Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಪಿಸಿಸಿಯಿಂದ ಕೋವಿಡ್ ಲಸಿಕೆ ಯೋಜನೆ:...

ಕೆಪಿಸಿಸಿಯಿಂದ ಕೋವಿಡ್ ಲಸಿಕೆ ಯೋಜನೆ: ಅನುಮತಿ ಕೋರಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ವಾರ್ತಾಭಾರತಿವಾರ್ತಾಭಾರತಿ15 May 2021 7:46 PM IST
share
ಕೆಪಿಸಿಸಿಯಿಂದ ಕೋವಿಡ್ ಲಸಿಕೆ ಯೋಜನೆ: ಅನುಮತಿ ಕೋರಿ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು, ಮೇ 15: ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಲೇ ಹೋಗುತ್ತಿದೆ. ಇದು ಸದ್ಯಕ್ಕೆ ನಿಯಂತ್ರಣಕ್ಕೆ ಬರುವ ಯಾವ ಲಕ್ಷಣವೂ ಕಾಣುತ್ತಿಲ್ಲ. ಕೋವಿಡ್ ಅನ್ನು ನಿಯಂತ್ರಿಸುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರಗಳ ಪ್ರಯತ್ನಗಳು ಏನೇನೂ ಸಾಲವು. ಲಸಿಕೆ ವಿಚಾರದಲ್ಲೂ ಕೇಂದ್ರ ಸರಕಾರ ಸಂಪೂರ್ಣ ಯಾಮಾರಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಪತ್ರ ಬರೆದಿರುವ ಅವರು, ನಮ್ಮ ಪಕ್ಷದ ಮೇಲ್ಮನೆ ಮತ್ತು ಕೆಳಮನೆಯನ್ನು ಪ್ರತಿನಿಧಿಸುತ್ತಿರುವ ಶಾಸಕರು, ಸಂಸದರು ಮತ್ತು ರಾಜ್ಯಸಭಾ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆಂದು ನೀಡಲಾಗುವ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ 1 ಕೋಟಿ ರೂಪಾಯಿಗಳನ್ನು ಕೋವಿಡ್ ಲಸಿಕೆ ಖರೀದಿಸಿ ಜನರಿಗೆ ನೀಡಲು ಉದ್ದೇಶಿಸಿದ್ದೇವೆ ಎಂದು ತಿಳಿಸಿದ್ದಾರೆ.

ಇದರಿಂದ ಸುಮಾರು 90 ಕೋಟಿ ರೂ.ಗಳಷ್ಟು ಸಂಗ್ರಹವಾಗುತ್ತದೆ. ಇನ್ನುಳಿದ ಹತ್ತು ಕೋಟಿ ರೂ.ಗಳನ್ನು ಪಕ್ಷದ ವತಿಯಿಂದ ನೀಡಿ ಒಟ್ಟು 100 ಕೋಟಿ ರೂ.ಗಳಲ್ಲಿ ಲಸಿಕೆ ಖರೀದಿಸಿ ಐಸಿಎಂಆರ್ ನಿಗದಿಪಡಿಸಿರುವ ನಿಯಮಗಳಂತೆ ಲಸಿಕೆ ನೀಡುತ್ತೇವೆ. ಆದುದರಿಂದ, ವಿಳಂಬಕ್ಕೆ ಅವಕಾಶ ನೀಡದೆ ಈ ಯೋಜನೆಗೆ ಅನುಮೋದನೆ ನೀಡಬೇಕು ಮತ್ತು ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೆ ಅನುದಾನವನ್ನು ಬಿಡುಗಡೆ ಮಾಡಬೇಕೆಂದು ಸಿದ್ದರಾಮಯ್ಯ ಕೋರಿದ್ದಾರೆ.

ನೀವು(ರಾಜ್ಯ ಸರಕಾರ) ತಪ್ಪು ಮಾಡಿದ್ದೀರಿ ಎಂದರೆ ಬಿಜೆಪಿಯ ಹಲವು ಮುಖಂಡರು ಜನರನ್ನು, ವಿರೋಧ ಪಕ್ಷಗಳನ್ನು, ಮಾಧ್ಯಮಗಳನ್ನು ನಿಂದಿಸುತ್ತಾ ಕೂತಿದ್ದಾರೆ. ಅವರಿಗೆ ಕೋವಿಡ್ ನಿಗ್ರಹಕ್ಕಿಂತ ಜನರಿಗೆ ಸುಳ್ಳು ಹೇಳುವ ಪ್ರಚಾರ ಮಾಡುವುದೇ ತುರ್ತು ಆದ್ಯತೆಯಾಗಿದೆ. ಕುಂಭಮೇಳವನ್ನು ನಡೆಸಲು ಅವಕಾಶ ಕೊಟ್ಟವರಾರು? ಅಲ್ಲಿ ಲಕ್ಷಾಂತರ ಜನ ಸೇರಿದಾಗ ಅದನ್ನು ನೋಡಿ ದೇಶದ ಪ್ರಜ್ಞಾವಂತ ಜನರು ಭಯಪಡುತ್ತಿದ್ದಾಗ ಬಿಜೆಪಿಯ ಹಿರಿಯ ನಾಯಕರು ಉಡಾಫೆ ಮಾತನಾಡಿದರು ಎಂದು ಅವರು ಟೀಕಿಸಿದ್ದಾರೆ.

