಗ್ ಸಂಖ್ಯೆ ಕಡಿಮೆಯಾಗಿದೆ. ಆದರೆ ಸೋಂಕಿತರ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರನ್ನು ನಾವು ಕಡ್ಡಾಯವಾಗಿ ಆರ್‍ಟಿಪಿಸಿಆರ್ ತಪಾಸಣೆಗೆ ಒಳಪಡಿಸುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಅಕ್ಷಯ ಪಾತ್ರೆ ಪ್ರತಿಷ್ಠಾನದ ಅಧ್ಯಕ್ಷ ಮಧು ಪಂಡಿತ್ ದಾಸ್, ಚಿಕ್ಕಪೇಟೆ ಕ್ಷೇತ್ರದ ಶಾಸಕ ಉದಯ ಗರುಡಾಚಾರ್, ರಾಜ್ಯ ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X