ಪಶ್ಚಿಮ ಬಂಗಾಳದ ಚುನಾವಣಾ ರ್‍ಯಾಲಿಗಳಲ್ಲಿ ಹೆಚ್ಚು ಜನ ಸೇರಿದಾಗ ಪ್ರಧಾನಮಂತ್ರಿಗಳೇ ಸಂಭ್ರಮ ಪಟ್ಟು ಮಾತನಾಡಿದರು. ಜನರನ್ನು ಸೇರಿಸಿ ನಡೆಸುತ್ತಿದ್ದ ರ್‍ಯಾಲಿಗಳ ಕುರಿತು ನ್ಯಾಯಾಲಯಗಳು ಛೀಮಾರಿ ಹಾಕಿದವು. ಇದನ್ನೆಲ್ಲ ಪ್ರಶ್ನಿಸಿದರೆ ಈಗ ಸರಕಾರಗಳಲ್ಲಿರುವ ಜನರು ನಮ್ಮನ್ನು ಟೀಕಿಸಲು ಮುಂದಾಗಿದ್ದಾರೆ ಎಂದು ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಕೊರೋನ ನಿಯಂತ್ರಿಸಬೇಕಾದರೆ ಲಸಿಕೆಯೊಂದೇ ಪರಿಹಾರ ಎಂದು ನಾವು ಆರಂಭದಿಂದಲೂ ಹೇಳುತ್ತಾ ಬಂದಿದ್ದೇವೆ. ಆದರೆ ಲಸಿಕೆಗಳ ಪರಿಣಾಮಗಳ ಕುರಿತು, ಸುರಕ್ಷತೆಯ ಕುರಿತು ಮಾರ್ಗಸೂಚಿಗಳನ್ನು ಹೊರಡಿಸಬೇಕು ಎಂದೂ ಒತ್ತಾಯಿಸುತ್ತಾ ಬಂದಿದ್ದೇವೆ. ಲಸಿಕೆ ಹಾಕಬೇಡಿ ಎಂದು ನಾವುಗಳಾರು ಇದುವರೆಗೂ ಹೇಳಿಲ್ಲ. ಆದರೆ ಕೇಂದ್ರ ಸರಕಾರ ಮಾಡಿದ್ದೇನು? ಎಂದು ಅವರು ಪ್ರಶ್ನಿಸಿದ್ದಾರೆ.

ವಿರೋಧ ಪಕ್ಷಗಳನ್ನು ಟೀಕಿಸುವ ಮುಖಂಡರು ನಾಲ್ಕೈದು ತಿಂಗಳ ಹಿಂದಕ್ಕೆ ಹೋಗಿ ನೋಡಿ. ಸ್ವತಃ ಪ್ರಧಾನಮಂತ್ರಿಗಳೇ, ನಾವು ಕೊರೋನ ವಿರುದ್ಧ ಗೆದ್ದು ಬಿಟ್ಟಿದ್ದೇವೆ ಎಂದು ಹೇಳಿದ್ದರು. ಆರೋಗ್ಯ ಮಂತ್ರಿಗಳು ಹೇಳಿದ್ದರು ನಾವು ಈ ಕತ್ತಲ ಸುರಂಗದ ಕೊನೆಯನ್ನು ತಲುಪಿಬಿಟ್ಟಿದ್ದೇವೆ, ಇನ್ನೇನು ಬೆಳಕಿನ ರಾಶಿ ಸಿಕ್ಕಿ ಬಿಡುತ್ತದೆ ಅಂದಿದ್ದರು. ಈ ಮಾತುಗಳನ್ನು ಪಾಪ ಜನ ನಂಬಿದರು. ಉತ್ಸಾಹದಿಂದ ದುಡಿಯುವ ಚಟುವಟಿಕೆಗಳಲ್ಲಿ ತೊಡಗಿಕೊಂಡರು ಎಂದು ಅವರು ತಿಳಿಸಿದ್ದಾರೆ.

ಆಗಲೇ ಕೊರೋನದ ಎರಡನೇ ಅಲೆ ಬಂದು ಅಪ್ಪಳಿಸಿತು. ಅಸಂಖ್ಯಾತ ಜನರು ಕೊರೋನಕ್ಕೆ ಬಲಿಯಾದರು. ಬಲಿಯಾದ ಜನರನ್ನು ಆಡಳಿತ ಮಾಡುತ್ತಿರುವ ಸರಕಾರಗಳೇ ಕೊಲೆ ಮಾಡಿವೆ ಎಂದರೆ ತಪ್ಪೇನು? ಆಕ್ಸಿಜನ್ ಇಲ್ಲದೆ, ಔಷಧ ಇಲ್ಲದೆ, ಬೆಡ್‍ಗಳಿಲ್ಲದೆ ಮರಣ ಹೊಂದಿದರೆ ಅದರ ಜವಾಬ್ದಾರಿ ಯಾರು ಹೊರಬೇಕು? ತಜ್ಞರು ನೀಡಿದ ಎಚ್ಚರಿಕೆ, ಸಲಹೆಗಳನ್ನು ಕಸದ ಬುಟ್ಟಿಗೆ ಎಸೆದು ಜನರನ್ನು ಕೊಂದವರೇ ಹೊರಬೇಕಲ್ಲವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸರಕಾರದ ಸ್ವಯಂಕೃತ ಅಪರಾಧದ ಈ ಕಗ್ಗತ್ತಲ ಕಾಲದಲ್ಲಿ, ಅರಾಜಕ ಆಡಳಿತದಲ್ಲಿ ಜವಾಬ್ದಾರಿಯುತ ಪ್ರತಿ ಪಕ್ಷವಾದ ನಾವು ಸುಮ್ಮನೇ ಕೈಕಟ್ಟಿ ಕೂರಲಾಗದು. ಆದುದರಿಂದ, ನಮ್ಮ ಪಕ್ಷದ ಮೇಲ್ಮನೆ ಮತ್ತು ಕೆಳಮನೆಯನ್ನು ಪ್ರತಿನಿಧಿಸುತ್ತಿರುವ ಶಾಸಕರು, ಸಂಸದರು ಮತ್ತು ರಾಜ್ಯಸಭಾ ಸದಸ್ಯರ ಕ್ಷೇತ್ರಗಳ ಅಭಿವೃದ್ಧಿಗೆಂದು ನೀಡಲಾಗುವ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಲ್ಲಿ ತಲಾ 1 ಕೋಟಿ ರೂಪಾಯಿ ಹಾಗೂ ಪಕ್ಷದ ವತಿಯಿಂದ 10 ಕೋಟಿ ರೂ.ಗಳನ್ನು ನೀಡಿ ಲಸಿಕೆ ಖರೀದಿಸಿ ಜನರಿಗೆ ನೀಡಲು ಉದ್ದೇಶಿಸಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದರ ಹೊಣೆ ಯಾರದು?

ಕಳೆದ ವರ್ಷದ ಜುಲೈ, ಆಗಸ್ಟ್ ತಿಂಗಳಲ್ಲೇ ಅಮೇರಿಕ 80 ಕೋಟಿ, ಯುರೋಪಿಯನ್ ಒಕ್ಕೂಟ 120 ಕೋಟಿ, ಬ್ರೆಜಿಲ್ 9 ಕೋಟಿ ಲಸಿಕೆಗಳಿಗೆ ಆದೇಶ ನೀಡಿದ್ದವು. ಆದರೆ ನಮ್ಮ ದೇಶ 2021 ರ ಜನವರಿಯಲ್ಲಿ ಆದೇಶ ನೀಡಿದ್ದು ಕೇವಲ 1.65 ಲಕ್ಷ ಡೋಸ್‍ಗಳಿಗೆ ಮಾತ್ರ. ಇದರ ಹೊಣೆಯನ್ನು ಯಾರು ಹೊರಬೇಕು? ವಿರೋಧ ಪಕ್ಷಗಳೇ? ನ್ಯಾಯಾಲಯಗಳೇ? ಮಾಧ್ಯಮಗಳೇ? ಇಲ್ಲ ಜನರೇ? ಆಳುವ ಬಿಜೆಪಿಯ ಮುಖಂಡರ ನಾಲಿಗೆಗೆ ಹೇಗೆ ಇಷ್ಟೊಂದು ಸುಳ್ಳು ಹೇಳಲು ಸಾಧ್ಯ?

-ಸಿದ್ದರಾಮಯ್ಯ, ವಿರೋಧ ಪಕ್ಷ ನಾಯಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X